ಸಾರಾಂಶ
ತಮಿಳುನಾಡಿನ ಸಾಕಷ್ಟು ಮಂದಿಯಂತೆ ದುರ್ಗಾ ಅವರು ಕೊಲ್ಲೂರು ಮೂಕಾಂಬಿಕೆಯ ವಿಶೇಷ ಭಕ್ತೆಯಾಗಿದ್ದಾರೆ. ಅವರು ತನ್ನ ಕೆಲವು ಸ್ನೇಹಿತೆಯರೊಂದಿಗೆ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅವರನ್ನು ದೇವಾಲಯದ ವತಿಯಿಂದ ಬರ ಮಾಡಿಕೊಂಡು ಗೌರವಿಸಲಾಯಿತು.
ಮೂಕಾಂಬಿಕೆಯ ಭಕ್ತೆ ದುರ್ಗಾರಿಂದ ದೇವಿಗೆ ಚಿನ್ನದ ಕಿರೀಟ
ಕನ್ನಡಪ್ರಭ ವಾರ್ತೆ ಉಡುಪಿಅತ್ತ ಮಗ ಸನಾತನ ಹಿಂದೂ ಧರ್ಮವನ್ನು ಉಗ್ರವಾಗಿ ದೂಷಿಸುತಿದ್ದರೆ, ಇತ್ತ ತಾಯಿ ಮಾತ್ರ ಹಿಂದೂ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಪ್ರಾರ್ಥನೆಗಳನ್ನು ಸಲ್ಲಿಸುತ್ತಿದ್ದಾರೆ.ತಮಿಳುನಾಡು ಸಿಎಂ ಸ್ಟಾಲಿನ್ ಅವರ ಪತ್ನಿ ದುರ್ಗಾ, ಶುಕ್ರವಾರ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ, ಮಾತ್ರವಲ್ಲ ತಾಯಿ ಮೂಕಾಂಬಿಕೆಗೆ ಚಿನ್ನದ ಕಿರೀಟವನ್ನೂ ಒಪ್ಪಿಸಿದ್ದಾರೆ.ತಮಿಳುನಾಡಿನ ಸಾಕಷ್ಟು ಮಂದಿಯಂತೆ ದುರ್ಗಾ ಅವರು ಕೊಲ್ಲೂರು ಮೂಕಾಂಬಿಕೆಯ ವಿಶೇಷ ಭಕ್ತೆಯಾಗಿದ್ದಾರೆ. ಅವರು ತನ್ನ ಕೆಲವು ಸ್ನೇಹಿತೆಯರೊಂದಿಗೆ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅವರನ್ನು ದೇವಾಲಯದ ವತಿಯಿಂದ ಬರ ಮಾಡಿಕೊಂಡು ಗೌರವಿಸಲಾಯಿತು.ಪತಿ ಸ್ಟಾಲಿನ್ ಮತ್ತು ಪುತ್ರ ಉದಯನಿಧಿ ಸ್ಟಾಲಿನ್ ಅವರು ನಿರಂತರವಾಗಿ ಸನಾತನ ಧರ್ಮವನ್ನು ಟೀಕೆ ಮಾಡುತ್ತಿದ್ದಾರೆ. ಆದರೆ ಅವರಿಂದ ಭಿನ್ನ ವಿಚಾರಧಾರೆಯನ್ನು ಹೊಂದಿರುವ ದುರ್ಗಾ, ದಕ್ಷಿಣ ಭಾರತದ ವಿವಿಧ ದೇಗುಲಗಳಿಗೆ ಭೇಟಿ ನೀಡಿ ಕೊಡುಗೆಗಳನ್ನು ನೀಡುತ್ತಿದ್ದಾರೆ. ಅದರಂತೆ ತೀರಾ ಖಾಸಗಿಯಾಗಿ ಕೊಲ್ಲೂರಿಗೆ ಬಂದ ಅವರು ಮೂಕಾಂಬಿಕಾ ದೇವಿಗೆ ಚಿನ್ನದ ಕಿರೀಟವನ್ನೂ ಸಮರ್ಪಿಸಿದ್ದಾರೆ.