ಕಾಟಾಚಾರಕ್ಕೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟ

| Published : Jan 24 2024, 02:00 AM IST

ಸಾರಾಂಶ

ಕಾಟಚಾರಕ್ಕೆ ಮಾಡಿದ ತಾಲೂಕು ಕ್ರೀಡಾಕೂಟ

ಕನ್ನಪ್ರಭ ವಾರ್ತೆ ಚಾಮರಾಜನಗರ

ಜಿಲ್ಲಾಡಳಿತ, ಜಿ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರದಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ಕಾಟಾಚಾರಕ್ಕೆ ನಡೆಸಿದಂತೆ ಇತ್ತು.

ಕ್ರೀಡಾಕೂಟವನ್ನು ಉದ್ಘಾಟಿಸಬೇಕಾಗಿದ್ದ ಶಾಸಕ ಸಿ.ಪುಟ್ಟರಂಗಶೆಟ್ಟಿ, ನಗರಸಭೆ ಸದ್ಯಸರಾದ ಸಿ.ಜಿ. ಚಂದ್ರಶೇಖರ್, ತಹಸೀಲ್ದಾರ್ ಬಸವರಾಜು, ತಾ.ಪಂ ಇಒ ಪೂರ್ಣಿಮ, ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ಸೋಮಣ್ಣೇಗೌಡ ಗೈರಾಗಿದ್ದರು. ಪ್ರಚಾರವಿದ್ದರೂ ಬೆರಳಿಣಿಕೆಯಷ್ಟು ಕ್ರೀಡಾಪಟುಗಳು ಮಾತ್ರ ಭಾಗವಹಿಸಿದ್ದರು.

ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಸದಸ್ಯ ವಿ ಶ್ರೀನಿವಾಸ್ ಪ್ರಸಾದ್ ಗುಂಡು ಎಸೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು, ಬಳಿಕ ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಕೋಟ್ಯಾಂತರ ರು. ಅನುದಾನವನ್ನು ನೀಡುತ್ತವೆ, ಕ್ರೀಡಾಪಟುಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕ್ರೀಡೆ ಎಂದರೆ ಶಿಸ್ತು, ಸಂಯಮ, ಏಕಾಗ್ರತೆ ಇವುಗಳನ್ನು ಮೈಗೂಡಿಸಿಕೊಂಡು ಕಠಿಣ ಅಭ್ಯಾಸ ಮಾಡಿದರೆ ಕ್ರೀಡೆಯಲ್ಲಿ ಯಶಸ್ಸು ಸಿಗುತ್ತದೆ, ಸ್ಪರ್ಧೆಯಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.

ಕಳೆದ ೨೩ ವರ್ಷಗಳಿಂದ ಕುಂಟುತ್ತ ಸಾಗುತ್ತಿರುವ ಜಿಲ್ಲಾ ಕ್ರೀಡಾಂಗಣದ ಕಾಮಗಾರಿಗೆಯನ್ನು ಶೀಘ್ರವಾಗಿ ಮುಗಿಸಲು ಈಗಾಗಲೇ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ, ಜಿಲ್ಲಾಧಿಕಾರಿಗಳು ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದರು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಬಸವರಾಜು ಸಮಾರಂಭ ಉದ್ಘಾಟಿಸಿ ಮಾತನಾಡಿ, ಸರ್ಧೆಯಲ್ಲಿ ಭಾಗವಹಿಸುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದರು. ಗ್ರಾಮೀಣ ಕ್ರೀಡಾಪಟುಗಳುನಿರೀಕ್ಷಿತ ಮಟ್ಟದಲ್ಲಿ ಭಾಗವಹಿಸಿಲ್ಲ, ಜಿಲ್ಲಾ ಕ್ರೀಡಾಂಗಣದಲ್ಲಿ ಮೂಲಭೂತ ಸೌಕರ್ಯಕ್ಕೆ ಚುನಾಯಿತ ಪ್ರತಿನಿಧಿಗಳು ಗಮನಹರಿಸಬೇಕು ಎಂದು ಮನವಿ ಮಾಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್. ಶಿವಸ್ವಾಮಿ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಅಧ್ಯಕ್ಷ ನಾಗಣ್ಣ. ಉಪಾಧ್ಯಕ್ಷ ಎನ್ ಜೋಸೆಫ್. ತಾಲೂಕು ಅಧ್ಯಕ್ಷ. ಚಿಕ್ಕಬಸವಯ್ಯ. ಜಿಲ್ಲಾ ಕಾರ್ಯದರ್ಶಿ ಕುಮಾರಸ್ವಾಮಿ, ಕ್ರೀಡೆ ಇಲಾಖೆ ದ್ವಿತೀಯ ದರ್ಜೆ ಸಹಾಯಕ. ಮಧು. ಇಲಾಖೆ ರಂಗಸ್ವಾಮಿ. ಮಂಜುನಾಥ್, ಇದ್ದರು.