4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ

| Published : Nov 12 2025, 01:30 AM IST

4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ
Share this Article
  • FB
  • TW
  • Linkdin
  • Email

ಸಾರಾಂಶ

ಕಳೆದ ವರ್ಷದ ಹಂಗಾಮಿನಲ್ಲಿ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ 3 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿತ್ತು. ಆದರೆ ಈ ವರ್ಷ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಕಾರ್ಖಾನೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ತಿಳಿಸಿದರು.

ಬೀದರ್: ಕಳೆದ ವರ್ಷದ ಹಂಗಾಮಿನಲ್ಲಿ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ 3 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿತ್ತು. ಆದರೆ ಈ ವರ್ಷ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಕಾರ್ಖಾನೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ತಿಳಿಸಿದರು.ತಾಲ್ಲೂಕಿನ ಜನವಾಡಾ ಹತ್ತಿರದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಮಂಗಳವಾರ ಪ್ರಸಕ್ತ ಸಾಲಿನ ಕಬ್ಬು ನುರಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಮಠಾಧೀಶರು, ಕಾರ್ಖಾನೆ ಅಧ್ಯಕ್ಷರು, ನಿರ್ದೇಶಕರು, ಗಣ್ಯರು ಹಾಗೂ ರೈತರು ಯಂತ್ರಕ್ಕೆ ಕಬ್ಬು ಹಾಕುವ ಮೂಲಕ ಕಬ್ಬು ನುರಿಕೆಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಂಗಾಮು ಸುಸೂತ್ರವಾಗಿ ನಡೆಸುವ ದಿಸೆಯಲ್ಲಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಸದಸ್ಯ ರೈತರ ಕಬ್ಬು ಸರಿಯಾದ ಸಮಯಕ್ಕೆ ಕಾರ್ಖಾನೆಗೆ ತಲುಪಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.ಕಬ್ಬು ಪೂರೈಸುವ ರೈತರಿಗೆ ಸಕಾಲಕ್ಕೆ ಹಣ ಪಾವತಿಸಲಾಗುವುದು. ಜಿಲ್ಲೆಯ ರೈತರ ಸಹಕಾರದೊಂದಿಗೆ ಕಾರ್ಖಾನೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗಲಾಗುವುದು ಎಂದು ತಿಳಿಸಿದರು.ಜಿಲ್ಲೆಯ ರೈತರು ಯಾವುದೇ ಕಾರಣಕ್ಕೂ ಬೇರೆ ರಾಜ್ಯಗಳ ಕಾರ್ಖಾನೆಗಳಿಗೆ ಕಬ್ಬು ಸಾಗಿಸಬಾರದು. ಕಾರ್ಖಾನೆಗೆ ಕಬ್ಬು ಪೂರೈಸಿ ಎಂದಿನಂತೆ ಸಹಕರಿಸ ಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರು, ಸಹಕಾರ ರತ್ನ, ಕಾಖಾನೆಯ ಸಂಸ್ಥಾಪಕ ದಿ.ಡಾ.ಗುರುಪಾದಪ್ಪಾ ನಾಗಮಾರಪಳ್ಳಿ ಅವರ ಜನ್ಮದಿನ ಸಹ ಆಚರಿಸಲಾಯಿತು.

ಹುಲಸೂರಿನ ಶಿವಾನಂದ ಸ್ವಾಮೀಜಿ ಮಾತನಾಡಿ, ಉಮಾಕಾಂತ ನಾಗಮಾರಪಳ್ಳಿ ಹಾಗೂ ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ರಾಜಕೀಯದಲ್ಲಿ ಉಜ್ವಲ ಭವಿಷ್ಯ ಇದೆ ಎಂದು ಹೇಳಿದರು. ತಡೋಳಾದ ರಾಜೇಶ್ವರ ಶಿವಾಚಾರ್ಯರು ಮಾತನಾಡಿ, ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಮಾದರಿಯಾಗ ಬೇಕು. ರೈತರು ಹಾಗೂ ಕಾರ್ಖಾನೆಗೆ ಸಮಸ್ಯೆಯಾಗದಂತೆ ಕಾರ್ಖಾನೆಯನ್ನು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ಆಡಳಿತ ಮಂಡಳಿ ಮೇಲಿದೆ ಎಂದು ತಿಳಿಸಿದರು.

