ಸಾರಾಂಶ
ಸ್ಥಳದಲ್ಲಿ ಬೈಕ್ ಸವಾರ ತೀವ್ರವಾಗಿ ಪಟ್ಟು ಬಿದ್ದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ನಂತರ ಶವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿರಿಸಿ ಪ್ರಕರಣ ದಾಖಲಿಸಿಕೊಂಡು ಗುರುವಾರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಿದ್ಧಾರೆ.
ಶ್ರೀರಂಗಪಟ್ಟಣ: ಟಾಟಾ ಏಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ತಾಲೂಕಿನ ಬನ್ನೂರು ರಸ್ತೆಯ ಮರಳಗಾಲ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ. ತಾಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದ ದಿ. ಮಂಜುನಾಥ್ ಪುತ್ರ ಹರ್ಷಿತ್ ಗೌಡ (21) ಮೃತಪಟ್ಟ ಬೈಕ್ ಸವಾರ. ಕೆ.ಶೆಟ್ಟಹಳ್ಳಿ ಬಳಿ ಇರುವ ಗಾರ್ಮೆಂಟ್ಸ್ ಕಾರ್ಮಿಕ ಸಿಬ್ಬಂದಿಯನ್ನು ಟಾಟಾ ಏಸ್‌ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ಅರಕೆರೆ ಕಡೆಯಿಂದ ಗ್ರಾಮಕ್ಕೆ ಬೈಕ್‌ನಲ್ಲಿ ಆಗಮಿಸುತ್ತಿದ್ದ ಹರ್ಷಿತ ಗೌಡಗೆ ಡಿಕ್ಕಿಯಾಗಿ ಘಟನೆ ನಡೆದಿದೆ. ಸ್ಥಳದಲ್ಲಿ ಬೈಕ್ ಸವಾರ ತೀವ್ರವಾಗಿ ಪಟ್ಟು ಬಿದ್ದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ನಂತರ ಶವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿರಿಸಿ ಪ್ರಕರಣ ದಾಖಲಿಸಿಕೊಂಡು ಗುರುವಾರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಿದ್ಧಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.