ಸಾರಾಂಶ
ಐಕಳ ಪೊಂಪೈ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಶಿಕ್ಷಕ- ರಕ್ಷಕ ಸಂಘ ಸಭೆ ನಡೆಯಿತು. ಜಾನಪದ ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್ ಭಾಗವಹಿಸಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಹೆತ್ತವರು ಮಕ್ಕಳಿಗೆ ಸಂಸ್ಕಾರಯುತ ಜೀವನ ನಡೆಸಲು ಸೂಕ್ತ ಮಾರ್ಗದರ್ಶನ ನೀಡಬೇಕು. ತಂದೆ, ತಾಯಿ, ಪೋಷಕರು ಹಾಗೂ ಶಿಕ್ಷಕರು ಜೊತೆಗೂಡಿದಾಗ ಮಾತ್ರ ಸದೃಢವಾದ ಸಮಾಜವನ್ನು ಕಟ್ಟಬಹುದೆಂದು ಜಾನಪದ ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್ ಹೇಳಿದರು.ಐಕಳ ಪೊಂಪೈ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ಕಾಲೇಜಿನ ಶಿಕ್ಷಕ- ರಕ್ಷಕ ಸಂಘ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಹೆತ್ತವರು ತಮ್ಮ ಮಕ್ಕಳ ವಿವಿಧ ಚಟುವಟಿಕೆಗಳನ್ನು ಸದಾ ಕಾಲ ಗಮನಿಸಬೇಕು. ಅಂಕಗಳ ಹಿಂದೆ ಓಡುವುದಕ್ಕಿಂತ ಬದುಕನ್ನು ರೂಪಿಸಲು ಬೇಕಾದ ಜೀವನ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಮುಖ್ಯ. ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರು ಆಗುವಂತೆ ಮಾಡಬೇಕು ಎಂದು ಹೇಳಿದರು.
2025-26ರ ಸಾಲಿನ ಶಿಕ್ಷಕ- ರಕ್ಷಕ ಸಂಘ ಉಪಾಧ್ಯಕ್ಷರಾಗಿ ಶರ್ಮಿಳಾ ಸಿಕ್ವೇರಾ ಆಯ್ಕೆಯಾದರು. ದೈಹಿಕ ಶಿಕ್ಷಣ ಉಪನ್ಯಾಸಕ ಅಲ್ವಿನ್ ಮಿರಾಂದ ಮತ್ತಿತರರಿದ್ದರು. ಕಾಲೇಜಿನ ಪ್ರಾಚಾರ‍್ಯ ಡೆಸ್ಮಂಡ್ ಡಿಮೆಲ್ಲೋ ಸ್ವಾಗತಿಸಿ, ಪ್ರಸ್ತಾವನೆಗೈದರು.ಗಣಿತಶಾಸ್ತ್ರ ಉಪನ್ಯಾಸಕ ಲಾರೆನ್ಸ್ ಸಿಕ್ವೇರಾ ಕಾರ್ಯಕ್ರಮ ನಿರೂಪಿಸಿದರು. ಜೀವಶಾಸ್ತ್ರ ಉಪನ್ಯಾಸಕಿ ರೇಖಾ ವಂದಿಸಿದರು.