ಪುನರೂರು ಪ್ರತಿಷ್ಠಾನದಿಂದ ಶಿಕ್ಷಕರ ದಿನಾಚರಣೆ, ಸನ್ಮಾನ

| Published : Sep 10 2024, 01:32 AM IST / Updated: Sep 10 2024, 01:33 AM IST

ಪುನರೂರು ಪ್ರತಿಷ್ಠಾನದಿಂದ ಶಿಕ್ಷಕರ ದಿನಾಚರಣೆ, ಸನ್ಮಾನ
Share this Article
  • FB
  • TW
  • Linkdin
  • Email

ಸಾರಾಂಶ

ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್‌ ಸಭಾಂಗಣದಲ್ಲಿ ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜನ ವಿಕಾಸ ಸಮಿತಿ ಮೂಲ್ಕಿಯ ಸಹಕಾರದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕ ಸಪರ್ಯಾ- 2024 ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಮೂಲ್ಕಿ

ನಮ್ಮ ಜೀವನಕ್ಕೆ ಭದ್ರ ಬುನಾದಿ ಹಾಕಿಕೊಡುವವರು ಶಿಕ್ಷಕರು. ವಿಕಲಚೇತನ ಮಕ್ಕಳೊಂದಿಗೆ ಮಕ್ಕಳಾಗಿ ಅವರಲ್ಲಿ ಸ್ಫೂರ್ತಿ ತುಂಬಿ ಸಮಾಜದ ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುವಂತಹ ಶಿಕ್ಷಕರನ್ನು ಗೌರವಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಪುನರೂರು ಪ್ರತಿಷ್ಠಾನದ ಗೌರವ ಅಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು.

ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್‌ ಸಭಾಂಗಣದಲ್ಲಿ ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜನ ವಿಕಾಸ ಸಮಿತಿ ಮೂಲ್ಕಿಯ ಸಹಕಾರದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಜರುಗಿದ ಶಿಕ್ಷಕ ಸಪರ್ಯಾ- 2024 ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್‌ನ ಮುಖ್ಯ ಶಿಕ್ಷಕಿ ರೇಷ್ಮಾ ಮರಿಯಾ ಮಾರ್ಟಿಸ್ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಶಿಕ್ಷಕರನ್ನು ಹಾಗೂ ಶಿಕ್ಷಕೇತರ ಸಿಬ್ಬಂದಿಯನ್ನು ಗೌರವಿಸಲಾಯಿತು.

ಮೂಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ಪೌಲ್ ರೋಲ್ಫಿ ಡಿಕೋಸ್ತಾ, ಬಜಪೆ ರೋಟರಿ ಕ್ಲಬ್ ಅಧ್ಯಕ್ಷ ಜೋಕಿಮ್ ಡಿಕೋಸ್ತಾ, ಪುನರೂರು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶ್ರೇಯಾ ಪುನರೂರು, ಜನವಿಕಾಸ ಸಮಿತಿ ಮೂಲ್ಕಿಯ ಅಧ್ಯಕ್ಷ ಶಶಿಕರ ಕೆರೆಕಾಡು, ಸದಸ್ಯರಾದ ಜೀವನ್ ಶೆಟ್ಟಿ ಅಂಗರಗುಡ್ಡೆ, ಶೋಭಾ ರಾವ್, ಅಕ್ಷತಾ ಶೆಟ್ಟಿ, ಪ್ರಾಣೇಶ್ ಭಟ್ ದೇಂದಡ್ಕ, ಶಾಲಾ ಪಾಲನ ಸಮಿತಿಯ ಕಾರ್ಯದರ್ಶಿ ಶೈಲಾ ಸಿಕ್ವೇರಾ, ಸದಸ್ಯ ಜೋಸೆಫ್ ಕ್ವಾಡ್ರಸ್ ಇದ್ದರು.

ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಸ್ವಾಗತಿಸಿದರು. ಗೀತಾ ಶೆಟ್ಟಿ ವಂದಿಸಿದರು. ಶಿಮಂತೂರಿನ ಶ್ರೀ ಶಾರದ ಸೆಂಟ್ರಲ್ ಸ್ಕೂಲ್ ಪ್ರಾಂಶುಪಾಲ ಜಿತೇಂದ್ರ ವಿ. ರಾವ್ ಹೆಜಮಾಡಿ ನಿರೂಪಿಸಿದರು.