ಸಾರಾಂಶ
ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 2023-24ರ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಗೋಕಾಕ ಜೆ.ಸಿ.ಐ ಸಂಸ್ಥೆಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜೂ.16ರಂದು ಗೋಕಾಕ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೆ.ಸಿ.ಐ ಭಾರತ ಸಂಸ್ಥೆಯ ಸಂಯೋಜಕ ವಿಷ್ಟು ಲಾತೂರ ಹೇಳಿದರು.
ಕನ್ನಡಪ್ರಭ ವಾರ್ತೆ ಮೂಡಲಗಿ
ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 2023-24ರ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಗೋಕಾಕ ಜೆ.ಸಿ.ಐ ಸಂಸ್ಥೆಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜೂ.16ರಂದು ಗೋಕಾಕ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೆ.ಸಿ.ಐ ಭಾರತ ಸಂಸ್ಥೆಯ ಸಂಯೋಜಕ ವಿಷ್ಟು ಲಾತೂರ ಹೇಳಿದರು.ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಶನಿವಾರ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿನ ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು ಭಾಗವಹಿಸಿಬೇಕು. ಶ್ರೀಗಳ, ಗುರುಹಿರಿಯರು, ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ಗೌರವಿಸಿ ಸನ್ಮಾನಿಸಲಾಗುವುದು ಹಾಗೂ ವಿದ್ಯಾರ್ಥಿಗಳಿಗೆ ಕೆಇಎಸ್ ಅಧಿಕಾರಿ ತಹಸೀಲ್ದಾರ್ ಮೋಹನಕುಮಾರ ಭಸ್ಮೆ ಅವರು ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಸಾಧನೆ ಮಾಡುವ ಬಗ್ಗೆ ವಿದ್ಯಾರ್ಥಿಗಳ ಜೊತೆಗೆ ಸಂವಾದ ನಡೆಸುವರು ಎಂದು ವಿವರಿಸಿದರು.ಗೋಕಾಕ ಜೆ.ಸಿ.ಐ ಅಧ್ಯಕ್ಷ ಸುಮನ ಜಾಧವ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಸೇರಿದಂತೆ ವರ್ಷವಿಡಿ ವಿವಿಧ ರಂಗಗಳಲ್ಲಿ ಜೆಸಿಐ ಸಂಸ್ಥೆ ವಿವಿಧ ಸಾಮಾಜಿಕ ಕಾರ್ಯಗಳೊಂದಿಗೆ ಕೆಲಸ ಮಾಡುತ್ತ ಬಂದಿದ್ದು, 5ನೇ ವರ್ಷದ ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಝುರಾಕ್ಸ್ ಪ್ರತಿಯೊಂದಿಗೆ ತಮ್ಮ ಭಾವಚಿತ್ರ ಅಂಟಿಸಿ ಸಂಪೂರ್ಣ ವಿಳಾಸದೊಂದಿಗೆ ಅರ್ಜಿಯನ್ನು ನಮ್ಮ ಸಂಸ್ಥೆಗೆ ಸಲ್ಲಿಸತಕ್ಕದು. ಅರ್ಜಿ ಸಲ್ಲಿಸಲು ಜೂ.12ರಂದು ಕೊನೆಯ ದಿನವಾಗಿದ್ದು, ಅರ್ಜಿಯನ್ನು ಖುದ್ದಾಗಿ ಅಥವಾ ನೇರವಾಗಿ ನಮ್ಮ ಕಚೇರಿಗೆ ಬಂದು ಸಲ್ಲಿಸಬಹುದು ಹಾಗೂ ಅಂಚೆ ಮೂಲಕ ಕಳುಹಿಸಿ ಕೊಡಬಹುದು. ಒಂದು ವೇಳೆ ಅರ್ಜಿ ಸಲ್ಲಿಸದೇ ಇದ್ದಲ್ಲಿ ಕಾರ್ಯಕ್ರಮ ದಿನ ಬೆಳ್ಳಗೆ 8 ಗಂಟೆಗೆ ನೋಂದಣಿ ಕೌಂಟರ್‌ದಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶ್ವಸಿಗೊಳ್ಳಿಸಬೇಕು ಎಂದು ಕೋರಿದರು.ಗೋಷ್ಠಿಯಲ್ಲಿ ಜೆ.ಸಿ.ಐ ಸಂಸ್ಥೆಯ ಎಸ್.ಪಿ.ಉಳ್ಳಾಗಡ್ಡಿ, ಎಸ್.ಆರ್.ಹವಾಲ್ದಾರ, ಆರ್.ಎಸ್.ಮಾಳೋದೆ ಇದ್ದರು.
ಇದೇ ಮೊದಲ ಬಾರಿ ಜ್ಯೂನಿಯರ್ ಚೆಂಬರ್ ಇಂಟರನ್ಯಾಷನಲ್ ಇಂಡಿಯಾ ಸಂಸ್ಥೆ (ಜೆಸಿಐ) ಯಿಂದ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಗೋಕಾಕದ ಚೆನ್ನಬಸವೇಶ್ವರ ವಿದ್ಯಾಪೀಠ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.- ವಿಷ್ಟು ಲಾತೂರ,
ಜೆ.ಸಿ.ಐ ಭಾರತ ಸಂಸ್ಥೆಯ ಸಂಯೋಜಕರು.