ಬಡ ಮಕ್ಕಳಿಗೂ ಪ್ರತಿಭಾ ಪುರಸ್ಕಾರ ಮಾಡಬೇಕು

| Published : Oct 29 2025, 01:15 AM IST

ಸಾರಾಂಶ

ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವುದರ ಜೊತೆಗೆ, ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ಬಡ ಮಕ್ಕಳಿಗೂ ಸಹ ಪ್ರತಿಭಾ ಪುರಸ್ಕಾರವನ್ನು ಮಾಡಬೇಕು ಎಂದು ಶಾಸಕರಾದ ಸ್ವರೂಪ್ ಪ್ರಕಾಶ್ ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಶಾಸಕನಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಬಂದಾಗ ಕಟ್ಟಡ ದುಸ್ಥಿತಿಯಲ್ಲಿದೆ ಅದನ್ನು ಸರಿಪಡಿಸಿಕೊಡಬೇಕು ಎಂದು ಕೆಲವು ಬೇಡಿಕೆಗಳನ್ನು ಇಟ್ಟಿದ್ದರು. ಅದನ್ನು ಖಂಡಿತವಾಗಿಯೂ ಸರಿಪಡಿಸಿ ಕೊಡುವಂತಹ ಕೆಲಸವನ್ನು ಮಾಡುತ್ತೇನೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವುದರ ಜೊತೆಗೆ, ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ಬಡ ಮಕ್ಕಳಿಗೂ ಸಹ ಪ್ರತಿಭಾ ಪುರಸ್ಕಾರವನ್ನು ಮಾಡಬೇಕು ಎಂದು ಶಾಸಕರಾದ ಸ್ವರೂಪ್ ಪ್ರಕಾಶ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ನಗರದ ಜಿಲ್ಲಾ ನಿವೃತ್ತ ನೌಕರರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಮಾಜಿ ಶಾಸಕರಾದ ದಿ. ಎಚ್.ಎಸ್ ಪ್ರಕಾಶ್ ರವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನನ್ನ ತಂದೆಯ ನೆನೆಸಿಕೊಂಡು ಅವರ ಭಾವಚಿತ್ರವನ್ನು ಅನಾವರಣಗೊಳಿಸಿರುವುದು ಮಗನಾಗಿ ನನಗೆ ಬಹಳ ಸಂತೋಷವಾಗುತ್ತಿದೆ ಎಂದು ತಿಳಿಸಿದರು.

ಕಳೆದ ಎರಡು ವರ್ಷಗಳ ಹಿಂದೆ ಶಾಸಕನಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಬಂದಾಗ ಕಟ್ಟಡ ದುಸ್ಥಿತಿಯಲ್ಲಿದೆ ಅದನ್ನು ಸರಿಪಡಿಸಿಕೊಡಬೇಕು ಎಂದು ಕೆಲವು ಬೇಡಿಕೆಗಳನ್ನು ಇಟ್ಟಿದ್ದರು. ಅದನ್ನು ಖಂಡಿತವಾಗಿಯೂ ಸರಿಪಡಿಸಿ ಕೊಡುವಂತಹ ಕೆಲಸವನ್ನು ಮಾಡುತ್ತೇನೆ ಎಂದರು.