ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಇಂದಿನ ಮಕ್ಕಳಲ್ಲಿ ಪ್ರತಿಭೆಯ ಕೊರತೆ ಇಲ್ಲ. ಆದರೆ ಸಂಸ್ಕಾರದ ಕೊರತೆ ಇದೆ. ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡಬೇಕು ಎಂದು ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಮಂಗಳನಾಥ ಸ್ವಾಮೀಜಿ ಪೋಷಕರಿಗೆ ಕಿವಿ ಮಾತು ಹೇಳಿದರು.ನಗರ ಹೊರವಲಯದ ಅಗಲಗುರ್ಕಿಯ ಬಿಜಿಎಸ್ ಜ್ಞಾನಗಂಗೋತ್ರಿ ಕ್ಯಾಂಪಸ್ ಆವರಣದಲ್ಲಿರುವ ಬಿಜಿಎಸ್ ಸೈನ್ಸ್ ಅಕಾಡೆಮಿ ಕಾಲೇಜಿನಲ್ಲಿ ಶುಕ್ರವಾರ ನಡೆದ ಪ್ರಥಮ ಬಿ.ಎಸ್ಸಿ. ಮತ್ತು ಬಿಸಿಎ ತರಗತಿಗಳ ‘ಸ್ವಸ್ತಿ-2025’ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣದ ಜತೆ ಸುಸಂಸ್ಕೃತರಾಗಿತಂದೆ ತಾಯಿಗಳ ಕನಸುಗಳನ್ನು ಸಾಕಾರಗೊಳಿಸುವುದು ವಿದ್ಯಾರ್ಥಿಗಳ ಕರ್ತವ್ಯ. ಶಿಕ್ಷಣದ ಜೊತೆ ಸುಸಂಸ್ಕೃತರಾಗಿ ಮತ್ತು ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸತ್ಪಜೆಗಳಾಗಿ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬೆಳೆಯಬೇಕೆಂದು ತಿಳಿಸಿದರು.
ಬೆಂಗಳೂರು ವಿಭಾಗದ ಉಪ ಅರಣ್ಯಾಧಿಕಾರಿ ರವೀಂದ್ರ ಕುಮಾರ್ ಮಾತನಾಡಿ, ಶಿಕ್ಷಣದ ಜೊತೆಗೆ ಸಂವಿಧಾನಿಕ ಮೌಲ್ಯಗಳು ಮತ್ತು ಪರಿಸರ ಪ್ರಜ್ಞೆ ಹೊಂದುವುದರ ಮೂಲಕ ವಿದ್ಯಾರ್ಥಿಗಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.ಸಾಮಾಜಿಕ ಅಭಿವೃದ್ಧಿಗೆ ಶ್ರಮಿಸಿ
ಬಿ.ಜಿ.ಎಸ್. ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಡಾ. ಎನ್. ಶಿವರಾಮರೆಡ್ಡಿ ಮಾತನಾಡಿ, ಯುವ ಸಮುದಾಯ ತಮ್ಮ ಜವಾಬ್ದಾರಿ ಅರಿತು ವ್ಯಕ್ತಿತ್ವ ವಿಕಸನದ ಜೊತೆಗೆ ಸಾಮಾಜಿಕ ಅಭಿವೃದ್ಧಿಗೆ ಶ್ರಮಿಸಬೇಕೆಂದು ತಮ್ಮ ಶಿಕ್ಷಣದ ಜೊತೆಗೆ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ವ್ಯಕ್ತಿತ್ವ ಬಲಪಡಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಬೇಕೆಂದರು.ಬಿಜಿಎಸ್ ಸಮೂಹ ಸಂಸ್ಥೆಗಳ ಡೀನ್ ಡಾ. ಎನ್. ಮಧುಸೂಧನ್ ಮಾತನಾಡಿ, ಈ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಬೇಕಾಗಿರುವ ಮೌಲ್ಯಗಳನ್ನು ಕಲಿಸಲಾಗುವುದು. ವಿದ್ಯಾಭ್ಯಾಸಕ್ಕೆ ಬೇಕಾಗಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಕಾಲೇಜಿನ ಆಡಳಿತ ಮಂಡಳಿ ಯಾವಾಗಲೂ ಸಿದ್ಧವಾಗಿರುತ್ತದೆ ಎಂದು ತಿಳಿಸಿದರು.
ರ್‍ಯಾಂಕ್ ಪಡೆದವರಿಗೆ ಸನ್ಮಾನಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಫಲಿತಾಂಶದಲ್ಲಿ ಎಂ.ಎಸ್ಸಿ. ಮತ್ತು ಬಿ.ಎಸ್ಸಿ. ಯಲ್ಲಿ ಅತಿ ಹೆಚ್ಚು ಅಂಕ ಪಡೆದು ರ್‍ಯಾಂಕ್ ಗಳಿಸಿದ ಇದೇ ಕಾಲೇಜಿನ 10 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಎಚ್.ಬಿ. ರಮೇಶ್, ಉಪನ್ಯಾಸಕರು ಇದ್ದರು.