ಒಕ್ಕಲಿಗರ ಸಮಾಜದಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

| Published : Jul 24 2025, 12:45 AM IST

ಒಕ್ಕಲಿಗರ ಸಮಾಜದಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ಒಕ್ಕಲಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು ಸಮಾಜದ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ಎನ್. ಚಿದಾನಂದ್ ತಿಳಿಸಿದರು.

ತಿಪಟೂರು: ತಾಲೂಕಿನ ಒಕ್ಕಲಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು ಸಮಾಜದ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ಎನ್. ಚಿದಾನಂದ್ ತಿಳಿಸಿದರು.

ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರ ಸಾನಿಧ್ಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಪ್ರತಿಭಾಪುರಸ್ಕಾರ ಹಾಗೂ ದಾನಿಗಳಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಒಕ್ಕಲಿಗ ಸಮಾಜದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಈ ಬಾರಿ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಗ್ರಾಮಾಂತರ ವಿದ್ಯಾರ್ಥಿಗಳು ಶೇ.75ರಷ್ಟು ಮತ್ತು ನಗರ ಹಾಗೂ ತಿಪಟೂರಿನಿಂದ ಬೇರೆ ಶಾಲಾ-ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಶೇ.85ರಷ್ಟು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ 2024-25ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ತಿಪಟೂರಿನ ಹೌಸಿಂಗ್ ಬೊರ್ಡ್ ಬಡಾವಣೆಯಲ್ಲಿರುವ ಒಕ್ಕಲಿಗರ ಸಂಘದ ಕಚೇರಿಯಲ್ಲಿ ಅರ್ಜಿ ಪಡೆದು ಅರ್ಜಿಯೊಂದಿಗೆ ಆಧಾರ್‌ಕಾರ್ಡ್, ಎರಡು ಭಾವಚಿತ್ರ, ಧೃಡೀಕೃತ ಅಂಕಪಟ್ಟಿ ಜೆರಾಕ್ಸ್ ಪ್ರತಿಯೊಂದಿಗೆ ಆಗಸ್ಟ್ 15ರೊಳಗೆ ಅರ್ಜಿ ಸಲ್ಲಿಸಬೇಕೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜು, ಖಜಾಂಚಿ ಡಿ.ಬಿ. ಲಕ್ಷ್ಮಣಗೌಡ, ಪದಾಧಿಕಾರಿಗಳಾದ ಕೃಷ್ಣಪ್ಪ, ಶಿವಸ್ವಾಮಿ, ಲಿಂಗೇಗೌಡ್ರು, ಕಿಶೋರ್, ಮಂಜುನಾಥ್, ಪ್ರಸನ್ನಕುಮಾರ್, ಜಿ.ಕೆ. ಕುಮಾರ್, ವಿಶ್ವನಾಥ್, ಪ್ರತಿಭಾ ಪುರಸ್ಕಾರ ಸಮಿತಿ ಅಧ್ಯಕ್ಷ ದೇವಾನಂದ್, ಕಾರ್ಯದರ್ಶಿ ಎಚ್.ಡಿ. ದೇವರಾಜು, ಖಜಾಂಚಿ ಚಂದ್ರಶೇಖರ್ ಇದ್ದರು.