ಹೊಸಕೋಟೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

| Published : Feb 13 2024, 12:48 AM IST

ಸಾರಾಂಶ

ಮುಖಂಡರೆಲ್ಲಾ ಚರ್ಚಿಸಿ ಈ ಬಾರಿ ಸಮ್ಮೇಳನಾಧ್ಯಕ್ಷರನ್ನಾಗಿ ತಾಲೂಕಿನ ಸಾಹಿತಿ ದೊಡ್ಡಹುಲ್ಲೂರು ರುಕ್ಕೋಜಿ ರಾವ್ ರನ್ನು ಆಯ್ಕೆ ಮಾಡಲಾಗಿದ್ದು, ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.

ಮಾರ್ಚ್ 2ಕ್ಕೆ ಆಯೋಜನೆ । ತಹಸೀಲ್ದಾರ್ ವಿಜಯ್ ಕುಮಾರ್, ಕಸಾಪ ತಾಲೂಕಾಧ್ಯಕ್ಷರ ನೇತೃತ್ವದಲ್ಲಿ ಸಭೆ

ಕನ್ನಡಪ್ರಭ ವಾರ್ತೆ ಹೊಸಕೋಟೆ

ಕನ್ನಡ ಸಾಹಿತ್ಯ ಪರಿಷತ್ ನ ತಾಲೂಕು ಸಮ್ಮೇಳನವನ್ನು ಮಾರ್ಚ್ 2 ರಂದು ತಾಲೂಕು ಕಚೇರಿಯ ಆವರಣದಲ್ಲಿ ಎಲ್ಲರ ಸಹಕಾರದಿಂದ ಆಚರಿಸಲಾಗುವುದು ಎಂದು ತಹಸೀಲ್ದಾರ್ ಎಂ. ವಿಜಯ್ ಕುಮಾರ್ ತಿಳಿಸಿದರು.

ನಗರದ ತಹಸೀಲ್ದಾರ್ ಕಚೇರಿಯಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಗಣ್ಯರೊಂದಿಗೆ ಕನ್ನಡ ಸಾಹಿತ್ಯ ಪರಿಷತ್ ನ ತಾಲೂಕು ಮಟ್ಟದ ಸಮ್ಮೇಳನ ಆಚರಣೆ ಸಂಬಂಧ ಪೂರ್ವಭಾವಿ ಸಭೆ ಕರೆಯಲಾಗಿತ್ತು.

ಮುಖಂಡರೆಲ್ಲಾ ಚರ್ಚಿಸಿ ಈ ಬಾರಿ ಸಮ್ಮೇಳನಾಧ್ಯಕ್ಷರನ್ನಾಗಿ ತಾಲೂಕಿನ ಸಾಹಿತಿ ದೊಡ್ಡಹುಲ್ಲೂರು ರುಕ್ಕೋಜಿ ರಾವ್ ರನ್ನು ಆಯ್ಕೆ ಮಾಡಲಾಗಿದ್ದು, ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ ನ ತಾಲೂಕು ಅಧ್ಯಕ್ಷ ಎಚ್. ಎಂ. ಮುನಿರಾಜ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ. ಎನ್. ಬಚ್ಚೇಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಚ್. ಮುನಿಯಪ್ಪ, ಶಾಸಕ ಶರತ್ ಬಚ್ಚೇಗೌಡ, ಕನ್ನಡ ಸಾಹಿತ್ಯ ಪರಿಷತ್ ನ ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಷಿ, ಬೆಂಗಳೂರು ಗ್ರಾಮಾಂತರ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಕೃಷ್ಣಪ್ಪ ಹಾಗೂ ಇನ್ನೂ ಅನೇಕ ಗಣ್ಯರು ಬಾಗವಹಿಸಲಿದ್ದು, ವಿವಿಧ ಕಲಾ ತಂಡಗಳು ಕವಿಗೋಷ್ಠಿ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅದ್ಧೂರಿಯಾಗಿ ಆಚರಿಸಲಾಗುವುದು. ಕೇವಲ ಕನ್ನಡಿಗರಿಗೆ ಮಾತ್ರವಲ್ಲದೇ ಅನ್ಯಭಾಷಿಕರನ್ನೂ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಮನವಿ ಮಾಡಲಾಯಿತು.

ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತ ಜಹೀರ್ ಅಬ್ಬಾಸ್, ಮುಖಂಡರಾದ ಗುಟ್ಟಳ್ಳಿ ನಾಗರಾಜ್ ಬಚ್ಚಣ್ಣ, ನಾಗರಾಜ್, ಬಚ್ಚೇಗೌಡ, ವಿಜಯ್ ಕುಮಾರ್, ರಾಜಗೋಪಾಲ್, ಚಿನ್ನಸ್ವಾಮಿ, ನಾರಾಯಣಸ್ವಾಮಿ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ದಿವ್ಯ, ಹಿಂದುಳಿದ ವರ್ಗಗಳ ಇಲಾಖಾ ಅಧಿಕಾರಿ ಪ್ರೀತಿ, ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ನಾರಾಯಣಸ್ವಾಮಿ ಹಾಗೂ ವಿವಿಧ ಮುಖಂಡರು ಹಾಜರಿದ್ದರು.

-----------------------

ಫೋಟೋ: 12 ಹೆಚ್‌ಎಸ್‌ಕೆ 1

ಹೊಸಕೋಟೆಯ ತಾಲೂಕು ಕಚೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಆಚರಣೆಗಾಗಿ ತಹಸೀಲ್ದಾರ್ ವಿಜಯ್ ಕುಮಾರ್, ಕಸಾಪ ಅಧ್ಯಕ್ಷ ರಾಜ ಆರ್ಟ್ಸ್ ಮುನಿರಾಜು ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.