ಸಾರಾಂಶ
ಲಕ್ಷ್ಮೇಶ್ವರ ಪಟ್ಟಣದ ಕಮಲಾ ವೆಂಕಪ್ಪ ಅಗಡಿ ಪಪೂ ಕಾಲೇಜಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಬಾಹ್ಯಾಕಾಶದತ್ತ ಭಾರತ-2023 ಎನ್ನುವ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಲಕ್ಷ್ಮೇಶ್ವರ ತಾಲೂಕು ಕಸಾಪ ಅಧ್ಯಕ್ಷ ಈಶ್ವರ ಮೆಡ್ಲೇರಿ ಬಹುಮಾನ ವಿತರಣೆ ಮಾಡಿದರು.
ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಲಕ್ಷ್ಮೇಶ್ವರ: ಗ್ರಾಮೀಣ ಭಾಗದಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿರುವ ಕೌಶಲ್ಯವನ್ನು ಗುರುತಿಸಿ ಬೆಳಕಿಗೆ ತರುವ ಕಾರ್ಯವನ್ನು ಶಿಕ್ಷಕರು ಹಾಗೂ ಸಮುದಾಯ ಮಾಡಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಕಸಾಪ ಅಧ್ಯಕ್ಷ ಈಶ್ವರ ಮೆಡ್ಲೇರಿ ಹೇಳಿದರು.
ಗುರುವಾರ ಪಟ್ಟಣದ ಕಮಲಾ ವೆಂಕಪ್ಪ ಅಗಡಿ ಪಪೂ ಕಾಲೇಜಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಬಾಹ್ಯಾಕಾಶದತ್ತ ಭಾರತ-2023 ಎನ್ನುವ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ ಅವರು ಮಾತನಾಡಿದರು. ಭಾರತವು ವಿಜ್ಞಾನದಲ್ಲಿ ಮಹತ್ತರ ಸಾಧನೆ ಮಾಡುತ್ತಿರುವುದು ನಮಗೆಲ್ಲ ತಿಳಿದ ಸಂಗತಿಯಾಗಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯಲ್ಲಿ ಜಗತ್ತಿನ ಹಲವು ದೇಶಗಳು ಕೊಂಡಾಡುತ್ತಿವೆ. ವಿದ್ಯಾರ್ಥಿಗಳು ತಮಗೆ ದೊರೆತಿರುವ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ಜೀವನದಲ್ಲಿ ಮಹತ್ತರ ಸಾಧನೆ ಮಾಡುವ ಕಾರ್ಯ ಮಾಡಬೇಕು ಎಂದು ಹೇಳಿದರು.ಶಿಕ್ಷಕ ನಾಗರಾಜ ಮಜ್ಜಿಗುಡ್ಡ, ಸಿ.ಪಿ.ಹಲಸೂರ, ಪ್ರಾಚಾರ್ಯ ಎನ್. ಹಯವದನ ಮಾತನಾಡಿದರು. ಪ್ರಬಂಧ ಸ್ಪರ್ಧೆಯಲ್ಲಿ ಸೆವೆಂತ ಡೇ ಶಾಲೆಯ ವಿದ್ಯಾರ್ಥಿ ಅರುಣ ಪೌಲ್ ಪ್ರಥಮ, ಆಕ್ಸಫರ್ಡ್ ಶಾಲೆಯ ಸುಪ್ರೀತಾ ವಡಕಣ್ಣವರ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ತಾಯಿ ಪಾರ್ವತಿ ಮಕ್ಕಳ ಬಳಗದ ಮಧುಮತಿ ಉಳ್ಳಟ್ಟಿ ಪಡೆದುಕೊಂಡಿದ್ದಾರೆ ಎಂದು ಪ್ರಾಚಾರ್ಯ ಹೇಳಿದರು. ಈ ವೇಳೆ ಎನ್.ಎಚ್. ಕಾಳೆ, ರಾಕೇಶ ಕುಲಕರ್ಣಿ, ಪ್ರವೀಣ ಮಳ್ಳಿ, ಸುನೀಲ ಪಾಟೀಲ, ಗಂಗಾಧರ ನುಚ್ಚಂಬಲಿ, ಅಲ್ತಾಫ್ ಗುಳಗುಂದಿ, ವೇದಾ ವಸ್ತ್ರದ ಇದ್ದರು. ಸಿ.ಎಸ್. ಹಿರೇಮಠ ಕಾರ್ಯಕ್ರಮ ನಿರ್ವಹಿಸಿದರು. ಸುಧಾರಾಣಿ ಮಾಲಿಪಾಟೀಲ ಸ್ವಾಗತಿಸಿದರು. ಪ್ರವೀಣಕುಮಾರ ಮಳಲಿ ವಂದಿಸಿದರು.