ಭಾತಂಬ್ರಾದ ಶಿವಯೋಗೀಶ್ವರ ಸ್ವಾಮೀಜಿ ಮಾತನಾಡಿದರು. ಹೆಡಗಾಪುರದ ಶಿವಲಿಂಗ ಶಿವಾಚಾರ್ಯ, ಬೇಮಳಖೇಡದ ಡಾ.ರಾಜಶೇಖರ ಶಿವಾಚಾರ್ಯ, ಬರ್ದಿಪುರದ ಅವಧೂತಗಿರಿ ಮಹಾರಾಜ, ಚಾಂಬೋಳದ ರುದ್ರಮುನಿ ಶಿವಾಚಾರ್ಯ, ಅಪೆಕ್ಸ್ ಬ್ಯಾಂಕ್ ನಿರ್ದೇಶಕರೂ ಆದ ಕಾರ್ಖಾನೆಯ ನಿರ್ದೇಶಕ ಉಮಾಕಾಂತ ನಾಗಮಾರಪಳ್ಳಿ, ಕಾರ್ಖಾನೆ ಉಪಾಧ್ಯಕ್ಷ ಬಾಲಾಜಿ ಚವ್ಹಾಣ, ನಿರ್ದೇಶಕ ರಾಜಕುಮಾರ ಕರಂಜಿ, ಸಿದ್ರಾಮ ವಾಘಮಾರೆ, ವಿಜಯಕುಮಾರ ಪಿ. ಪಾಟೀಲ, ಸಂಗಮೇಶ ಪಾಟೀಲ, ಕುಶಾಲರಾವ್ ಯಾಬಾ, ಚಂದ್ರಕಾಂತ ಹಿಪ್ಪಳಗಾಂವ್, ಸಂಜುಕುಮಾರ ಸಿದ್ದಾಪುರ, ಅಂಬ್ರೇಶ್ ನಾಗಮಾರಪಳ್ಳಿ, ಮಲ್ಲಮ್ಮ ಪಾಟೀಲ, ಶೋಭಾವತಿ ಪಾಟೀಲ, ಜಿ.ಎನ್. ಸಹಕಾರ ಆಸ್ಪತ್ರೆಯ ಅಧ್ಯಕ್ಷ ತರುಣ್ ಸೂರ್ಯಕಾಂತ ನಾಗಮಾರಪಳ್ಳಿ, ಪ್ರಮುಖರಾದ ಶಶಿಕುಮಾರ ಪಾಟೀಲ ಸಂಗಮ, ಶಂಕರ ಪಾಟೀಲ ಅತಿವಾಳ, ವೀರಶೆಟ್ಟಿ ಪಟ್ನೆ, ಸತೀಶ್ ಕುಲಕರ್ಣಿ, ಶಿವಕುಮಾರ ಭಾಲ್ಕೆ, ಮಾಧವರಾವ್ ಪಾಟೀಲ, ರಮೇಶ ಪಾಟೀಲ, ಬಸವರಾಜ ಪಾಟೀಲ ಹಾರೂರಗೇರಿ, ನಂದು ಪಾಟೀಲ, ಹಣಮಂತರಾವ್ ಪಾಟೀಲ, ನಾಗೇಶ ರೆಡ್ಡಿ, ಕೃಷ್ಣಾ ರೆಡ್ಡಿ, ದತ್ತು ನಿಟ್ಟೂರೆ, ಫರ್ನಾಂಡೀಸ್ ಹಿಪ್ಪಳಗಾಂವ್, ನಂದು ಜೋಶಿ ಕಾರ್ಖಾನೆಯ ಸಿಬ್ಬಂದಿ ಇದ್ದರು.