: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ‘ಟಿಬಿ ಮುಕ್ತ ಭಾರತ’ ಅಭಿಯಾನ ಯಶಸ್ವಿಯಾಗಲು ಜನಸಾಮಾನ್ಯರ ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿದೆ ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ಹೇಳಿದರು.

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ‘ಟಿಬಿ ಮುಕ್ತ ಭಾರತ’ ಅಭಿಯಾನ ಯಶಸ್ವಿಯಾಗಲು ಜನಸಾಮಾನ್ಯರ ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿದೆ ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ಹೇಳಿದರು.ದೇಶದಲ್ಲಿ ಕ್ಷಯರೋಗ(ಟಿಬಿ) ನಿರ್ಮೂಲನೆ ಮಾಡುವ ಉದ್ದೇಶದಿಂದ ಕೇಂದ್ರ ಆರೋಗ್ಯ ಸಚಿವಾಲಯ ಆರಂಭಿಸಿರುವ ‘ಜೋಶ್‌’ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಅವರು ಗುರುವಾರ ಚಾಲನೆ ನೀಡಿ ಮಾತನಾಡಿದರು.

ಈ ‘ಜೋಶ್’ ಯೋಜನೆಯನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಹಾಗೂ ರಕ್ಷಣಾ ಸಚಿವಾಲಯಗಳ ಜಂಟಿ ಸಹಯೋಗದೊಂದಿಗೆ ದೇಶದೆಲ್ಲೆಡೆ ಜಾರಿಗೊಳಿಸಲಾಗುತ್ತಿದೆ ಎಂದರು.

ಜೋಶ್‌ ಕಾರ್ಯಕ್ರವನ್ನು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಉದ್ಘಾಟಿಸಿದರು. ಅದರಂತೆ, ಮಂಗಳೂರಿನಲ್ಲಿರುವ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ಸಂಸದ ಕ್ಯಾ.ಬ್ರಿಜೇಶ್‌ ಚೌಟ ಗಿಡಕ್ಕೆ ನೀರೆಯುವ ಮೂಲಕ ಚಾಲನೆ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಜಿಲ್ಲಾ ಟಿಬಿ ನಿರ್ಮೂಲನಾ ಅಧಿಕಾರಿ ಡಾ.ಖತೀಜಾ ಮತ್ತಿತರರು ಇದ್ದರು.