ಸಾರಾಂಶ
ಕನ್ನಡಪ್ರಭ ವಾರ್ತೆ ರಾಮದುರ್ಗ
ರಾಮದುರ್ಗ ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರವು ಕಾರ್ಯಕ್ರಮವು ಜು.20 ರಂದು ವಿಶ್ವೇಶ್ವರಯ್ಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಸಮಾಜದ ಅಧ್ಯಕ್ಷ ಸಿ.ಬಿ.ಪಾಟೀಲ ಹೇಳಿದರು.ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 3 ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು, ಕಳೆದೆರಡು ವರ್ಷಗಳಿಂದ 2ಎ ಮೀಸಲಾತಿ ಹೋರಾಟದಲ್ಲಿ ಸಕ್ರಿಯವಾಗಿದ್ದರಿಂದ ಪ್ರತಿಭಾ ಪುರಸ್ಕಾರ ನಡೆದಿರಲಿಲ್ಲ. ಈ ಸಾರಿ ಎಲ್ಲ ಮಕ್ಕಳನ್ನು ಪ್ರೇರೆಪಿಸಲು ಪ್ರತಿಭಾ ಪುರಸ್ಕಾರ ನಡೆಸಲಾಗುತ್ತಿದೆ. ಸಮಾಜದ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ನಿಂಗಪ್ಪ ಪಿರೋಜಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.ಸಮಾಜದ ಮಕ್ಕಳು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ. 90 ರಷ್ಟು ಅಂಕ ಗಳಿಸಿದವರಿಗೆ ಪ್ರತಿಭಾ ಪುರಸ್ಕಾರದಲ್ಲಿ ಸತ್ಕಾರ ಮಾಡಲಾಗುವುದು. ಇದಲ್ಲದೇ ಉನ್ನತ ವ್ಯಾಸಂಗ ಮತ್ತು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನೂ ಇಲ್ಲಿ ಸತ್ಕರಿಸಲಾಗುವುದು ಎಂದರು.ಗೋಷ್ಠಿಯಲ್ಲಿ ನಿಂಗಪ್ಪ ದಂಡಿನದುರ್ಗಿ, ಬಾಳಪ್ಪ ರಡರಟ್ಟಿ, ವೈ.ಎಚ್.ಪಾಟೀಲ, ಬಿ.ಎಫ್.ಬಸಿಡೋಣಿ, ಜಿ.ವಿ.ನಾಡಗೌಡರ ಇತರರು ಇದ್ದರು.ಪ್ರತಿಭಾ ಪುರಸ್ಕಾರಕ್ಕೆ ಒಳಪಡುವ ಮಕ್ಕಳು ಜು.17 ರೊಳಗಾಗಿ ತಮ್ಮ ಅಂಕಪಟ್ಟಿ ಮತ್ತು ಆಧಾರ್ ಝರಾಕ್ಸ್ ಪ್ರತಿಯೊಂದಿಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಮಾಹಿತಿಗಾಗಿ ಮೊ.9448693150, ಮೊ.9986376774, ಮೊ.9980149264ಗೆ ಸಂಪರ್ಕಿಸಬಹುದಾಗಿದೆ.
-ಸಿ.ಬಿ.ಪಾಟೀಲ, ಲಿಂಗಾಯತ ಪಂಚಮಸಾಲಿ ತಾಲೂಕು ಅಧ್ಯಕ್ಷರು.