ಸಾರಾಂಶ
ತಿಪಟೂರು: ಕಾಡುಗೊಲ್ಲ ಸಮಾಜದ ಮಕ್ಕಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ಸಲುವಾಗಿ ರಾಜ್ಯ ಕಾಡುಗೊಲ್ಲರ ಸಂಘ ತಾಲೂಕು ಘಟಕದ ವತಿಯಿಂದ ಮೂರನೇ ವರ್ಷದ ಪ್ರತಿಭಾ ಪುರಸ್ಕಾರವನ್ನು ಸೆ.29 ರ ಭಾನುವಾರ ಬೆಳಗ್ಗೆ 11.30ಕ್ಕೆ ನಗರದ ರೋಟರಿ ಭವನದಲ್ಲಿ ಆಯೋಜಿಸಲಾಗಿದೆ ಎಂದು ರಾಜ್ಯ ಕಾಡುಗೊಲ್ಲರ ಸಂಘದ ತಾಲೂಕು ಅಧ್ಯಕ್ಷ ಬಾಲರಾಜು ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಮ್ಮ ಸಮಾಜದಿಂದ ಆಯೋಜಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.75ರಷ್ಟು ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಲಾಗುತ್ತಿದೆ ಎಂದು ಹೇಳಿದರು.ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಶಾಸಕ ಕೆ.ಷಡಕ್ಷರಿ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಬಿ.ಸಿ.ನಾಗೇಶ್, ಸಮಾಜ ಸೇವಕ ಲೋಕೇಶ್ವರ, ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್, ತಾ.ಪಂ ಮಾಜಿ ಅಧ್ಯಕ್ಷ ಶಂಕರಪ್ಪ, ನೇತ್ರಾಧಿಕಾರಿ ಯುವರಾಜ್, ಕುಮಾರ್ ಆಸ್ಪತ್ರೆಯ ಡಾ.ಶ್ರೀಧರ್ ಸೇರಿದಂತೆ ರಾಜಕೀಯ ಮುಖಂಡರು, ಸಮಾಜದ ಬಂಧುಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ಸಂಘದ ಸಂಘಟನಾ ಕಾರ್ಯದರ್ಶಿ ಬಿ.ರವೀಂದ್ರ ಜಕ್ಕನಹಳ್ಳಿ, ಗೌರವಾಧ್ಯಕ್ಷ ಚಂದ್ರಪ್ಪ, ಪದಾಧಿಕಾರಿಗಳಾದ ಜಯಣ್ಣ, ಶಶಿಧರ್, ದಿನೇಶ್, ಶಿವಕುಮಾರ್, ಶಿವಶಂಕರ್, ಕೆಂಪರಾಜ್, ಪರಮೇಶ್, ಜಗದೀಶ್, ಪ್ರಭು ಮತ್ತಿತರರಿದ್ದರು.