ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ವೇದಿಕೆ: ರವಿ

| Published : Sep 23 2024, 01:18 AM IST

ಸಾರಾಂಶ

ನಂಜರಾಯಪಟ್ಟಣ ಸಂಯುಕ್ತ ಆಶ್ರಯದಲ್ಲಿ ಬಸನಹಳ್ಳಿಯ ಸರ್ಕಾರಿ ವಾಲ್ಮೀಕಿ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ ಜರುಗಿತು. 70ಕ್ಕಿಂತಲೂ ಹೆಚ್ಚು ಶಾಲಾ ಮಕ್ಳಳು ಪಾಲ್ಗೊಂಡಿದ್ದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಕೊಡಗು ಜಿ.ಪಂ. ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸೋಮವಾರಪೇಟೆ ತಾಲೂಕು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಸಮೂಹ ಸಂಪನ್ಮೂಲ ಕೇಂದ್ರ ನಂಜರಾಯಪಟ್ಟಣ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಬಸನಹಳ್ಳಿಯ ಸರ್ಕಾರಿ ವಾಲ್ಮೀಕಿ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ ಜರುಗಿತು.

ಪ್ರತಿಭಾ ಕಾರಂಜಿ ಸ್ಪರ್ಧೆ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳಿಗೆ ಸಾಮಾನ್ಯ ವೇದಿಕೆಯನ್ನು ಒದಗಿಸುತ್ತದೆ ಎಂದು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮುಖ್ಯ ಶಿಕ್ಷಕ ರವಿ ಅಭಿಪ್ರಾಯಪಟ್ಟರು.

ಪ್ರತಿಭಾ ಕಾರಂಜಿ ಸ್ಪರ್ಧೆ ಒಂದು ವಿನೂತನ ಕಾರ್ಯಕ್ರಮವಾಗಿದ್ದು, ಕ್ಲಸ್ಟರ್, ಬ್ಲಾಕ್ ಮತ್ತು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಸಾಂಸ್ಕೃತಿಕ ಮತ್ತು ಸಾಹಿತ್ಯ ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ಸುಮಾರು 70ಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳು ಪಾಲ್ಗೊಂಡಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ವಹಿಸಿದ್ದರು.

ಸಮಾರಂಭದ ವೇದಿಕೆಯಲ್ಲಿ ಉಪಾಧ್ಯಕ್ಷ ಪಟ್ಟು ಮಾದಪ್ಪ, ಸದಸ್ಯರಾದ ಉಮಾ, ಸೌಮ್ಯ, ಸಿಒಸಿಸಿ ನಿರ್ದೇಶಕ ವಸಂತ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿ ಸುರೇಶ್, ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಶ್ರೀದೇವಿ, ಮೊರಾರ್ಜಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷೆ ಸುಮಿತ್ರಾ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತ್ಯನಾರಾಯಣ, ಗುಡ್ಡೆಹೊಸೂರ್ ಜಿ ಎಂ ಪಿ ಶಾಲೆ ಮುಖ್ಯಶಿಕ್ಷಕ ಸಣ್ಣಸ್ವಾಮಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಮಂಜೇಶ್, ಸರ್ಕಾರಿ ವಾಲ್ಮೀಕಿ ಶಾಲೆಯ ಮುಖ್ಯ ಶಿಕ್ಷಕ ರವಿ, ಕಾರ್ಯಕ್ರಮದ ಆಯೋಜಕಿ ವೈಶಾಲಿ, ಶಾಲಾ ಶಿಕ್ಷಕ ಶಿಕ್ಷಕರು ಉಪಸ್ಥಿತರಿದ್ದರು.