ತಾಲೂಕು ಕಸಾಪ ಸಭೆ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

| Published : Oct 27 2025, 12:30 AM IST

ತಾಲೂಕು ಕಸಾಪ ಸಭೆ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಸಭೆ ಅಧ್ಯಕ್ಷ ಎಸ್‌ ಡಿ ವಿಜೇತ್‌ ಅಧ್ಯಕ್ಷತೆಯಲ್ಲಿ ಸಾಹಿತ್ಯ ಭವನದಲ್ಲಿ ಈಚೆಗೆ ನಡೆಯಿತು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಭೆ, ಅಧ್ಯಕ್ಷ ಎಸ್.ಡಿ. ವಿಜೇತ್ ಅವರ ಅಧ್ಯಕ್ಷತೆಯಲ್ಲಿ ಸಾಹಿತ್ಯ ಭವನದಲ್ಲಿ ಈಚೆಗೆ ನಡೆಯಿತು.ಸಭೆಯಲ್ಲಿ ಪರಿಷತ್ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಚರಿಸುವಂತೆ ತೀರ್ಮಾನಿಸಲಾಯಿತು. ಶಾಲಾ, ಕಾಲೇಜು ಮಕ್ಕಳಿಗೆ ಚಿತ್ರಬಿಡಿಸುವ ಸ್ಪರ್ಧೆ, ಕ್ವಿಜ್ ಸೇರಿದಂತೆ ವಿವಿಧ ಸ್ಪರ್ಧೆಗಳು ಹಾಗೂ ಕನ್ನಡ ಸಾಹಿತ್ಯ ಕ್ಷೇತ್ರದ ಸಾಧಕರನ್ನು ಸನ್ಮಾನಿಸುವಂತೆ ತೀರ್ಮಾನಿಸಲಾಯಿತು.ಸಭೆಯಲ್ಲಿ ಗೌರವ ಕಾರ್ಯದರ್ಶಿಗಳಾದ ಜ್ಯೋತಿ ಅರುಣ್, ಎ.ಪಿ. ವೀರರಾಜು, ಜಿಲ್ಲಾ ಕಾರ್ಯದರ್ಶಿ ಜಲಜಾ ಶೇಖರ್ ಕಸಾಪ ಮಾಜಿ ಅಧ್ಯಕ್ಷರಾದ ಜೆ.ಸಿ.ಶೇಖರ್, ಎಚ್.ಜೆ. ಜವರಪ್ಪ ಇದ್ದರು.