ಸಾರಾಂಶ
ನೊಳಂಬ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಎಸ್‌ಎಸ್‌ಎಲ್‌ಸಿ ಹಾಗೂ ಪಿ.ಯು.ಸಿ ಪರೀಕ್ಷೆಗಳಲ್ಲಿ ಶೇಕಡಾ 90 ಅಥವಾ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಈ ಕುರಿತು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಮಾಜದ ಮುಖಂಡ ಗಂಜಿಗೆರೆ ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ಯಳನೋಡು ಜಗದ್ಗುರು ಜ್ಞಾನ ಪ್ರಭು ಶ್ರೀ ಸಿದ್ದರಾಮ ದೇಶಿ ಕೇಂದ್ರ ಮಹಾ ಸ್ವಾಮೀಜಿಯವರು ವಹಿಸಲಿದ್ದು. ಹಾಸನ ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್, ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕರಾದ ಕೆ ಎಂ ಶಿವಲಿಂಗೇಗೌಡರು, ಶಾಸಕ ಹುಲ್ಲಳ್ಳಿ ಸುರೇಶ್ ವಹಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಅರಸೀಕೆರೆ
ನೊಳಂಬ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಎಸ್‌ಎಸ್‌ಎಲ್‌ಸಿ ಹಾಗೂ ಪಿ.ಯು.ಸಿ ಪರೀಕ್ಷೆಗಳಲ್ಲಿ ಶೇಕಡಾ 90 ಅಥವಾ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಈ ಕುರಿತು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಮಾಜದ ಮುಖಂಡ ಗಂಜಿಗೆರೆ ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಜಿಲ್ಲಾಮಟ್ಟದಿಂದ ಆರಂಭವಾಗಿ, ಕೇಂದ್ರ ಸಮಿತಿ ಹಾಗೂ ಉಪಸಮಿತಿಗಳ ಸಹಕಾರದೊಂದಿಗೆ ಕಳೆದ 10 ವರ್ಷಗಳಿಂದ ಸಮಾಜವು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಇದರಿಂದ ಸಮಾಜದ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ದೊರಕುತ್ತದೆ. ಪೋಷಕರು ಹಾಗೂ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಅಂಕಪಟ್ಟಿ, ಪ್ರಾಂಶುಪಾಲರಿಂದ ದೃಢೀಕರಿಸಿರಬೇಕು ಮತ್ತು ಅದರ ಜೊತೆಗೆ ಎರಡು ಫೋಟೋಗಳನ್ನು ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್ ನೊಂದಿಗೆ ಅರ್ಜಿಗಳನ್ನು ತಲುಪಿಸಬೇಕು. ಅರ್ಜಿಗಳನ್ನು ದಿನಾಂಕ 25.08.2025 ಒಳಗೆ ಕಡ್ಡಾಯವಾಗಿ ಈ ಕೆಳಕಂಡ ವಿಳಾಸಕ್ಕೆ ತಲುಪಿಸಬೇಕು ಎಂದರು. ಅರ್ಜಿ ಸಲ್ಲಿಸುವ ವಿಳಾಸ ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನ ಬಿ ಎಚ್ ರಸ್ತೆ ಅರಸೀಕೆರೆ ತೋಟಗಾರಿಕೆ ಇಲಾಖೆ ಕಚೇರಿ ಎದುರು. ಪ್ರತಿಭಾ ಪುರಸ್ಕಾರ ಸಮಾರಂಭವನ್ನು ದಿನಾಂಕ 31-8-2025ರಂದು ನಡೆಸಿಕೊಡಲಾಗುವುದು. ಅರ್ಜಿ ಸಲ್ಲಿಸಲು ದೂರವಾಣಿ ವಿಳಾಸ 98 44 845 350 ಮತ್ತು 99729 68690 ಇವರನ್ನು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು ಎಂದರು.ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ಯಳನೋಡು ಜಗದ್ಗುರು ಜ್ಞಾನ ಪ್ರಭು ಶ್ರೀ ಸಿದ್ದರಾಮ ದೇಶಿ ಕೇಂದ್ರ ಮಹಾ ಸ್ವಾಮೀಜಿಯವರು ವಹಿಸಲಿದ್ದು. ಹಾಸನ ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್, ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕರಾದ ಕೆ ಎಂ ಶಿವಲಿಂಗೇಗೌಡರು, ಶಾಸಕ ಹುಲ್ಲಳ್ಳಿ ಸುರೇಶ್, ವಿಧಾನ ಪರಿಷತ್ ಸದಸ್ಯರಾದ ಸೂರಜ್ ರೇವಣ್ಣ. ಮಾಜಿ ಶಾಸಕರಾದ ಎಸ್ಎಂ ನಾಗರಾಜ್, ಕೆ ಎಸ್ ಲಿಂಗೇಶ್, ಕೇಂದ್ರ ಸಮಿತಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಹಾಗೂ ಸದಸ್ಯರುಗಳು ಬೆಂಗಳೂರು ಮತ್ತು ಉಪಸಮಿತಿ ಅಧ್ಯಕ್ಷರು ಕಾರ್ಯದರ್ಶಿಗಳು ಹಾಗೂ ಸದಸ್ಯರು ಅರಸೀಕೆರೆ ಇವರ ಉಪಸ್ಥಿತಿಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯುತ್ತದೆ ಎಂದರು.
ಈ ಎಲ್ಲಾ ಗಣ್ಯರ ಉಪಸ್ಥಿತಿಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದೆ ಎಂದು ಗಂಜಿಗೆರೆ ಚಂದ್ರಶೇಖರ್ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರಾದ ಶೇಖರ್ ಸಂಕೊಂಡನಹಳ್ಳಿ ಮತ್ತು ಕಾಟಿಕೆರೆ ಉಮೇಶ್ ಉಪಸ್ಥಿತರಿದ್ದರು.