ಗುಣಮಟ್ಟದ ಶಿಕ್ಷಣದ ಜತೆ ಸಂಸ್ಕಾರ ಕಲಿಸಿ

| Published : Jul 23 2024, 12:36 AM IST

ಗುಣಮಟ್ಟದ ಶಿಕ್ಷಣದ ಜತೆ ಸಂಸ್ಕಾರ ಕಲಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿ ಶಿಕ್ಷಣ ಸಂಸ್ಥೆಯೂ ವಿದ್ಯಾರ್ಥಿಳಿಗೆ ಗುಣಮಟ್ಟ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸಬೇಕು. ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಪ್ರೀತಿ, ವಿಶ್ವಾಸದ ಮೂಲಕವೇ ಮಕ್ಕಳ ಮನಸ್ಸನ್ನು ಗೆಲ್ಲಬೇಕು. ಹೊರತು ಗದರಿಸುವುದು, ಹೊಡೆಯುವುದರಿಂದ ಪ್ರಯೋಜನವಿಲ್ಲ

ಕನ್ನಡಪ್ರಭ ವಾರ್ತೆ ಗೌರಿಬಿದನೂರು

ಮಕ್ಕಳಿಗೆ ಶಿಕ್ಷಣ, ಮೌಲ್ಯಯುತ ಗುಣಗಳ ಜೊತೆಗೆ ಸಂಸ್ಕಾರವನ್ನು ಕಲಿಸಬೇಕಿದೆ ಎಂದು ನ್ಯಾಷನಲ್ ಕಾಲೇಜಿನ ನಿವೃತ್ತ ಉಪನ್ಯಾಸಕ ಡಾ. ರಾಜಾರಾಮ್ ಶಿಕ್ಷಕರಿಗೆ ಸಲಹೆ ನೀಡಿದರು.ನಗರದ ಡಾ. ಹೆಚ್.ಎನ್. ಕಲಾಭವನದಲ್ಲಿ ತಾಲೂಕಿನ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ವತಿಯಿಂದ ಶಿಕ್ಷಣದಲ್ಲಿ ಸಂಸ್ಕಾರ ಎಂಬ ಕಾರ್ಯಕ್ರಮವನ್ನು ಅತಿಥಿಗಳಿಂದ ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.ಮಕ್ಕಳ ಮನಸ್ಸು ಗೆಲ್ಲಬೇಕು

ಪ್ರತಿ ಶಿಕ್ಷಣ ಸಂಸ್ಥೆಯೂ ವಿದ್ಯಾರ್ಥಿಳಿಗೆ ಗುಣಮಟ್ಟ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸಬೇಕು. ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಪ್ರೀತಿ, ವಿಶ್ವಾಸದ ಮೂಲಕವೇ ಮಕ್ಕಳ ಮನಸ್ಸನ್ನು ಗೆಲ್ಲಬೇಕು. ಹೊರತು ಗದರಿಸುವುದು, ಹೊಡೆಯುವುದರಿಂದ ಪ್ರಯೋಜನವಿಲ್ಲ ಚಿಕ್ಕಂದಿನಿಂದಲೇ ವಿದ್ಯೆ, ಕ್ರೀಡೆ, ಸಾಂಸ್ಕೃತಿಕ ಸೇರಿ ಎಲ್ಲ ರೀತಿಯ ಚಟುವಟಿಕೆಗಳಲ್ಲೂ ತೊಡಗುವಂತೆ ಮಾಡಬೇಕಿದೆ ಎಂದು ಸಲಹೆ ನೀಡಿದರು

ಒಕ್ಕೂಟದ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಕರನ್ನು ನೋಡಿ ಕಲಿಯುತ್ತಿರುತ್ತಾರೆ. ವಿದ್ಯಾರ್ಥಿಗಳಿಗೆ ಸಾಮಾಜಿಕ ಜವಾಬ್ದಾರಿ, ಹಿರಿಯರಿಗೆ ಗೌರವ ಕೊಡುವುದನ್ನು ಕಲಿಸಬೇಕೆಂದರು. ಒಕ್ಕೂಟದ ಅಧ್ಯಕ್ಷ ಜಿ.ಎನ್. ಚಂದ್ರಶೇಖರರೆಡ್ಡಿ ಮಾತನಾಡಿ, ಶಿಕ್ಷಕರು ಬದ್ಧತೆಯಿಂದ ಕೆಲಸ ಮಾಡಿದಾಗ ಮಾತ್ರ ಸಂಸ್ಥೆಗೆ ಹೆಸರು ಬರುತ್ತದೆ ಎಂದು ಅಭಿಪ್ರಾಯಪಟ್ಟರುಈ ಕಾರ್ಯಕ್ರಮದಲ್ಲಿ ಒಕ್ಕೂಟದ ಗೌರವಾಧ್ಯಕ್ಷರಾದ ಎಸ್.ಎಸ್. ರೆಡ್ಡಿ, ಕಾರ್ಯದರ್ಶಿ ಚಂದ್ರಮೌಳಿ, ಉಪಾಧ್ಯಕ್ಷರಾದ ಮಧುಸೂದನ್, ಖಜಾಂಚಿ ರಂಗನಾಥ್, ಬಿ. ವಿ ಶ್ರೀನಿವಾಸ್‌, ರವಿ ಕುಮಾರ್ ಮತ್ತಿತರರು ಇದ್ದರು.

ಫೋಟೋ.......ಗೌರಿಬಿದನೂರು ಪಟ್ಟಣದ ಡಾ. ಎಚ್‌.ಎನ್. ಕಲಾಭವನದಲ್ಲಿ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕ ಡಾ. ರಾಜಾರಾಮ್‌ ಅವರನ್ನು ಸನ್ಮಾನಿಸಲಾಯಿತು.