ಕರ್ನಾಟಕ ಪಬ್ಲಿಕ್ ಸ್ಕೂಲಿನ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಯ ಹಿಂದಿ ಶಿಕ್ಷಕಿ ಆರ್. ಆಶಾ ಅವರಿಗೆ ಹೊಯ್ಸಳ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ನರಸಿಂಹರಾಜಪುರ: ಕರ್ನಾಟಕ ಪಬ್ಲಿಕ್ ಸ್ಕೂಲಿನ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಯ ಹಿಂದಿ ಶಿಕ್ಷಕಿ ಆರ್. ಆಶಾ ಅವರಿಗೆ ಹೊಯ್ಸಳ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಹಾಸನದ ಸಂಸ್ಕೃತ ಭವನದಲ್ಲಿ ಭಾನುವಾರ ಬೆಂಗಳೂರಿನ ಗಂಧದ ಗುಡಿ ಕನ್ನಡ ಸಂಘ ಮತ್ತು ಧಾರವಾಡದ ಚೇತನ ಫೌಂಡೇಷನ್ ಸಂಯುಕ್ತವಾಗಿ ನಡೆಸಿದ ಕನ್ನಡ ನುಡಿ ಸಮ್ಮೇಳನದಲ್ಲಿ ಆರ್.ಆಶಾ ಅವರ ಕಲೆ, ಪ್ರತಿಭೆ ಗುರುತಿಸಿ ಹೊಯ್ಸಳ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. 2023ರಲ್ಲಿ ಆರ್.ಆಶಾ ಅವರು ರಾಜ್ಯ ಮಟ್ಟದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, 2024ರಲ್ಲಿ ಜಾನಪದ ಹಾಡಿನಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಆರ್ ಆಶಾ ಅವರಿಗೆ ಹೊಯ್ಸಳ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದಕ್ಕೆ ಕೆಪಿಎಸ್ನ ಶಾಲಾಭಿವೃದ್ದಿ ಸಮಿತಿ, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಹ ಶಿಕ್ಷಕರು ಅಭಿನಂದಿಸಿದ್ದಾರೆ.