ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ. ಬೆಳವಾಡಿ ಮಂಜುನಾಥ

| Published : Jan 16 2024, 01:46 AM IST

ಸಾರಾಂಶ

ಚಿಕ್ಕಮಗಳೂರು ತಾಲೂಕಿನ ಶಿರವಾಸೆ ಗ್ರಾಮದಲ್ಲಿ ಫೆ. 19 ರಂದು ಆಯೋಜಿಸಿರುವ 4ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಉಪನ್ಯಾಸಕ ಡಾ. ಬೆಳವಾಡಿ ಮಂಜುನಾಥ ಆಯ್ಕೆಯಾಗಿದ್ದಾರೆ.

ಚಿಕ್ಕಮಗಳೂರು: ತಾಲೂಕಿನ ಶಿರವಾಸೆ ಗ್ರಾಮದಲ್ಲಿ ಫೆ. 19 ರಂದು ಆಯೋಜಿಸಿರುವ 4ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಉಪನ್ಯಾಸಕ ಡಾ. ಬೆಳವಾಡಿ ಮಂಜುನಾಥ ಆಯ್ಕೆಯಾಗಿದ್ದಾರೆ.

ಚಿಕ್ಕಮಗಳೂರು ತಾಲೂಕು ಬೆಳವಾಡಿ ಗ್ರಾಮದವರಾದ ಮಂಜುನಾಥ ಮೈಸೂರು ವಿವಿ ಯಿಂದ ಕನ್ನಡ ಎಂಎ ಪದವಿಯನ್ನು 4 ಚಿನ್ನದ ಪದಕದೊಂದಿಗೆ ಪಡೆದಿದ್ದು, ಸಮಾಜಶಾಸ್ತ್ರದಲ್ಲಿ ಎಂಎ ಮತ್ತು ಬಿಇಡಿ ಪದವಿಯಲ್ಲಿ ಉನ್ನತ ಶ್ರೇಣಿ ಗಳಿಸಿದ್ದಾರೆ. ಜಾನಪದದಲ್ಲಿ ಡಿಪ್ಲೊಮಾ ಪದವೀಧರರಾಗಿದ್ದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿಗಳಿಸಿದ್ದಾರೆ.

ಕಳೆದ ಮೂವತ್ತು ವರ್ಷಗಳಿಂದ ಚನ್ನರಾಯಪಟ್ಟಣ, ಮೈಸೂರು, ಮೂಡಿಗೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ್ದು. ಪ್ರಸ್ತುತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ಪಠ್ಯಪುಸ್ತಕ ಸಮಿತಿ ಸದಸ್ಯರಾಗಿ, ಪರಿಶೀಲಕರಾಗಿ ಹನ್ನೆರಡು ಪುಸ್ತಕಗಳ ರಚನಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಹತ್ತಾರು ಕಾರ್ಯಾಗಾರಗಳಲ್ಲಿ ತರಬೇತಿ ನೀಡುತ್ತಾ ಬಂದಿದ್ದಾರೆ.

ವಕ್ತಿತ್ವವಿಕಸನ ತರಗತಿಗಳನ್ನು ನಡೆಸಿಕೊಟ್ಟಿದ್ದಾರೆ. ರಾಜ್ಯದ ಪ್ರತಿಷ್ಠಿತ ಕಾಲೇಜುಗಳಲ್ಲಿ ವಿಶೇಷ ಉಪನ್ಯಾಸಕರಾದ ಪ್ರೌಢಿಮೆ ಇವರದ್ದು. ನೂರಕ್ಕೂ ಹೆಚ್ಚು ಗಮಕ ಕಾರ್ಯಕ್ರಮಗಳಲ್ಲಿ ವ್ಯಾಖ್ಯಾನಕಾರರಾಗಿರುವ ಹಿರಿಮೆ ಇವರದ್ದು.

ಪೋಟೋ ಫೈಲ್‌ ನೇಮ್‌ 15 ಕೆಸಿಕೆಎಂ 4