ಇಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

| Published : Jul 14 2024, 01:31 AM IST

ಸಾರಾಂಶ

ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಗೌರವ ಸಮರ್ಪಣೆಯನ್ನು ಜಿಲ್ಲಾಧಿಕಾರಿ ಸಿ. ಸತ್ಯಭಾಮ ನಡೆಸಿಕೊಡಲಿದ್ದಾರೆ. ಹಾಸನ ಜಿಲ್ಲಾ ಸರಕಾರಿ ನೌಕರರ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಎನ್. ಪರಮೇಶ್, ಕೃಷ್ಣರಾಜ ನಗರದ ತಾಲೂಕು ತಹಸೀಲ್ದಾರ್ ಸಿ.ಎಸ್. ಪೂರ್ಣಿಮಾ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಎಚ್.ಎಸ್. ಕರುಣಾಕರ್, ಸಾಧನಾ ಅಕಾಡೆಮಿಯ ಬಿ. ಮಂಜುನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಿವಸ್ವಾಮಿ, ಡಿಡಿಪಿಐ ಉಪನಿರ್ದೇಶಕ ಎಚ್.ಕೆ. ಪಾಂಡು ಇತರರು ಪಾಲ್ಗೊಳ್ಳುವುದಾಗಿ ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜುಲೈ ೧೪ರ ಭಾನುವಾರದಂದು ಬೆಳಗ್ಗೆ ೧೦ ಗಂಟೆಗೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನಿವೃತ್ತ ಸರಕಾರಿ ನೌಕರರಿಗೆ ಹಾಗೂ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪಡೆದ ನೌಕರರಿಗೆ, ವಿಶೇಷವಾಗಿ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸರ್ಕಾರಿ, ಅರೆ ಸರ್ಕಾರಿ ಹಾಗೂ ನಿಗಮ ಮಂಡಳಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಕೆ.ಎಂ. ಶ್ರೀನಿವಾಸ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಜಿಲ್ಲಾ ಸರ್ಕಾರಿ, ಅರೆ ಸರ್ಕಾರಿ ಹಾಗೂ ನಿಗಮ ಮಂಡಳಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಮತ್ತು ಹಾಸನ ಜಿಲ್ಲಾ ಸರ್ಕಾರಿ ನೌಕರರ ಕೋ-ಆಪರೇಟಿವ್ ಸೊಸೈಟಿ ನಿ., ಹಾಸನ ಇವರ ವತಿಯಿಂದ ೨೦೨೩-೨೪ನೇ ಸಾಲಿನಲ್ಲಿ ಪಾಸಾದ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಹಾಗೂ ಪದವಿ ಪಡೆದ ವಿದ್ಯಾರ್ಥಿಗಳಿಗೆ ಮತ್ತು ನಮ್ಮ ಸಂಘದ ಸದಸ್ಯರಾಗಿ ಸರ್ಕಾರಿ ಕರ್ತವ್ಯದಿಂದ ನಿವೃತ್ತಿ ಹೊಂದಿದ ನೌಕರರಿಗೆ ಸನ್ಮಾನ ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದಿರುವ ಸರ್ಕಾರಿ ನೌಕರರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ವಿಶೇಷವಾಗಿ ಪಾಸಾದ ಎಸ್ಎಸ್ಎಲ್ ಸಿ ಮತ್ತು ವಿಶೇಷ ಚೇತನ ಮಕ್ಕಳಿಗೆ ಸನ್ಮಾನಿಸುವ ಕಾರ್ಯಕ್ರಮವು ಹಾಸನದ ಕಲಾಭವನದಲ್ಲಿ ಇದೇ ಭಾನುವಾರ ಬೆಳಗ್ಗೆ ೧೦ ಗಂಟೆಗೆ ಶ್ರೀ ಶಂಭುನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಶಾಖಾಮಠ ಹಾಸನ ಹಾಗೂ ಮಡಿಕೇರಿ ಇವರ ದಿವ್ಯ ಸಾನಿಧ್ಯದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಗೌರವ ಸಮರ್ಪಣೆಯನ್ನು ಜಿಲ್ಲಾಧಿಕಾರಿ ಸಿ. ಸತ್ಯಭಾಮ ನಡೆಸಿಕೊಡಲಿದ್ದಾರೆ. ಹಾಸನ ಜಿಲ್ಲಾ ಸರಕಾರಿ ನೌಕರರ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಎನ್. ಪರಮೇಶ್, ಕೃಷ್ಣರಾಜ ನಗರದ ತಾಲೂಕು ತಹಸೀಲ್ದಾರ್ ಸಿ.ಎಸ್. ಪೂರ್ಣಿಮಾ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಎಚ್.ಎಸ್. ಕರುಣಾಕರ್, ಸಾಧನಾ ಅಕಾಡೆಮಿಯ ಬಿ. ಮಂಜುನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಿವಸ್ವಾಮಿ, ಡಿಡಿಪಿಐ ಉಪನಿರ್ದೇಶಕ ಎಚ್.ಕೆ. ಪಾಂಡು ಇತರರು ಪಾಲ್ಗೊಳ್ಳುವುದಾಗಿ ಹೇಳಿದರು. ನಮ್ಮ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಮ್ಮ ಮೂಲಕ ವಿನಂತಿಸುವುದಾಗಿ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಹಾಸನ ಜಿಲ್ಲಾ ಸರ್ಕಾರಿ, ನೌಕರರ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಎನ್. ಪರಮೇಶ್, ಉಪಾಧ್ಯಕ್ಷ ಬಿ.ಆರ್. ಧರ್ಮ, ಶಿವೇಗೌಡ, ಗೌರವಾಧ್ಯಕ್ಷ ಎಚ್.ಆರ್. ಯಶೋಧರ್, ನಿರ್ದೇಶಕರಾದ ಗೋಪಾಲಕೃಷ್ಣ ಇತರರು ಉಪಸ್ಥಿತರಿದ್ದರು.