ಮಾಯಮುಡಿ ಮಕ್ಕಳ ಗ್ರಾಮ ಸಭೆ : ಓದಿನ ಕಡೆ ಗಮನಹರಿಸಲು ಟಾಟು ಮೊಣ್ಣಪ್ಪ ಕರೆ

| Published : Feb 14 2025, 12:31 AM IST

ಸಾರಾಂಶ

ಮಾಯಮುಡಿ ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಕ್ಕಳ ಗ್ರಾಮಸಭೆ ನಡೆಯಿತು. ಗ್ರಾ.ಪಂ. ಅಧ್ಯಕ್ಷ ಟಾಟು ಮೊಣ್ಣಪ್ಪ ಉದ್ಘಾಟಿಸಿದರು.

ಮಡಿಕೇರಿ : ಮಾಯಮುಡಿ ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಿತು.

ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ನಂದಿನಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಗ್ರಾ.ಪಂ ಅಧ್ಯಕ್ಷ ಎ.ಎಸ್.ಟಾಟು ಮೊಣ್ಣಪ್ಪ ಉದ್ಘಾಟಿಸಿ ಮಾತನಾಡಿ, ಗ್ರಾ.ಪಂ ಶೇ.20ರಷ್ಟು ಅನುದಾನವನ್ನು ಶಾಲೆಗಳ ಅಭಿವೃದ್ಧಿಗಾಗಿ ಬಳಸಲಾಗುತ್ತಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಕಡ್ಡಾಯವಾಗಿ ತರಗತಿಗಳಿಗೆ ಹಾಜರಾಗಬೇಕು ಮತ್ತು ಓದಿನ ಕಡೆ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ರೀತಾ ಮಾತನಾಡಿ, ಮಕ್ಕಳ ಹಕ್ಕುಗಳು ಹಾಗೂ ಅವುಗಳ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು. ಮಕ್ಕಳು ತಮಗಾಗುವ ಅನ್ಯಾಯವನ್ನು ಶಿಕ್ಷಕರೊಂದಿಗೆ ಚರ್ಚಿಸಬೇಕೆಂದು ಕಿವಿ ಮಾತು ಹೇಳಿದರು.

ಆರೋಗ್ಯ ಇಲಾಖೆ ಅಧಿಕಾರಿ ರಮ್ಯ ಮಾತನಾಡಿ, ಆರೋಗ್ಯ ಇಲಾಖೆಯಿಂದ ನೀಡಲಾಗುವ ವಿಟಮಿನ್ ಮಾತ್ರೆಗಳು ಹಾಗೂ ಇತರ ಆರೋಗ್ಯ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.

ಸಭೆಯಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿ ಮೆಟ್ಟಲ್‌ಕೋಡ್, ಶಾಲೆಯ ಮುಖ್ಯೋಪಾಧ್ಯಾಯರಾದ ಹೆಚ್.ಸಿ.ಜಯಮ್ಮ, ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಎಲ್ಲಾ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು. ಸರ್ಕಾರಿ ಹಿರಿಯ ಪ್ರಾಥಮಿಕ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಸಾನಿಯಾ ಸ್ವಾಗತಿಸಿ, 7ನೇ ತರಗತಿಯ ವಿದ್ಯಾರ್ಥಿನಿ ವೀಕ್ಷ ದೇಚಮ್ಮ ನಿರೂಪಿಸಿ, ದಿವ್ಯ ವಂದಿಸಿದಳು.