ಸಾರಾಂಶ
ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಐದು ವರ್ಷಗಳ ಆಡಳಿತ ಮಂಡಳಿಯ ಅಧಿಕಾರವಧಿ ಮುಕ್ತಾಯವಾಗಿದೆ. ನ.2ಕ್ಕೆ ನಿರ್ದೇಶಕರ ಆಯ್ಕೆಗೆ ಚುನಾವಣೆ ದಿನಾಂಕ ನಿಗದಿಯಾಗಿದ್ದು, ಇನ್ನು ಚುನಾವಣೆ ವೇಳಾಪಟ್ಟಿ ಪ್ರಕಟವಾಗಿಲ್ಲ. ಈ ನಡುವೆ ರಾಜಕೀಯ ಕ್ಷೇತ್ರದಲ್ಲಿ ಚುನಾವಣಾ ಸಿದ್ಧತೆಗಳು ಬಿರುಸುಗೊಂಡಿವೆ.
ರಾಜಕೀಯ ಪ್ರವೇಶಕ್ಕೆ ಮೆಟ್ಟಿಲುಗಳಾ ಗಿರುವ ಸಹಕಾರ ಕ್ಷೇತ್ರದ ಚುನಾವಣೆಗಳು ರಾಜಕೀಯ ಹೊರತಾಗಿದ್ದರೂ, ರಾಜಕೀಯ ದ ಸೋಂಕಿಲ್ಲದೇ ಚುನಾವಣೆ ನಡೆಯದು ಎನ್ನುವಷ್ಟು ಮಟ್ಟಿಗೆ ಮಹತ್ವ ಪಡೆದಿವೆ. ಈ ದಿಸೆಯಲ್ಲಿಈಗಾಗಲೇ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ಮುಖಂಡರು ಟಿಎಪಿಸಿ ಎಂಎಸ್ ಚುನಾವಣೆಗೆ ಸಂಬಂಧಿಸಿದಂತೆ ಸಭೆಗಳನ್ನು ನಡೆಸಿ, ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳ ಪಟ್ಟಿಯಲ್ಲಿ ತೊಡಗಿದ್ದಾರೆ.ಟಿಎಪಿಎಂಸಿಎಸ್ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ. ''''''''ಬಿ'''''''' ತರಗತಿ ಯಿಂದ(ಷೇರುದಾರರು) 6,557 ಜನ ಮತದಾರರು ಇದ್ದಾರೆ. ತಾಲೂಕಿನ ವ್ಯವ ಸಾಯ ಸೇವಾ ಸಹಕಾರ ಸಂಘಗಳಿಂದ ''''''''ಎ'''''''' ತರಗತಿಗೆ 20 ಮತದಾನ ಪ್ರತಿನಿಧಿಗಳಾಗಿ ಆಯ್ಕೆಯಾಗಿ ಬಂದಿದ್ದಾರೆ.
13 ನಿರ್ದೇಶಕ ಸ್ಥಾನಗಳನ್ನು ಹೊಂದಿರುವ ಟಿಎಪಿಎಂಸಿಎಸ್ ನಲ್ಲಿ ''''''''ಎ'''''''' ತರಗತಿಗೆ ಸ್ಥಾನ, ''''''''ಬಿ'''''''' ತರಗತಿಗೆ 8 ಸ್ಥಾನಗಳಿವೆ. 8 ನಿರ್ದೇಶಕ ಸ್ಥಾನಗಳ ಪೈಕಿ 2 ಸಾಮಾನ್ಯ ಅಭ್ಯರ್ಥಿಗಳಿಗೆ, 1 ಬಿಸಿಎಂ ''''''''ಬಿ'''''''', 1 ಬಿಸಿಎಂ ''''''''ಎ'''''''', 2 ಮಹಿಳಾ ಅಭ್ಯರ್ಥಿಗಳಿಗೆ, 1 ಪರಿಶಿಷ್ಟ ಜಾತಿ, 1 ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ. ಉಳಿದಂತೆ ಬಿಡಿಸಿಸಿ ಬ್ಯಾಂಕ್ ಪ್ರತಿನಿಧಿಯಾಗಿ 1 ಹಾಗೂ ಸರ್ಕಾರದ ನಾಮನಿರ್ದೇಶನದ ಮೂಲಕ ಒಬ್ಬರು ನೇಮಕವಾಗಲಿದೆ.ಬಾಕ್ಸ್...................
