ಕನ್ನಡ ಅನ್ನ ಕೊಡುವ ಭಾಷೆಯಾಗಲಿ. ನಮ್ಮ ನಾಡು ನುಡಿಕನ್ನಡ ಭಾಷೆಗೆ ನಮ್ಮಲ್ಲಿ ಆದ್ಯತೆ ಕೊಟ್ಟು, ಇವತ್ತಿನ ರಾಕೆಟ್ ಯುಗದ ಪ್ರಪಂಚದಲ್ಲಿ ಇಂಗ್ಲಿಷ್ ಶಿಕ್ಷಣ ಪಡೆದವರು ದೇಶ ವಿದೇಶಸುತ್ತಿ ಬರುವ ವ್ಯಾಮೋಹ ಹೆಚ್ಚಾಗಿದೆ. ಉದ್ಯೋಗ ಸೃಷ್ಟಿಗೆ ದೇಶ ವಿದೇಶದಲ್ಲಿ ಇಂಗ್ಲಿಷ್‌ಗೆ ಹೆಚ್ಚಿನ ಆದ್ಯತೆಗಳ ನೀಡುತ್ತಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಸರ್ಕಾರಿ ಕನ್ನಡ ಶಾಲೆಗಳಲ್ಲಿ ಇಂಗ್ಲಿಷ್ ಬೋಧನೆ ಮಾಡಿಸುವ ಮೂಲಕ ಶಾಲೆಗಳನ್ನು ಮುಚ್ಚುವುದನ್ನು ತಪ್ಪಿಸಬೇಕು ಎಂದು ಮೈಸೂರು ಮತ್ತು ಚಾಮರಾಜನಗರ ಡಿಸಿಸಿ ಬ್ಯಾಂಕ್ ಕಾರ್ಯ ನಿರ್ವಹಣಾಧಿಕಾರಿ ಬಲ್ಲೇನಹಳ್ಳಿ ಶಂಕರ್ ಹೇಳಿದರು.

ಪಟ್ಟಣದ ಗುರುಭವನದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ತಾಲೂಕು ಶಿಕ್ಷಕರ ಸಂಘ ಆಯೋಜಿಸಿದ್ದ ನಿವೃತ್ತ ಶಿಕ್ಷಕರಿಗೆ ಹಾಗೂ ಸಂಘದ ನೂತನ ನಾಮ ನಿರ್ದೇಶಕ ಪದಾಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳು ಮುಚ್ಚುತ್ತಿವೆ. ಮಕ್ಕಳ ಪೋಷಕರು ಇಂಗ್ಲಿಷ್ ವ್ಯಾಮೋಹದಿಂದ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಕನ್ನಡವೂ ಉಳಿಸುವ ಜೊತೆ ಸರ್ಕಾರಿ ಕನ್ನಡ ಶಾಲೆಗಳಲ್ಲಿ 1ರಿಂದ 7ನೇ ತರಗತಿವರೆಗೆ ವಿಷಯವಾರು ಇಂಗ್ಲಿಷ್ ಬೋಧನೆಗಳಿಗೆ ಹೆಚ್ಚು ಒತ್ತು ನೀಡಿ ಅವಕಾಶ ಕಲ್ಪಿಸಿದರೆ ಮುಚ್ಚುವ ಸರ್ಕಾರಿ ಶಾಲೆಗಳನ್ನು ಉಳಿಸಬಹುದು ಎಂದರು.

ಕನ್ನಡ ಅನ್ನ ಕೊಡುವ ಭಾಷೆಯಾಗಲಿ. ನಮ್ಮ ನಾಡು ನುಡಿಕನ್ನಡ ಭಾಷೆಗೆ ನಮ್ಮಲ್ಲಿ ಆದ್ಯತೆ ಕೊಟ್ಟು, ಇವತ್ತಿನ ರಾಕೆಟ್ ಯುಗದ ಪ್ರಪಂಚದಲ್ಲಿ ಇಂಗ್ಲಿಷ್ ಶಿಕ್ಷಣ ಪಡೆದವರು ದೇಶ ವಿದೇಶಸುತ್ತಿ ಬರುವ ವ್ಯಾಮೋಹ ಹೆಚ್ಚಾಗಿದೆ. ಉದ್ಯೋಗ ಸೃಷ್ಟಿಗೆ ದೇಶ ವಿದೇಶದಲ್ಲಿ ಇಂಗ್ಲಿಷ್‌ಗೆ ಹೆಚ್ಚಿನ ಆದ್ಯತೆಗಳ ನೀಡುತ್ತಿದೆ ಎಂದರು.

ಕನ್ನಡ ಶಾಲೆಗಳಲ್ಲಿ ಸರ್ಕಾರ ಹೆಚ್ಚಿನ ಆಧ್ಯತೆಗೆ ಇಂಗ್ಲಿಷ್ ಶಿಕ್ಷಣ ಬಳಕೆ ಮಾಡಿ ಗ್ರಾಪಂ ಮಟ್ಟದಲ್ಲಿ ಕೇಂದ್ರಿಕೃತ ಇಂಗ್ಲಿಷ್ ಶಾಲೆಗಳ ತೆರೆದರೆ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲದೆ ಶಾಲಾ ಮಕ್ಕಳ ದಾಖಲಾತಿಗಳನ್ನು ಹೆಚ್ಚಿಸಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಡಿ.ಎನ್.ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಮೇಶ್, ಫ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರು, ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಜಿ.ಬಿ.ಮಂಜುಳ, ಕಾರ್ಯದರ್ಶಿ ಮಹೇಶ್, ಖಜಾಂಚಿ ರಾಘವೇಂದ್ರ, ಮೋಹನ್, ಸುನೀತ, ಜಿ.ವಿ.ಮಧುಸೂದನ್ ಉಪಸ್ಥಿತಿದ್ದರು. ಇದೇ ವೇಳೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ನಾಮ ನಿರ್ದೇಶಕ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.