ಸುಂಟಿಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದಿ. ಶ್ರೀ.ಸಾಯಿನಾಥ್ ಸ್ಮರಣಾರ್ಥ ದತ್ತಿನಿಧಿ ಕಾರ್ಯಕ್ರಮ
ಸುಂಟಿಕೊಪ್ಪ: ಶಿವರಾಮ ಕಾರಂತರು ಗೋಕಾಕ್ ಚಳುವಳಿಯ ನೇತೃತ್ವ ವಹಿಸಿದ್ದ ವೇಳೆ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪ್ರಚಾರ ಮಾಹಿತಿ ಕಾರ್ಯಾಗಾರಗಳನ್ನು ನಡೆಸಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಎಫ್. ಸಬಾಸ್ಟಿನ್ ಹೇಳಿದರು.
ಶುಕ್ರವಾರ ಸುಂಟಿಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದಿ. ಶ್ರೀ.ಸಾಯಿನಾಥ್ ಸ್ಮರಣಾರ್ಥ ದತ್ತಿನಿಧಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಸಾಹಿತ್ಯ ಕ್ಷೇತ್ರಕ್ಕೂ ಸುಂಟಿಕೊಪ್ಪಕ್ಕೂ ಅವಿನಾಭವ ಸಂಬಂಧವಿದೆ. ಮಹಾತ್ಮ ಗಾಂಧಿಜೀ ಹಾಗೂ ರಾಷ್ಟ್ರಕವಿ ಕುವೆಂಪು, ದರಾಬೇಂದ್ರ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ಶಿವರಾಮ ಕಾರಂತರು ಕನ್ನಡ ವೃತ್ತದ ಮೂಲಕ ನಡೆದಾಡಿರುವುದು ಮಹತ್ವದ ವಿಚಾರ ಎಂದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಲತಾ ಅಧ್ಯಕ್ಷತೆ ವಹಿಸಿದ್ದರು. ದತ್ತಿನಿಧಿ ಕಾರ್ಯಕ್ರಮದ ಭಾಗವಾಗಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಕಾಲೇಜು ಉಪನ್ಯಾಸಕಿ ಸುನೀತಾ ಗಿರೀಶ್ ನಡೆಸಿಕೊಟ್ಟರು.ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಲೀಲಾವತಿ, ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ನಿರ್ದೇಶಕ ಬಿ.ಡಿ.ರಾಜುರೈ, ಕೊಡಗು ಪತ್ರಕರ್ತರ ಸಂಘದ ಹಿರಿಯ ಸದಸ್ಯ ಕೆ.ಎಚ್.ಶಿವಣ್ಣ, ದತ್ತಿನಿಧಿ ಕಾರ್ಯಕ್ರಮದ ಭಾಗವಾಗಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಕಾಲೇಜು ಉಪನ್ಯಾಸಕಿ ಸುನೀತಾ ಗಿರೀಶ್ ನಡೆಸಿಕೊಟ್ಟರು. ಸಮಾರಂಭದ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಲೀಲಾವತಿ, ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ನಿರ್ದೇಶಕ ಬಿ.ಡಿ.ರಾಜುರೈ, ಕೊಡಗು ಪತ್ರಕರ್ತರ ಸಂಘದ ಹಿರಿಯ ಸದಸ್ಯ ಕೆ.ಎಚ್.ಶಿವಣ್ಣ ಇದ್ದರು.