ಕನ್ನಡಪ್ರಭ ವಾರ್ತೆ ವಿಜಯಪುರ
ಕರ್ನಾಟಕ ರಾಜ್ಯ ಕಿತ್ತೂರ ರಾಣಿ ಚನ್ನಮ್ಮ ಉತ್ಸವ ಪಂಚಮಸಾಲಿ ಸಂಘ ಹಾಗೂ ಕಿತ್ತೂರ ರಾಣಿ ಚನ್ನಮ್ಮ ಸಂಸ್ಥೆ ಸಹಯೋಗದಲ್ಲಿ ಮೇ 31ರಂದು ಬೆಳಗ್ಗೆ 10 ಗಂಟೆಗೆ ನಗರದ ಆಶ್ರಮ ರಸ್ತೆಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಲ್ಯಾಣ ಮಂಟಪದಲ್ಲಿ ಪಂಚಮಸಾಲಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಕಿತ್ತೂರ ರಾಣಿ ಚೆನ್ನಮ್ಮ ಉತ್ಸವ ಪಂಚಮಸಾಲಿ ಸಂಘದ ಅಧ್ಯಕ್ಷ ಡಾ.ಸುರೇಶ ಬಿರಾದಾರ ಹೇಳಿದರು.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2026-27ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದ್ದು, ಸಮಾಜದ 350ಕ್ಕೂ ಅಧಿಕ ಪ್ರತಿಭಾವಂತ ವಿದ್ಯಾರ್ಥಿಗಳು/ವಿದ್ಯಾರ್ಥಿನಿಯರಿಗೆ ಸನ್ಮಾನಿಸಿ ಗೌರವಿಸಲಾಗುವುದು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯರು ವಹಿಸಲಿದ್ದು, ಲೋಕಾಯುಕ್ತ ಡಿವೈಎಸ್‌ಪಿ ಡಾ.ಬಸವರಾಜ ಯಲಿಗಾರ ಉದ್ಘಾಟನೆ ನೆರವೇರಿಸಲಿದ್ದಾರೆ. ಬುರಣಾಪುರ ಆರೂಢಾಶ್ರಮದ ಯೊಗೇಶ್ವರಿ ಮಾತಾಜಿ ಸಾನ್ನಿಧ್ಯ ವಹಿಸಲಿದ್ದು, ಸಮಾಜದ ಹಿರಿಯರಾದ ವಿ.ಎನ್.ಬಿರಾದಾರ ಅಧ್ಯಕ್ಷತೆ ವಹಿಸಲಿದ್ದಾರೆ. ಇಷ್ಟೆಯಲ್ಲದೆ ಸಮಾಜದ ಪ್ರತಿಭಾನ್ವಿತ ಸರ್ಕಾರಿ ಅಧಿಕಾರಿಗಳನ್ನು ಸಹ ಆಹ್ವಾನಿಸಲಾಗಿದೆ. ಜತೆಗೆ ಮಕ್ಕಳಿಗೆ ಪ್ರೋತ್ಸಾಹಿಸುವ ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಸಮಾಜದ ಯುವಕರು, ಯುವತಿಯರು, ಮಹಿಳೆಯರು, ಮುಖಂಡರು ಸೇರಿದಂತೆ ಸಮಸ್ತ ಜಿಲ್ಲಾ ಪಂಚಮಸಾಲಿ ಸಮಾಜದವರು ಭಾಗವಹಿಸಬೇಕು ಎಂದು ಡಾ.ಸುರೇಶ ಬಿರಾದಾರ ವಿನಂತಿಸಿದರು.ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಶರಣು ಆಲೂರ, ಬಿ.ಎಸ್.ಬಿರಾದಾರ, ಹನುಮಂತ ಸಾರವಾಡ, ರಾಜು ಕಳಸಗೊಂಡ, ವೀರಣ್ಣ ಜುಗತಿ, ವೀರಭದ್ರಪ್ಪ ಹಾಲಕೋಟಿ, ಅಶೋಕ ಬಿರಾದಾರ, ಅಶೋಕಗೌಡ ಪಾಟೀಲ, ಮುತ್ತುರಾಜ ಜಂಗಮಶೆಟ್ಟಿ ಇದ್ದರು.