ಆಲ್ದೂರುಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಅಬ್ಬಾಸಿಯ ಬಯಲು ರಂಗಮಂದಿರದಲ್ಲಿ ಮಂಗಳವಾರ ಪ್ರಾಥಮಿಕ ಶಾಲೆಗಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.

- ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಆಲ್ದೂರು

ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಅಬ್ಬಾಸಿಯ ಬಯಲು ರಂಗಮಂದಿರದಲ್ಲಿ ಮಂಗಳವಾರ ಪ್ರಾಥಮಿಕ ಶಾಲೆಗಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಿಆರ್‌ಪಿ ನಾಗರಾಜ್, ಪ್ರತಿಭಾ ಕಾರಂಜಿ ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಪ್ರಮುಖ ವೇದಿಕೆಯಾಗಿದೆ ಎಂದರು.

ಗ್ರಾಪಂ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಡಿ.ಬಿ.ಅಶೋಕ್ ಮಾತನಾಡಿ, ಪ್ರತಿಭಾ ಕಾರಂಜಿಗೆ ಸರ್ಕಾರ ನೀಡುವ ₹5 ಸಾವಿರ ಅನುದಾನ ಸಾಕಾಗುತ್ತಿಲ್ಲ. ಕಾರ್ಯಕ್ರಮಕ್ಕೆ ಅಂದಾಜು ಒಂದು ಲಕ್ಷ ರು. ವೆಚ್ಚವಾಗುತ್ತಿದ್ದು, ದಾನಿಗಳ ಸಹಕಾರದಿಂದ ಆಯೋಜಿಸಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿರುವುದು ಆತಂಕಕಾರಿ ಎಂದರು.

ರಕ್ಷಾ ಫೌಂಡೇಶನ್ ಮುಖ್ಯಸ್ಥೆ ಸುಷ್ಮಾ ವಿಭ, ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಸುಧಾರಣೆಗೆ ಒತ್ತು ನೀಡುತ್ತಿದೆ ಎಂದರು. ಅಂಬೇಡ್ಕರ್ ಹೋರಾಟ ವೇದಿಕೆ ಅಧ್ಯಕ್ಷ ಎಚ್.ನವರಾಜು, ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಕುಸಿಯಲು ಸರ್ಕಾರದ ಧೋರಣೆಗಳೇ ಕಾರಣವಾಗಿದ್ದು, ಶಿಕ್ಷಣ ನೀತಿಯಲ್ಲಿ ಸುಧಾರಣೆಯಾಗಬೇಕು ಎಂದು ಅಭಿಪ್ರಾಯಪಟ್ಟರು.

ವಲಯ ಸಂಪನ್ಮೂಲ ಅಧಿಕಾರಿ ಕಮಲ ಮಾತನಾಡಿ, ವಿವಿಧ ಕರ್ತವ್ಯಗಳ ಒತ್ತಡದ ನಡುವೆಯೂ ಶಿಕ್ಷಕರು ಪ್ರತಿಭಾ ಕಾರಂಜಿಯನ್ನು ಯಶಸ್ವಿಯಾಗಿ ಆಯೋಜಿಸಿರುವುದು ಶ್ಲಾಘನೀಯ ಎಂದರು. ಎಸ್‌ಡಿಎಂಸಿ ಅಧ್ಯಕ್ಷ ವಸಂತ್ ಅಧ್ಯಕ್ಷತೆ ವಹಿಸಿದ್ದರು. ಒಟ್ಟು 24 ಶಾಲೆಗಳು ಭಾಗವಹಿಸಿದ್ದವು.

ಶಿಕ್ಷಕ ಸಂಯೋಜನಾಧಿಕಾರಿ ಅಪ್ಸ ಅಖ್ತರ್, ಬ್ಯಾಂಕ್ ಆಫ್ ಬರೋಡಾ ವ್ಯವಸ್ಥಾಪಕಿ ಪಲ್ಲವಿ, ಶಿಕ್ಷಕರ ಸಂಘದ ಉಪಾಧ್ಯಕ್ಷೆ ಕೆ.ಎಚ್.ಗೀತಾ, ಸಹ ಕಾರ್ಯದರ್ಶಿ ಡಿ.ಎಸ್.ಪುಷ್ಪಾವತಿ, ಎಚ್.ಎಂ.ಜೆ. ಕನ್ಸ್ಟ್ರಕ್ಷನ್ ಮುಖ್ಯಸ್ಥ ಹಸೈನರ್ ಅಚ್ಚು, ಶಾಲಾ ಮುಖ್ಯಮಂತ್ರಿ ರಾಘವ, ಪ್ರೌಢಶಾಲಾ ಮುಖ್ಯ ಶಿಕ್ಷಕ ಸಿ.ಎಸ್.ಸುರೇಶ್, ಎಸ್‌ಡಿಎಂಸಿ ಅಧ್ಯಕ್ಷ ಎ.ಯು.ಇಬ್ರಾಹಿಂ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕಮಲಾಕ್ಷಿ, ಉಪಾಧ್ಯಕ್ಷೆ ಸುಮಯ್ಯ, ಸದಸ್ಯರಾದ ಲಕ್ಷ್ಮಣ್, ವಸಿಂ ಪಾಷಾ, ಸತೀಶ್, ಪರಮೇಶ್ ಹಾಗೂ ಅಬ್ದುಲ್ ರೆಹಮಾನ್ ಉಪಸ್ಥಿತರಿದ್ದರು.

--------

ಆಲ್ದೂರು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಅಬ್ಬಾಸಿಯ ಬಯಲು ರಂಗಮಂದಿರದಲ್ಲಿ ಮಂಗಳವಾರ ಪ್ರಾಥಮಿಕ ಶಾಲೆಗಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.