ತರೀಕೆರೆಜೆಡಿಎಸ್ ಪಕ್ಷ ಮತ್ತು ಬಿಜೆಪಿ ಮೈತ್ರಿಕೂಟದಿಂದ ಟಿಎಪಿಸಿಎಂಎಸ್ ಅಧ್ಯಕ್ಷ ಸ್ತಾನಕ್ಕೆ ಎಂ.ನರೇಂದ್ರ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಶರತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿಧಾನ ಪರಿಷತ್ತು ಸದಸ್ಯ ಎಸ್.ಎಲ್.ಭೋಜೇಗೌಡ, ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದ್ದಾರೆ.
- ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಗಳಾಗಿ ಎಂ.ನರೇಂದ್ರ - ಶರತ್ ಆಯ್ಕೆ
ಕನ್ನಡಪ್ರಭ ವಾರ್ತೆ, ತರೀಕೆರೆಜೆಡಿಎಸ್ ಪಕ್ಷ ಮತ್ತು ಬಿಜೆಪಿ ಮೈತ್ರಿಕೂಟದಿಂದ ಟಿಎಪಿಸಿಎಂಎಸ್ ಅಧ್ಯಕ್ಷ ಸ್ತಾನಕ್ಕೆ ಎಂ.ನರೇಂದ್ರ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಶರತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿಧಾನ ಪರಿಷತ್ತು ಸದಸ್ಯ ಎಸ್.ಎಲ್.ಭೋಜೇಗೌಡ, ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದ್ದಾರೆ.ಸೋಮವಾರ ಮಾಜಿ ಶಾಸಕ ಡಿ.ಎಸ್.ಸುರೇಶ್ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಜೆಡಿಎಸ್ ಮತ್ತು ಬಿಜೆಪಿ ಎನ್.ಡಿ.ಎ.ಭಾಗವಾಗಿ ರಾಜ್ಯ ಮತ್ತು ರಾಷ್ಚ್ರಮಟ್ಟದಲ್ಲಿ ಮೈತ್ರಿಕೂಟ ಹೊಂದಾಣಿಕ ಮಾಡಿಕೊಂಡಿದ್ದು, ಈ ಹೊಂದಾಣಿಕೆ ಮುಂದೆ ಬರಲಿರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಡಿಸಿಸಿ ಬ್ಯಾಂಕ್ ಇತ್ಯಾದಿ ಎಲ್ಲ ಚುನಾವಣೆಗಳಿಗೆ ಮುಂದುವರಿಯುತ್ತದೆ. ಪ್ರಸ್ತುತ ಟಿಎಪಿಸಿಎಂಎಸ್ ಅಧ್ಯಕ್ಸ ಸ್ಥಾನಕ್ಕೆ ಎಂ.ನರೇಂದ್ರ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶರತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.ಮಾಜಿ ಶಾಸಕ ಡಿ.ಎಸ್.ಸುರೇಶ್ ಮಾತನಾಡಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದಿಂದ ಟಿಎಪಿಸಿಎಂ ಎಸ್ಅ ಧ್ಯಕ್ಷ ಸ್ಥಾನಕ್ಕ ಎಂ.ನರೇಂದ್ರ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಶರತ್ ಅವರನ್ನು ಆಯ್ಕೆ ಮಾಡಲಾಗಿದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದ ಹೊಂದಾಣಿಕೆಮುಂದೆ ಬರಲಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ, ಡಿಸಿಸಿ ಬ್ಯಾಂಕ್ ಚುನಾವಣೆ ಮತ್ತಿತರ ಚುನಾವಣೆಗಳಿಗೆ ಮುಂದುವರಿಯುತ್ತದೆ ಎಂದ ಅವರು ಟಿಎಪಿಸಿಎಂಎಸ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಎಂ.ನರೇಂದ್ರ, ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಶರತ್ ಅವರನ್ನು ಅಭಿನಂದಿಸಿ ಸನ್ಮಾನಿಸಿದರು.ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ, ತಾಲೂಕು ಬಿಜೆಪಿ ಅಧ್ಯಕ್ಷ ಪ್ರತಾಪ್ ಗರಗದಹಳ್ಳಿ, ಮುಖಂಡರಾದ ಕೆ.ಆರ್.ಆನಂದಪ್ಪ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ವಸಂತಕುಮಾರ್, ಶಶಿಕುಮಾರ್, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
5ಕೆಟಿಆರ್.ಕೆ.10ಃತರೀಕೆರೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದಿಂದ ಟಿಎಪಿಸಿಎಂಎಸ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಎಂ,.ನರೇಂದ್ರ, ಮತ್ತು ಶರತ್ ಅವರನ್ನು ಮಾಜಿ ಶಾಸಕ ಡಿ.ಎಸ್.ಸುರೇಶ್ ಅಭಿನಂದಿಸಿ ಸನ್ಮಾನಿಸಿದರು. ವಿಧಾನ ಪರಿಷತ್ತು ಸದಸ್ಯ ಎಸ್.ಎಲ್.ಬೋಜೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ, ಬಿಜೆಪಿ ತಾ.ಅಧ್ಯಕ್ಷ ಪ್ರತಾಪ್ ಗರಗದಹಳ್ಳಿ, ಮುಖಂಡರಾದ ಕೆ.ಆರ್.ಆನಂದಪ್ಪ ಮತ್ತಿತರರು ಇದ್ದರು.