ಆಡಳಿತ ಚುಕ್ಕಾಣಿಗಾಗಿ ಮೂರೂ ಪಕ್ಷಗಳ ಪೈಪೋಟಿ:ಸಹಕಾರ ಕ್ಷೇತ್ರದಲ್ಲಿ ಯಾವುದೇ ಪಕ್ಷದ ಚಿಹ್ನೆಯ ಮೇಲೆ ಚುನಾವಣೆ ನಡೆಯುವುದಿಲ್ಲ, ಆದರೂ, 3 ರಾಜಕೀಯ ಪಕ್ಷಗಳಿಗೂ ಟಿಎಪಿಎಂಸಿಎಸ್ ಆಡಳಿತದ ಚುಕ್ಕಾಣಿ ನಮ್ಮ ಪಕ್ಷದವರ ಕೈಯಲ್ಲೇ ಇರಬೇಕು ಎನ್ನುವ ಪ್ರತಿಷ್ಠೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ. ಸಂಘದ ಅಧಿಕಾರಾವಧಿ ಮುಕ್ತಾಯವಾಗುತ್ತಿದಂತೆ ಅರ್ಹ ಹಾಗೂ ಸಮರ್ಥ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕಿಳಿಸಲು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಮೊದಲ ಸುತ್ತಿನ ಪೂರ್ವಭಾವಿ ಸಭೆಗಳನ್ನು ನಡೆಸಿ ಆಕಾಂಕ್ಷಿಗಳ ಪಟ್ಟಿಯನ್ನು ಪಡೆದಿದ್ದಾರೆ. ಪ್ರಸ್ತುತ ''''''''ಎ ತರಗತಿಯಿಂದ ನಿರ್ದೇಶಕರಾಗಿದ್ದ ಎಂ.ಗೋವಿಂದರಾಜು, ಎಂ.ವೆಂಕಟೇಶ್, ಡಿ.ಸಿದ್ದರಾಮಯ್ಯ ''''''''ಎ''''''''ತರಗತಿಗೆ ಸ್ಪರ್ಧಿಸಲು ಪ್ರತಿನಿಧಿಗಳಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುವ ಅರ್ಹತೆ ಪಡೆದಿದ್ದಾರೆ.
ತಾಲೂಕಿನಲ್ಲಿ ಬಿಜೆಪಿ ಶಾಸಕರು ಅಧಿಕಾರದಲ್ಲಿರುವ ಹಿನ್ನೆಲೆಯಲ್ಲಿ ಟಿಎಪಿಎಂಸಿಎಸ್‌ನಲ್ಲಿ ಹೆಚ್ಚಿನ ನಿರ್ದೇಶಕ ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು ಎನ್ನುವ ಪ್ರತಿಷ್ಠೆ ಒಂದು ಕಡೆಯಾದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಹೆಚ್ಚಿನ ಸ್ಥಾನಗಳಲ್ಲಿ ಆಯ್ಕೆಯಾಗುವ ಮೂಲಕ ಪಕ್ಷ ಸಂಘಟನೆಗೆ ಈ ಚುನಾವಣೆಯನ್ನು ದಿಕ್ಸೂಚಿಯಾಗಿಸಿಕೊಳ್ಳುವ ತವಕ ಕಾಂಗ್ರೆಸ್, ಜೆಡಿಎಸ್ ಪಕ್ಷದ ಕೆಲ ಮುಖಂಡರು ಬಿಜೆಪಿಯೊಂದಿಗಿನ ಎನ್‌ಡಿಎ ಮೈತ್ರಿಯನ್ನು ಮುಂದುವರಿಸಿಕೊಂಡು ಹೋಗಬೇಕು ಎನ್ನುವ ವಾದ ಹಾಗೂ ಕೆಲವರು ಕಾಂಗ್ರೆಸ್ ಅಥವಾ ಸ್ವತಂತ್ರವಾಗಿಯೇ ಸ್ಪರ್ಧಿಸಿದರೆ ಆಕಾಂಕ್ಷಿಗಳಿಗೆ ಹೆಚ್ಚಿನ ಸ್ಥಾನ ದೊರೆಯಲಿವೆ. ಆ ನಂತರ ಪಕ್ಷ ಸಂಘಟನೆಗೆ ನೆರವಾಗಲಿದೆ ಎನ್ನಲಾಗಿದ್ದು ಟಿಎಪಿಎಂಸಿಎಸ್ ಚುನಾವಣೆ ಕುತೂಹಲ ಕೆರಳಿಸಿದೆ.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))