ಸಾರಾಂಶ
ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿದ ಶಾಸಕ
ಕನ್ನಡಪ್ರಭ ವಾರ್ತೆ ಯಲ್ಲಾಪುರನಮ್ಮ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪಾಠದ ಜೊತೆ ಪಠ್ಯೇತರ ಚಟುವಟಿಕೆಗಳು ಅತ್ಯಂತ ಮಹತ್ವವಾದುದು. ಅಂದಾಗ ಮಾತ್ರ ಅವರು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ವಾಂಗೀಣ ಅಭಿವೃದ್ಧಿ ಸಾಧಿಸುವುದಕ್ಕೆ ಸಾಧ್ಯವಾಗುತ್ತದೆ. ಆ ನೆಲೆಯಲ್ಲಿ ನಮ್ಮ ತಾಲೂಕಿನ ಮಕ್ಕಳು ಜಿಲ್ಲೆ, ರಾಜ್ಯ ಮಟ್ಟದಲ್ಲಿ ವಿಜಯಶಾಲಿಗಳಾಗಿ ತಾಲೂಕಿಗೆ ಕೀರ್ತಿ ತರುವಂತೆ ಮಾಡಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.
ಶನಿವಾರ ಪಟ್ಟಣದ ವೈಟಿಎಸ್‌ಎಸ್ ಸಭಾಭವನದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿ ಮಾತನಾಡಿದರು. ನಮ್ಮ ಮಕ್ಕಳು ಇಂದು ಸಾಕಷ್ಟು ಪ್ರತಿಭಾವಂತರಿದ್ದಾರೆ. ಪ್ರತಿಭೆಗೆ ತಕ್ಕದಾಗಿ ಮಾರ್ಗದರ್ಶನ ಅಗತ್ಯವಾಗಿದೆ. ಕೇವಲ ಅಂಕವೊಂದೇ ಉದ್ಯೋಗದಲ್ಲಿ ಶ್ರೇಯಸ್ಸು ತರದು, ಸಾಮಾನ್ಯ ಜ್ಞಾನದ ಅಗತ್ಯವೂ ಇದೆ ಎಂದು ಹೇಳಿದರು.ವೈಟಿಎಸ್ಎಸ್‌ನ ಅಧ್ಯಕ್ಷ ರವಿ ಶಾನಭಾಗ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ಸಂಗತಿ. ಇಲ್ಲಿನ ಕಾರ್ಯಕ್ರಮ ಯಶಸ್ವಿಯಾಗಿ ನಡೆದು, ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲಿ ಎಂದು ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ ಮಾತನಾಡಿ, ಸರ್ಕಾರ ಮಕ್ಕಳ ಪ್ರತಿಭೆಗೆ ಅನುಗುಣವಾಗಿ ಸಾಧನೆ ಮಾಡಲು ಇಂತಹ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಆ ನೆಲೆಯಲ್ಲಿ ನಮ್ಮ ತಾಲೂಕಿನ ಪ್ರತಿಭಾವಂತ ಮಕ್ಕಳು ತಾಲೂಕಿಗೆ, ಕೀರ್ತಿ ತರುವಂತಾಗಲಿ ಎಂದರು.ವೇದಿಕೆಯಲ್ಲಿ ಪ್ರಾಂಶುಪಾಲ ಆನಂದ ಹೆಗಡೆ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ, ಪ್ರಾ.ಶಾ.ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಆರ್.ಆರ್. ಭಟ್ಟ, ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜಯ ನಾಯಕ, ತಾಲೂಕಾಧ್ಯಕ್ಷ ಚಂದ್ರಶೇಖರ್, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ನಾಯಕ, ತಾಲೂಕಾಧ್ಯಕ್ಷ ಸದಾನಂದ ನಾಯ್ಕ ಮತ್ತಿತರರು ಇದ್ದರು.
ವೈಷ್ಣವಿ ಸಂಗಡಿಗರು ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರಿಕೊಪ್ಪ ಸ್ವಾಗತಿಸಿದರು. ಶಿಕ್ಷಕ ವಿನೋದ ಭಟ್ಟ ನಿರ್ವಹಿಸಿದರು. ಶಿಕ್ಷಣ ಸಂಯೋಜಕ ಸಂತೋಷ ಜಿಗಳೂರು ವಂದಿಸಿದರು.;Resize=(128,128))
;Resize=(128,128))
;Resize=(128,128))