ಮೇ 20 ರಂದು ಪ್ರತಿಭಾವತ ವಿದ್ಯಾರ್ಥಿಗಳಿಗೆ ಪುರಸ್ಕಾರ: ಗಂಜಿಗೆರೆ ಮಹೇಶ್

| Published : May 08 2025, 12:32 AM IST

ಮೇ 20 ರಂದು ಪ್ರತಿಭಾವತ ವಿದ್ಯಾರ್ಥಿಗಳಿಗೆ ಪುರಸ್ಕಾರ: ಗಂಜಿಗೆರೆ ಮಹೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯ ಆರ್‌ಟಿಒ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್‌ನಿಂದ ಮೇ 20ರಂದು ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಪಟ್ಟಣದ ಜಯನಗರ ಬಡಾವಣೆಯ ಆರ್‌ಟಿಒ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್‌ನಿಂದ ಮೇ 20ರಂದು ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟಿನ ಅಧ್ಯಕ್ಷ ಅಧ್ಯಕ್ಷ ಗಂಜಿಗೆರೆ ಮಹೇಶ್ ತಿಳಿಸಿದರು.

ಪಟ್ಟಣದ ಶ್ರೀಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಕಾರ್ಯಕ್ರಮ ಕುರಿತು ಮಾಹಿತಿ ನೀಡಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಟ್ಟಣದ ಎಸ್ ಕೆಸಿಎಸ್ ಶಾಲೆ ವಿದ್ಯಾರ್ಥಿನಿ ಜೆ.ಧೃತಿ 625 ಅಂಕ ಪಡೆದು ರಾಜ್ಯದ ಟಾಪರ್ ವಿದ್ಯಾರ್ಥಿಗಳ ಸಾಲಿಗೆ ಸೇರಿ ಮಂಡ್ಯ ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದರು.

ಇವರಂತೆಯೇ ಹಲವು ವಿದ್ಯಾರ್ಥಿಗಳ ಒಂದೆರಡು ಅಂಕಗಳ ಹಿನ್ನಡೆಯಿಂದ ಟಾಪರ್ ಸ್ಥಾನ ಕಳೆದುಕೊಂಡಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಪ್ರೋತ್ಸಾಹಿಸುವ ಕಾರಣಕ್ಕಾಗಿ ರಾಜ್ಯ ಆರ್‌ಟಿಒ ಅಧಿಕಾರಿಗಳಾದ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಅಭಿನಂದಿಸಲಾಗುತ್ತಿದೆ ಎಂದರು.

ಎಸ್ಸೆಸ್ಸೆಲ್ಸಿಯಲ್ಲಿ ಶೇ.95, ಪಿಯುಸಿ ಶೇ.90, ಸಿಬಿಎಸ್ಸಿ ಶೇ.80ರಷ್ಟು ಅಂಕಗಳಿಸಿರುವ 10ನೇ ವಿದ್ಯಾರ್ಥಿಗಳು, ತಾಲೂಕಿನ ಮೂರು ಪದವಿ ಕಾಲೇಜುಗಳಲ್ಲಿ ಬಿಎ, ಬಿಎಸ್ಸಿ, ಬಿ.ಕಾಂ, ಬಿ.ಬಿ.ಎಂ, ಬಿಬಿಎ ಮುಂತಾದ ವಿಭಾಗ ಮತ್ತು ಎಂಜಿನಿಯರಿಂಗ್ ಕಾಲೇಜಿನ ವಿವಿಧ ಕೋರ್ಸ್‌ಗಳಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ತಲಾ ಇಬ್ಬರು ವಿದ್ಯಾರ್ಥಿಗಳು ಹಾಗೂ ಶೇ.100 ರಷ್ಟು ಫಲಿತಾಂಶ ಪಡೆದಿರುವ ಶಾಲೆಗಳ ಮುಖ್ಯಸ್ಥರುಗಳನ್ನು ನಗದು ಪುರಸ್ಕಾರದೊಂದಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಮೇ 20ರಂದು ಟ್ರಸ್ಟ್ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆದಿಚುಂಚಗಿರಿ ಮಹಾ ಸಂಸ್ಥಾನಮಠದ ಪೀಠಾಧಿಪತಿ ಡಾ.ನಿರ್ಮಲಾನಂದನಾಥ ಶ್ರೀಗಳು ಪ್ರತಿಭಾವಂತರನ್ನು ಸನ್ಮಾನಿಸಿ ಆರ್ಶೀವಾದ ಮಾಡಲಿದ್ದಾರೆ. ಹೇಮಗಿರಿ ಶಾಖಾ ಮಠದ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ, ಗವೀಮಠದ ಶ್ರೀಗಳಾದ ಚನ್ನವೀರ ಸಿದ್ದಲಿಂಗ ಸ್ವಾಮೀಜಿ, ತೆಂಡೇಕೆರೆ ಬಾಳೆಹೊನ್ನೋರು ಶಾಖಾ ಮಠದ ಗಂಗಾಧರ ಶಿವಾಚಾರ್ಯ ಸ್ವಾಮೀಗಳು, ಕೆ.ಆರ್.ನಗರದ ಕಾಗಿನೆಲೆ ಸಂಸ್ಥಾನ ಮಠದ ಶಿವಾನಂದ ಪುರಿ ಸ್ವಾಮೀಜಿಗಳು ಸೇರಿದಂತೆ ಐಎಎಸ್, ಐಪಿಎಸ್, ಕೆ.ಎ.ಎಸ್ ಅಧಿಕಾರಿಗಳು ಸೇರಿದಂತೆ ರಾಜ್ಯದ ವಿವಿದೆಡೆ ಸರ್ಕಾರಿ ಸೇವೆ ಸಲ್ಲಿಸುತ್ತಿರುವ ತಾಲೂಕಿನ ಸಾಧಕ ಅಧಿಕಾರಿಗಳು ಹಾಗೂ ಉದ್ಯಮಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಪ್ರತಿಭಾನ್ವಿತ ಆರ್ಹ ವಿದ್ಯಾರ್ಥಿಗಳು ಪಟ್ಟಣದ ಟ್ರಸ್ಟ್ ಕಚೇರಿಗೆ ಮೇ 18 ಸಂಜೆ 5 ಗಂಟೆಯೊಳಗೆ ತಮ್ಮ ಅಂಕ ಪಟ್ಟಿಗಳೊಂದಿಗೆ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಕಸಾಪ ಮಾಜಿ ಅಧ್ಯಕ್ಷರಾದ ಕೆ.ಆರ್.ನೀಲಕಂಠ, ಎಂ.ಕೆ.ಹರಿಚರಣತಿಲಕ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅರುಣಕುಮಾರ್, ಪುರ ಮಲೆ ಮಹದೇಶ್ವರ ಶ್ರೀಕ್ಷೇತ್ರದ ಶ್ರೀಬಸಪ್ಪ ಗುರುಗಳು ಉಪಸ್ಥಿತರಿದ್ದರು.