ಪ್ರತಿಭಾವಂತ ಮಕ್ಕಳು ದೇಶದ ಆಸ್ತಿ: ಶಾಸಕ ಚಿಮ್ಮನಕಟ್ಟಿ

| Published : Dec 11 2024, 12:47 AM IST

ಪ್ರತಿಭಾವಂತ ಮಕ್ಕಳು ದೇಶದ ಆಸ್ತಿ: ಶಾಸಕ ಚಿಮ್ಮನಕಟ್ಟಿ
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳು ದೇಶದ ಆಸ್ತಿ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮವಾಗಿ ಅಭ್ಯಾಸ ಮಾಡಿ ತಂದೆ ತಾಯಿಗಳ, ಸಮಾಜದ ಹಾಗೂ ದೇಶದ ಕೀರ್ತಿ ಹೆಚ್ಚಿಸಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾದಾಮಿ

ಮಕ್ಕಳು ದೇಶದ ಆಸ್ತಿ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮವಾಗಿ ಅಭ್ಯಾಸ ಮಾಡಿ ತಂದೆ ತಾಯಿಗಳ, ಸಮಾಜದ ಹಾಗೂ ದೇಶದ ಕೀರ್ತಿ ಹೆಚ್ಚಿಸಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಪಟ್ಟಣದ ರೇಣುಕಾ ಕೈಗಾರಿಕಾ ತರಬೇತಿ ಕಾಲೇಜಿನಲ್ಲಿ ತಾಲೂಕು ಭಾವಸಾರ ಕ್ಷತ್ರೀಯ ಸಮಾಜದಿಂದ ನಡೆದ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ಪ್ರಜೆಗಳಾಗಿ ರೂಪಿಸಬೇಕಿದೆ. ಸಂಘಟಿತರಾಗಿ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ನಿವೃತ್ತ ನೌಕರರ ಜೀವನ ಅನುಭವಗಳು ಎಲ್ಲರಿಗೂ ಮಾದರಿಯಾಗಿವೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ, ಎಲ್ಲ ಮಕ್ಕಳು ಹಿರಿಯರ ಮಾರ್ಗದರ್ಶನದಲ್ಲಿ, ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ಪಡೆದು ಅತ್ಯುತ್ತಮ ಸಾಧನೆ ಮಾಡಿ ಎಂದು ಸಲಹೆ ನೀಡಿದರು. ತಾಲೂಕು ನಿಕಟಪೂರ್ವ ಕಸಾಪ ಅಧ್ಯಕ್ಷ ರವಿ ಕಂಗಳ ಅತಿಥಿ ಉಪನ್ಯಾಸ ನೀಡಿ, ಶಿಕ್ಷಕರು ಹಾಗೂ ಕವಿಗಳ ಹಲವು ಉದಾಹರಣೆಗಳ ಮೂಲಕ ವಿದ್ಯಾರ್ಥಿಗಳು ಹೇಗೆ ಶಿಕ್ಷಣ ಪಡೆಯಬೇಕು. ಶಿಕ್ಷಣದ ಜೊತೆಗೆ ಸಂಸ್ಕಾರ ಪಡೆದು, ತಾವೆಲ್ಲರೂ ಉತ್ತಮ ಭವಿಷ್ಯ ನಿರ್ಮಾಣ ಮಾಡಿಕೊಳ್ಳಿ ಎಂದು ತಿಳಿಸಿದರು.

ಭಾವಸಾರ ಕ್ಷತ್ರೀಯ ಸಮಾಜದ ತಾಲೂಕಾಧ್ಯಕ್ಷ ಪುಲಿಕೇಶಿ ಬೊಂಬ್ಲೆ ಮಾತನಾಡಿ, ಕಾರ್ಯಕ್ರಮ ಆಯೋಜನೆ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಕಾರ್ಯದರ್ಶಿ ಮನೋಹರ ಹಂಚಾಟೆ ಸಮಾಜದ ಸಂಘಟನೆ ಬಗ್ಗೆ ಮಾತನಾಡಿದರು. ವೇದಿಕೆ ಮೇಲೆ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಿವುಕುಮಾರ ಹಿರೇಮಠ ಇದ್ದರು. ಕಾರ್ಯಕ್ರಮ ಸಂಯೋಜಕ ವಿನಾಯಕ ವೈಕುಂಠೆ ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವದ ಕುರಿತು ತಿಳಿಸಿದರು. ಇದೇ ಸಂದರ್ಭದಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ನಿವೃತ್ತ ನೌಕರರಿಗೆ ಹಾಗೂ ಹಿರಿಯ ನಾಗರಿಕರಿಗೆ ಸನ್ಮಾನಿಸಲಾಯಿತು. ಸಚಿನ ಬಾಸುತ್ಕರ ಸ್ವಾಗತಿಸಿ, ವಿಜಯಕುಮಾರ ವೈಕುಂಠೆ ನಿರೂಪಿಸಿ, ಶ್ರೀಪಾದ ಲಾಂಡೆ ವಂದಿಸಿದರು. ಸಮಾಜದ ಎಲ್ಲ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರು, ಸಮಾಜದ ಎಲ್ಲ ಬಾಂಧವರು ಉಪಸ್ಥಿತರಿದ್ದರು.