ಕುಶಾಲನಗರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ನಡೆಯಿತು.
ಕುಶಾಲನಗರ: ಕುಶಾಲನಗರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ನಡೆಯಿತು.
ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿ ಬಗ್ಗೆ ಚರ್ಚೆ ನಡೆಯಿತು. ಕಳೆದ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ನಡಾವಳಿ ಮತ್ತು ಸಂಬಂಧಿಸಿದ ಇಲಾಖೆಗಳಿಂದ ಬಂದ ಅನುಪಾಲನಾ ವರದಿಗಳ ಬಗ್ಗೆ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಯಿತು. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಫಲಾನುಭವಿಗಳಿಗೆ ನೀಡುವ ಗೃಹಲಕ್ಷ್ಮಿ ಯೋಜನೆಯ ಹಣ ಮರಣ ಹೊಂದಿದ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆಯಾಗುತ್ತಿರುವ ಪ್ರಕರಣಗಳ ಬಗ್ಗೆ ಚರ್ಚಿಸಿ ಆ ರೀತಿಯ ಪ್ರಕರಣಗಳು ಇದ್ದಲ್ಲಿ ಹಣವನ್ನು ಸರ್ಕಾರಕ್ಕೆ ಜಮೆ ಮಾಡುವಂತೆ ಮತ್ತು ಜಮೆ ಮಾಡಿದ ವಿವರವನ್ನು ಸಲ್ಲಿಸಲಾಗುವುದು.ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಡಿಯಲ್ಲಿ ಸಿದ್ದಾಪುರದಿಂದ ಬೆಂಗಳೂರಿಗೆ ರಾತ್ರಿ ವೇಳೆ ಬಸ್ ಸೌಲಭ್ಯ ಕಲ್ಪಿಸುವ ಬಗ್ಗೆ ಹಾಗೂ ಕುಶಾಲನಗರದಲ್ಲಿ ನಿರ್ಮಾಣಗೊಂಡ ನೂತನ ಬಸ್ ಡಿಪೋ ಕಾಮಗಾರಿ ಪ್ರಗತಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಅಧಿಕಾರಿಗಳು ಸಮರ್ಪಕ ಮಾಹಿತಿ ಒದಗಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷರಾದ ವಿ.ಪಿ. ಶಶಿಧರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಸರ್ವೆ ಕಾರ್ಯದ ಬಗ್ಗೆ ಸೆಸ್ಕಾಂ ಅಧಿಕಾರಿಗಳ ಮೂಲಕ ಮಾಹಿತಿ ಪಡೆಯಲಾಯಿತು.
ತಾಪಂ ಕಾರ್ಯನಿರ್ವಹಣಾಧಿಕಾರಿ ಕೆ.ಸಿ. ಅಪ್ಪಣ್ಣ, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಕೆ.ಸಿ. ಶಶಿ ಭೀಮಯ್ಯ, ಜಿಲ್ಲಾ ಸದಸ್ಯರಾದ ಅಣ್ಣಯ್ಯ, ತಾಲೂಕು ಸದಸ್ಯ ಕೃಷ್ಣೇಗೌಡ, ಬಿ.ಸಿ. ಮಲ್ಲಿಕಾರ್ಜುನ, ಕೆ.ಇ. ಅಬ್ದುಲ್ ರಜಾಕ್, ಫಿಲೋಮಿನಾ ಎಚ್. ಎನ್. , ರಾಜಶೇಖರ್ ಎಸ್.ಎನ್. ವಿವೇಕಾನಂದ ಎಸ್.ಎ., ಶ್ರೀನಿವಾಸ್, ಯು.ಎಂ. ಕಿಶೋರ್, ಎಚ್. ಯು. ರಫೀಕ್ ಖಾನ್, ಎನ್. ಶ್ರೀನಿವಾಸ್ ಕುಮಾರ್, ಎಂ.ಎ. ಆದಂ ಇದ್ದರು.