ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್. ನಗರದೇಶದ ಕಾನೂನಿನ ಬಗ್ಗೆ ಎಲ್ಲರೂ ಸರಿಯಾಗಿ ಓದಿ ತಿಳಿದುಕೊಂಡು ಅದನ್ನು ಪಾಲಿಸಬೇಕಾದುದು ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಸ್. ಚಂದನ್ ಹೇಳಿದರು.ಪಟ್ಟಣದ ತಾಪಂನ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಕಾರ್ಮಿಕ ಇಲಾಖೆ, ತಾಲೂಕು ಆಡಳಿತ, ಶಿಕ್ಷಣ ಇಲಾಖೆ, ಆರಕ್ಷಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ. ಕೆ.ಆರ್. ನಗರ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಐಇಸಿ ಚಟುವಟಿಕೆಗಳ ಕಾರ್ಯಾಗಾರ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಬಾಲಕಾರ್ಮಿಕ ಕಿಶೋರ ಕಾರ್ಮಿಕರ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ನೆಲದ ಕಾನೂನು ಪ್ರತಿಯೊಬ್ಬ ನಾಗರೀಕನಿಗೂ ಅನ್ವಯವಾಗಲಿದ್ದು, ಹುಟ್ಟಿನಿಂದ ಸಾಯುವವರೆಗೂ ದೇಶದ ಪ್ರತಿಯೊಬ್ಬ ಪ್ರಜೆಯು ಕಾನೂನಿನ ಪರಿಧಿಯಲ್ಲಿ ಬದುಕು ನಡೆಸಬೇಕು. ಆದರೆ ಕೆಲವು ಜನರು ಕಾನೂನಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದ್ದು ಇದು ರಾಷ್ಟ್ರದ ಅಭಿವೃದ್ಧಿಗೆ ಮಾರಕವಾಗಿದೆ ಎಂದರು.ತಪ್ಪು ತಿಳುವಳಿಕೆ ಮತ್ತು ಜವಬ್ದಾರಿ ಕಳೆದುಕೊಳ್ಳುವ ಬುದ್ದಿಯಿಂದ ಚಿಕ್ಕ ಮಕ್ಕಳಿಗೆ ಮದುವೆ ಮಾಡುವ ಪರಿಪಾಠ ದಿನೇ ದಿನೇ ಹೆಚ್ಚಾಗುತ್ತಿದ್ದು ಈ ವಿಚಾರವನ್ನು ಪೋಷಕರು ಮನಸ್ಸಿನಿಂದ ತೆಗೆದು ಜವಾಬ್ದಾರಿಯಿಂದ ವರ್ತಿಸಿ ಭವಿಷ್ಯದ ಪ್ರಜೆಗಳಾಗಿರುವ ಮಕ್ಕಳ ಬದುಕಿಗೆ ಸದೃಢವಾದ ಅಡಿಪಾಯ ಹಾಕಿಕೊಡಬೇಕು ಎಂದು ಅವರು ಸಲಹೆ ನೀಡಿದರು.ಸರ್ಕಾರ ಜನಸಾಮಾನ್ಯರ ಅಭಿವೃದ್ಧಿಗಾಗಿ ಕಾನೂನುಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಹಾಗಾಗಿ ಪ್ರತಿಯೊಬ್ಬರೂ ಅತ್ಯಂತ ಜಾಗರೂಕರಾಗಿ ಕಾನೂನು ಗೌರವಿಸುವುದನ್ನು ರೂಢಿಸಿಕೊಳ್ಳಬೇಕು. ಒಂದು ವೇಳೆ ಕಾನೂನಿನ ಬಗ್ಗೆ ತೊಂದರೆಗಳಿದ್ದರೆ ಕಾನೂನು ಸೇವಾ ಸಮಿತಿಗೆ ದೂರು ನೀಡಿ ಅಗತ್ಯ ಸಲಹೆ ಪಡೆಯಬೇಕು ಎಂದರು.ತಹಸೀಲ್ದಾರ್ ಜಿ. ಸುರೇಂದ್ರಮೂರ್ತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ಎಂ. ಅಣ್ಣಯ್ಯ, ಮೈಸೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ಎ.ಆರ್. ವೀಣಾ, ಮೈಸೂರಿನ ಹಿರಿಯ ಕಾರ್ಮಿಕ ನಿರೀಕ್ಷಕಿ ಬಿ. ಮಂಗಳಗೌರಿ, ಪ್ಯಾನಲ್ ವಕೀಲೆ ಕೆ. ಪ್ರಭಾವತಿ, ತಾಲೂಕು ಕಾರ್ಮಿಕ ನಿರೀಕ್ಷಕ ಎಚ್.ಕೆ. ಗೋವಿಂದರಾಜು ಮಾತನಾಡಿದರು.ಮೈಸೂರು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ನಿರ್ದೇಶಕ ಎಚ್.ಪಿ. ಮಲ್ಲಿಕಾರ್ಜುನ್, ತಾ.ಪಂ. ಕಚೇರಿ ವ್ಯವಸ್ಥಾಪಕ ಕೆ.ಎಸ್. ಸತೀಶ್ ಕುಮಾರ್, ಕಾರ್ಮಿಕ ನಿರೀಕ್ಷಕರ ಕಚೇರಿ ಸಿಬ್ಬಂದಿ ಚಂದ್ರಕಾಂತ, ಧನುಷ, ಶ್ರೀವೀರಭದ್ರೇಶ್ವರ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಬಿ.ಎಚ್. ಕುಮಾರ್, ಪ್ರಧಾನ ಕಾರ್ಯದರ್ಶಿ ಕೆ.ಎಸ್. ನಟರಾಜ್, ನಿರ್ದೇಶಕ ತಿರುಮಲ್ಲೇಶ ಮೊದಲಾದವರು ಇದ್ದರು.