ಸಾರಾಂಶ
ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆಯಾದ 169 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು
ಕನ್ನಡಪ್ರಭ ವಾರ್ತೆ ಮೈಸೂರುನಗರದ ಸದ್ವಿದ್ಯಾ ಸೆಮಿ ರೆಸಿಡೆನ್ಷಿಯಲ್ ಕಾಲೇಜಿನಲ್ಲಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಮಾರ್ಗದರ್ಶಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿಜ್ಞಾನ ವಿಭಾಗದಲ್ಲಿ ಶೇ. 99 ಅಂಕಗಳಿಸಿ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದ ಎಂ. ಸುದೀಕ್ಷಾ ಮತ್ತು ಶೇ. 99.3 ಅಂಕ ಪಡೆದು ರಾಜ್ಯಕ್ಕೆ 4ನೇ ರ್ಯಾಂಕ್ ಗಳಿಸಿದ ಜೆ. ಧಾತ್ರಿ ಅವರನ್ನು ಸನ್ಮಾನಿಸಲಾಯಿತು.
ಅಂದು ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆಯಾದ 169 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾವೇರಿ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಪ್ರೊ.ಎಂ.ಎಸ್.ಕೆ. ನರಹರಿ ಬಾಬು, ಕಾರ್ಯದರ್ಶಿ ಎಂ.ಡಿ. ಗೋಪಿನಾಥ್, ಉಪಾಧ್ಯಕ್ಷ ಎಸ್. ಬಾಲಾಜಿ, ಸಹ ಕಾರ್ಯದರ್ಶಿ ಕೆ.ಎನ್. ಫಣೀಶ, ಆಡಳಿತ ಮಂಡಳಿಯ ಸದಸ್ಯ ಸಿ.ಆರ್. ನಾಗರಾಜ್, ಪ್ರಾಂಶುಪಾಲೆ ಡಾ.ಜಿ.ಆರ್. ಕವಿತಾ, ಉಪ ಪ್ರಾಂಶುಪಾಲ ಕೆ.ಎಸ್. ಪ್ರಕಾಶ್ ಇದ್ದರು.