ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಾಧಕ ವಿದ್ಯಾರ್ಥಿಗಳಿಗೆ ನೀಡುವ ತರಾಸು ಪ್ರಶಸ್ತಿಯನ್ನು ಕೊಡಗಿನ ಬಯವಂಡ ರಿಹಾನ್ ಮುತ್ತಣ್ಣ ಪಡೆದುಕೊಂಡಿದ್ದಾರೆ.

ಪೊನ್ನಂಪೇಟೆ: ಬೆಂಗಳೂರಿನ ಜನ್ಮ ಭೂಮಿ ಸಾಂಸ್ಕೃತಿಕ ನಾಗರಿಕ ವೇದಿಕೆ ವತಿಯಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಾಧಕ ವಿದ್ಯಾರ್ಥಿಗಳಿಗೆ ನೀಡುವ ತರಾಸು ಪ್ರಶಸ್ತಿಯನ್ನು ಕೊಡಗಿನ ಬಯವಂಡ ರಿಹಾನ್ ಮುತ್ತಣ್ಣ ಪಡೆದುಕೊಂಡಿದ್ದಾರೆ.

ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅವರು ಕನ್ನಡದಲ್ಲಿ ಹೆಚ್ಚು ಅಂಕ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶ್ರೀ ಕೃಷ್ಣದೇವರಾಯ ಕಲಾ ಮಂದಿರದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ರಿಹಾನ್ ಮುತ್ತಣ್ಣ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಬೆಂಗಳೂರಿನ ಆಚಾರ್ಯ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮೆಕಾನಿಕಲ್ ಎಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ರಿಹಾನ್ ಮುತ್ತಣ್ಣ, ಪೊನ್ನಂಪೇಟೆಯ ನಿವಾಸಿ ಬಯವಂಡ ಕೆ. ನವನೀಶ್-ಪದ್ಮಿನಿ ದಂಪತಿ ಪುತ್ರರಾಗಿದ್ದಾರೆ.

------------------------------------

ಕಾಡಾನೆ ದಾಳಿಗೆ ಮೃತಪಟ್ಟ ಪೊನ್ನಪ್ಪ ಕುಟುಂಬಕ್ಕೆ ಚೆಕ್‌ ವಿತರಿಸಿದ ಶಾಸಕ ಮಂತರ್‌ ಗೌಡಕನ್ನಡಪ್ರಭ ವಾರ್ತೆ ಸೋಮವಾರಪೇಟೆತಾಲೂಕಿನ ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಗಯ್ಯಪುರ ಗ್ರಾಮದಲ್ಲಿ ಆನೆ ದಾಳಿಗೆ ಸಿಲುಕಿ ಮೃತಪಟ್ಟದ ಪೊನ್ನಪ್ಪ ಅವರ ನಿವಾಸಕ್ಕೆ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.ಈಚೆಗೆ ಮೃತರು ಕೃಷಿ ಕೆಲಸಕ್ಕೆ ತಮ್ಮ ಜಮೀನಿಗೆ ತೆರಳಿದ್ದ ಸಂದರ್ಭ ಆನೆ ದಾಳಿಗೆ ಬಲಿಯಾಗಿದ್ದರು. ಈ ಸಂದರ್ಭ ಕುಟುಂಬಸ್ಥರೊಂದಿಗೆ ಮಾತನಾಡಿದ ಶಾಸಕರು, ಸರ್ಕಾರದ ವತಿಯಿಂದ ನೀಡಲಾಗುವ ರೂ. ೨೦ ಲಕ್ಷ ರು. ಮೊತ್ತದ ಪರಿಹಾರ ಚೆಕ್ ನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಿದರು.ಈ ಸಂದರ್ಭ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಸತೀಶ್, ಎಸಿಎಫ್ ಗೋಪಾಲ್ ಹಾಗೂ ಸ್ಥಳೀಯ ನಿವಾಸಿಗಳು ಇದ್ದರು.