ಕನ್ನಡಪ್ರಭ ವಾರ್ತೆ ವಿಜಯಪುರ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿನಲ್ಲಿ ಉತ್ತಮ ಅಂಕ ಪಡೆದು ಸಾಧನೆಗೈದ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಮೇ 24ರಂದು ನಗರದ ವೀರರಾಣಿ ಕಿತ್ತೂರು ಚೆನ್ನಮ್ಮ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಜರುಗಲಿದೆ ಎಂದು ಪಂಚಮಸಾಲಿ ಸಮಾಜದ ಮುಖಂಡ ಸುರೇಶ ಬಿರಾದಾರ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿನಲ್ಲಿ ಉತ್ತಮ ಅಂಕ ಪಡೆದು ಸಾಧನೆಗೈದ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಮೇ 24ರಂದು ನಗರದ ವೀರರಾಣಿ ಕಿತ್ತೂರು ಚೆನ್ನಮ್ಮ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಜರುಗಲಿದೆ ಎಂದು ಪಂಚಮಸಾಲಿ ಸಮಾಜದ ಮುಖಂಡ ಸುರೇಶ ಬಿರಾದಾರ ಹೇಳಿದರು.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜದ ಮುಖಂಡರೆಲ್ಲ ಸೇರಿ ನಮ್ಮ ಸಮಾಜದ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರಿಗೆ ಜಿಲ್ಲಾ ಮಟ್ಟದಲ್ಲಿ ಪ್ರೋತ್ಸಾಹಿಸುವ ಕೆಲಸ ಮೊದಲ ಬಾರಿಗೆ ಮಾಡಲಾಗುತ್ತಿದೆ. 2025-26ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.90 ಹಾಗೂ ಅದಕ್ಕಿಂತ ಮೇಲ್ಪಟ್ಟ ವಿದ್ಯಾರ್ಥಿಗಳು ಹಾಗೂ ಕೇಂದ್ರೀಯ ವಿದ್ಯಾಲಯ ಮತ್ತು ಸಿಬಿಎಸ್‌ಇ ಶಾಲೆಗಳಲ್ಲಿ ಶೇ.85 ಹಾಗೂ ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿದವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಇನ್ನು 2025-26ರ ಸಾಲಿನಲ್ಲಿ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.90 ಹಾಗೂ ಅದಕ್ಕಿಂತ ಮೇಲ್ಪಟ್ಟು ಅಂಕಗಳನ್ನು ಪಡೆದು ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳು ಬೇರೆಡೆ ಓದಿದ್ದರೂ ಸಹ ಅಂತಹವರಿಗೆ ಪುರಸ್ಕಾರವಿದೆ. ಸಾಧನೆಗೈದ ಸಮಾಜದ ವಿದ್ಯಾರ್ಥಿಗಳು ಮೇ 15ರೊಳಗಾಗಿ ತಮ್ಮ ಅಂಕಪಟ್ಟಿ ಝರಾಕ್ಸ್ ಪ್ರತಿ, ಪಾಸಪೋರ್ಟ್ ಸೈಜಿನ ಎರಡು ಫೋಟೊಗಳು, ವಿಳಾಸದ ಪುರಾವೆ (ಆಧಾರಕಾರ್ಡ್) ಹಾಗೂ ಮೊ.ಸಂಖೆಯನ್ನು ನಗರದ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ತಲುಪಿಸಬೇಕು. ಅಥವಾ ಸಂಯೋಜಕರ ಮೊ. 9448272048, 9448570878, 8296620386, 9900628834 ವಾಟ್ಸಾಪ್ ಮೂಲಕವು ಕಳುಹಿಸಿಕೊಡಬಹುದು ಎಂದು ತಿಳಿಸಿದರು.ಜಿಲ್ಲೆಯ ಮೂಲೆಮೂಲೆಯಿಂದ ಸುಮಾರು ಐದು ಸಾವಿರ ಸಮುದಾಯದವರು ಸೇರಲಿದ್ದು, ಈ ಮಹತ್ವದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳಿಗೆ ಗುರುತಿಸುವ ಕೆಲಸ ಆಗಲಿದೆ. ಸಮಾಜದ ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಲು ಕಿತ್ತೂರು ರಾಣಿ ಚೆನ್ನಮ್ಮ ವಿಜಯೋತ್ಸವ ಪ್ರತಿಷ್ಠಾನ ಸಮಿತಿಯಿಂದ ಸ್ಕಾಲರಶಿಪ್ ಸಹ ನೀಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಹೊನಮಲ್ಲ ಸಾರವಾಡ, ಬಸವರಾಜ ಕಳಸಗೊಂಡ, ಬಿ.ಎಂ.ಬಿರಾದಾರ, ಅಶೋಕ ಬಿರಾದಾರ, ಮುತ್ತು ಜಂಗಮಶೆಟ್ಟಿ, ಶಂಕರ ಸೋಂಪುರ ಇದ್ದರು.