ಸಾರಾಂಶ
ಬೈಲಹೊಂಗಲ : ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯೆ ರೋಹಿಣಿ ಬಾಬಾಸಾಹೇಬ ಪಾಟೀಲ ಹೇಳಿದರು.
ತಾಲೂಕಿನ ಕೇಸರಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನೇಗಿನಹಾಳ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ, ಮಕ್ಕಳ ಮೇಳ, ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇಲ್ಲಿ ಮಕ್ಕಳು ತಮ್ಮಲ್ಲಿರುವ ಕಲೆ, ಸಾಹಿತ್ಯ, ಜಾನಪದ ಪ್ರಕಾರದ ಪ್ರತಿಭೆಯನ್ನು ತೋರಿ ಸಾಂಸ್ಕೃತಿಕವಾಗಿ ಮುಂದೆ ಬರಬೇಕು ಎಂದು ಸಲಹೆ ನೀಡಿದರು.
ಎಸ್‌ಡಿಎಂಸಿ ಅಧ್ಯಕ್ಷ ಶಶಿಧರ ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೃಷ್ಣಾ ಕುಲಕರ್ಣಿ, ಮಂಜುಳಾ ಬನ್ನೂರ, ಮುಖ್ಯ ಶಿಕ್ಷಕರಾದ ಆರ್.ಆರ್.ತೋರಣಗಟ್ಟಿ, ಬಿ.ಎನ್.ಬೆಳ್ಳಿಗಟ್ಟಿ, ಪಿ.ಬಿ.ಬೋಳೆತ್ತಿನ, ಎಸ್.ಬಿ.ಬಗನಾಳ, ಸುಭಾಸ ನರಸನ್ನವರ, ಅರ್ಚನಾ ಕುಲಕರ್ಣಿ, ಮಹಾಂತೇಶ ಜಕಲಿ, ಪ್ರಕಾಶ ಗುಂಡೆಣ್ಣವರ ಅನೇಕರು ಇದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಅನಾವರಣ ಮಾಡುವ ಮೂಲಕ ಮಕ್ಕಳು ಸರ್ವಾಂಗೀಣ ಬೆಳವಣಿಗೆ ಸಾಧಿಸಲು ಅವಕಾಶ ಕಲ್ಪಿಸಬೇಕು. ಸೋಲು, ಗೆಲುವಿನ ಬಗ್ಗೆ ಯೋಚಿಸದೆ ಸ್ಪರ್ಧೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಬೇಕು.
-ರೋಹಿಣಿ ಬಾಬಾಸಾಹೇಬ ಪಾಟೀಲ, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯೆ.