ಮಕ್ಕಳಿಗೆ ಧರ್ಮ, ರಾಷ್ಟ್ರಪ್ರೇಮ, ನೀತಿ ಮೌಲ್ಯ ತಿಳಿಸಿ: ಶಿಕ್ಷಕರಿಗೆ ಬಿಇಒ ಚಂದ್ರಶೇಖರ್ ಸಲಹೆ

| Published : Nov 06 2024, 12:55 AM IST

ಮಕ್ಕಳಿಗೆ ಧರ್ಮ, ರಾಷ್ಟ್ರಪ್ರೇಮ, ನೀತಿ ಮೌಲ್ಯ ತಿಳಿಸಿ: ಶಿಕ್ಷಕರಿಗೆ ಬಿಇಒ ಚಂದ್ರಶೇಖರ್ ಸಲಹೆ
Share this Article
  • FB
  • TW
  • Linkdin
  • Email

ಸಾರಾಂಶ

ಸಮಾಜ ಶಿಕ್ಷಕರು ಮತ್ತು ಮಕ್ಕಳಿಂದ ಮೌಲ್ಯಗಳನ್ನು ನಿರೀಕ್ಷೆ ಮಾಡುತ್ತದೆ. ಅಂತಹ ಮೌಲ್ಯಗಳನ್ನು ಬೆಳೆಸಬೇಕು. ಶಿಕ್ಷಕರು ನಿರಂತರ ಅಧ್ಯಯನದಿಂದ ಆಳವಾದ ಜ್ಞಾನವನ್ನು ಹೊಂದಬೇಕು. ಶಿಕ್ಷಕರಲ್ಲಿಯೂ ಉತ್ತಮವಾದ ಪ್ರತಿಭೆಗಳಿವೆ. ಪ್ರತಿವರ್ಷ ಅನೇಕ ಶಿಕ್ಷಕರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆಯುತ್ತಾರೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಹಳಿತಪ್ಪುತ್ತಿರುವ ಇಂದಿನ ಸಮಾಜದಲ್ಲಿ ಮಕ್ಕಳಿಗೆ ಧರ್ಮ, ರಾಷ್ಟ್ರ ಪ್ರೇಮ, ನೀತಿ, ಮೌಲ್ಯಗಳನ್ನು ತಿಳಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಅಭಿಪ್ರಾಯಪಟ್ಟರು.

ಪಟ್ಟಣದ ಶಿಕ್ಷಕರ ಭವನದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಶಿಕ್ಷಕರಿಗೆ ಏರ್ಪಡಿಸಿದ್ದ ಸಹಪಠ್ಯ ಚಟುವಟಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಕರು ಮಕ್ಕಳಿಗೆ ಪ್ರತಿದಿನ ನೂತನ ಆವಿಷ್ಕಾರ, ಹೊಸತನವನ್ನು ಹೇಳಿಕೊಡುವ ಕೆಲಸ ಮಾಡಬೇಕು ಎಂದರು.

ಪ್ರತಿದಿನ ಮಕ್ಕಳಿಗೆ ನೀತಿ ಕಥೆಗಳನ್ನು ಹೇಳಿಕೊಡುವ ಮೂಲಕ ಅವರಿಗೆ ಸ್ಫೂರ್ತಿ ತುಂಬುವ ಕೆಲಸ ಮಾಡಬೇಕು. ಮಕ್ಕಳನ್ನು ಎಳೆಯ ವಯಸ್ಸಿನಲ್ಲಿಯೇ ನಾಯಕತ್ವದ ಗುಣಗಳನ್ನು ಅಳವಡಿಸಿಕೊಳ್ಳಲು ಪ್ರೇರೇಪಣೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಸಮಾಜ ಶಿಕ್ಷಕರು ಮತ್ತು ಮಕ್ಕಳಿಂದ ಮೌಲ್ಯಗಳನ್ನು ನಿರೀಕ್ಷೆ ಮಾಡುತ್ತದೆ. ಅಂತಹ ಮೌಲ್ಯಗಳನ್ನು ಬೆಳೆಸಬೇಕು. ಶಿಕ್ಷಕರು ನಿರಂತರ ಅಧ್ಯಯನದಿಂದ ಆಳವಾದ ಜ್ಞಾನವನ್ನು ಹೊಂದಬೇಕು. ಶಿಕ್ಷಕರಲ್ಲಿಯೂ ಉತ್ತಮವಾದ ಪ್ರತಿಭೆಗಳಿವೆ. ಪ್ರತಿವರ್ಷ ಅನೇಕ ಶಿಕ್ಷಕರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆಯುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಕ್ಷೇತ್ರ ಸಮನ್ವಯಾಧಿಕಾರಿ ಎಚ್.ಕೆ.ಮಂಜುನಾಥ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಕಾರ್ಯದರ್ಶಿ ಪಿ.ಜೆ.ಕುಮಾರ್, ಹಿರಿಯ ಉಪಾದ್ಯಕ್ಷ ಎಸ್.ಆರ್.ಆನಂದ್‌ಕುಮಾರ್, ಶಿಕ್ಷಣಾಧಿಕಾರಿಗಳ ಸಂಘದ ಕಾರ್ಯದರ್ಶಿ ಪುಟ್ಟರಾಜು, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಂ.ಬಸವರಾಜು, ಕಾರ್ಯದರ್ಶಿ ವಿಜಿನಾರಾಯಣ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಕಾರ್ಯದರ್ಶಿ ಸಿ.ಟಿ.ಲಕ್ಷ್ಮಣಗೌಡ, ಸಂಘಟನಾ ಕಾರ್ಯದರ್ಶಿ ಜಿ.ಎಸ್.ಮಂಜು, ರಾಜ್ಯ ಉಪಾದ್ಯಕ್ಷ ಎಲ್.ಎಸ್.ಧರ್ಮಪ್ಪ, ನಿಕಟಪೂರ್ವ ತಾಲೂಕು ಅಧ್ಯಕ್ಷ ಪದ್ಮೇಶ್, ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆರ್.ಕೆ.ರಮೇಶ್, ತಾಲೂಕು ಎಸ್ಸಿಎಸ್ಟಿ ನೌಕರರ ಸಂಘದ ಅಧ್ಯಕ್ಷ ಕಟ್ರ ಯೋಗೇಶ್ ಹಲವರು ಇದ್ದರು.