ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕ ಅನುಚಿತ ವರ್ತನೆ

| Published : Mar 07 2025, 11:48 PM IST

ಸಾರಾಂಶ

ಹೊಳೆನರಸೀಪುರ ತಾಲೂಕಿನ ಮಲ್ಲಪ್ಪನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪ್ರೇಮ್‌ ಕುಮಾರ್ ಅವರು ವಿದ್ಯಾರ್ಥಿನಿಯರ ಜತೆಗೆ ಅನುಚಿತವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಮುಂದಿನ ಆದೇಶದವರೆಗೆ ಅಮಾನತುಮಾಡಲಾಗಿದೆ. ಸಹ ಶಿಕ್ಷಕ ಪ್ರೇಮ್‌ ಕುಮಾರ ಅವರ ಅನುಚಿತ ವರ್ತನೆ ಬಗ್ಗೆ ವಿದ್ಯಾರ್ಥಿನಿಯರು ಪೋಷಕರಿಗೆ ತಿಳಿಸಿದ್ದಾರೆ. ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡರಿಗೆ ಲಿಖಿತ ದೂರು ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರತಾಲೂಕಿನ ಮಲ್ಲಪ್ಪನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪ್ರೇಮ್‌ ಕುಮಾರ್ ಅವರು ವಿದ್ಯಾರ್ಥಿನಿಯರ ಜತೆಗೆ ಅನುಚಿತವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಮುಂದಿನ ಆದೇಶದವರೆಗೆ ಅಮಾನತುಮಾಡಲಾಗಿದೆ.

ತಾಲೂಕಿನ ಮಲ್ಲಪ್ಪನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪ್ರೇಮ್‌ ಕುಮಾರ ಅವರ ಅನುಚಿತ ವರ್ತನೆ ಬಗ್ಗೆ ವಿದ್ಯಾರ್ಥಿನಿಯರು ಪೋಷಕರಿಗೆ ತಿಳಿಸಿದ್ದಾರೆ. ಪೋಷಕರು ಕಾನೂನು ಕೈಗೆ ತೆಗೆದುಕೊಳ್ಳದೇ ಎಸ್ಡಿಎಂಸಿ ಅಧ್ಯಕ್ಷ ನವೀನ್ ಅವರಿಗೆ ಸಂಪೂರ್ಣ ಮಾಹಿತಿ ನೀಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡರಿಗೆ ಲಿಖಿತ ದೂರು ನೀಡಿದ್ದಾರೆ. ದೂರಿನ ಅನ್ವಯ ಬಿಇಒ ಅವರು ಇಲಾಖೆಯ ಮಾರ್ಗಸೂಚಿ ಅನುಸಾರ ತನಿಖೆ ನಡೆಸಿದ್ದಾರೆ. ಈ ಪ್ರಕರಣದ ಸಂದರ್ಭ, ಸನ್ನಿವೇಶಗಳನ್ನು ಹಾಗೂ ಊರಿನ ಎಸ್‌ಡಿಎಂಸಿ ಅಧ್ಯಕ್ಷ ಮತ್ತು ಸದಸ್ಯರು, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮತ್ತು ಶಿಕ್ಷಣ ಸಂಯೋಜಕರು ನೀಡಿದ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ಆರೋಪಿತ ಸಹ ಶಿಕ್ಷಕ ದುರ್ನಡತೆಗಳನ್ನು ಎಸಗಿರುವುದು ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸೇವೆಯಿಂದ ಅಮಾನತುಗೊಳಿಸಿ, ಆದೇಶ ನೀಡಲಾಗಿದೆ.