ಸಾರಾಂಶ
ರಾಜ್ಯ ಮಟ್ಟದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಸರ್ಕಾರಿ ನೌಕರರನ್ನು ಅಭಿನಂದಿಸಲಾಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ರಾಜ್ಯ ಸರ್ಕಾರಿ ನೌಕರರ ಸಂಘ ದ.ಕ. ಜಿಲ್ಲೆ ಇವರ ವತಿಯಿಂದ 2023-24ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಗರದ ನಂದಿನಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಡಾ. ನೆಲ್ಕುದ್ರಿ ಸದಾನಂದ ಉದ್ಘಾಟಿಸಿ, ಸರ್ಕಾರಿ ನೌಕರರ ಮಕ್ಕಳು ಅತ್ಯಧಿಕ ಪ್ರಮಾಣದಲ್ಲಿ ಅಂಕಗಳನ್ನು ಗಳಿಸಿ ಓದಿನಲ್ಲಿ ಮುಂದೆ ಇರುವುದು ಸಂತಸದ ವಿಷಯ. ಮುಂದೆ ಇದೆ ರೀತಿ ಮಕ್ಕಳು ಉತ್ತಮ ಸಂಸ್ಕಾರವನ್ನು ಕಲಿತು ಉತ್ತಮ ಪ್ರಜೆಗಳಾಗಬೇಕು. ನೈತಿಕವಾಗಿ ಕುಟುಂಬದ ಜೊತೆಗೆ ಬೆರೆತು ಎಲ್ಲರೊಂದಿಗೂ ಹೊಂದಿಕೊಂಡು ಹೋಗಬೇಕು. ಸಮಾಜದಲ್ಲಿ ಸತ್ಪ್ರಜೆಗಳಾಗಬೇಕು ಎಂದು ಕಿವಿ ಮಾತು ಹೇಳಿದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಇದೇ ಸಂದರ್ಭ ರಾಜ್ಯ ಮಟ್ಟದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಸರ್ಕಾರಿ ನೌಕರರನ್ನು ಅಭಿನಂದಿಸಲಾಯಿತು.ರಾಜ್ಯ ಉಪಾಧ್ಯಕ್ಷ ಸಿದ್ದೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಟಿ., ಜಿಲ್ಲಾಧ್ಯಕ್ಷ ಎಚ್. ಗಣೇಶ್ ರಾವ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಪಿ.ಕೆ. ಕೃಷ್ಣ, ಖಜಾಂಜಿ ನವೀನ್ ಕುಮಾರ್ ಮತ್ತಿತರರಿದ್ದರು.ಸರ್ಕಾರಿ ನೌಕರರಿಗೆ ಒತ್ತಡ ನಿರ್ವಹಣೆ ಬಗ್ಗೆ ಡಾ. ಬಿಂದು ಉದಯಕುಮಾರ್ ಅವರಿಂದ ಕಾರ್ಯಗಾರ ನಡೆಯಿತು.