ಫಲಿತಾಂಶ ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಅಪಾರ: ಶಾಸಕ ತುನ್ನೂರು

| Published : Feb 19 2024, 01:36 AM IST

ಫಲಿತಾಂಶ ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಅಪಾರ: ಶಾಸಕ ತುನ್ನೂರು
Share this Article
  • FB
  • TW
  • Linkdin
  • Email

ಸಾರಾಂಶ

ವಡಗೇರಾ ಪ್ರೌಢ ಶಾಲಾವರಣದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆದ ಪರೀಕ್ಷಾ ಕುರಿತು ವಿಶೇಷ ಕಾರ್ಯಾಗಾರ ಮತ್ತು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಮಕ್ಕಳ ಫಲಿತಾಂಶ ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯವಾಗಿದೆ ಎಂದು ಯಾದಗಿರಿ ಮತಕ್ಷೇತ್ರದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.

ಜಿಲ್ಲೆಯ ವಡಗೇರಾ ಪಟ್ಟಣದ ಪ್ರೌಢ ಶಾಲಾವರಣದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ವಡಗೇರಾ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಹಯೋಗದಲ್ಲಿ ವಡಗೇರಾ ತಾಲೂಕಿನ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಕುರಿತು ನಡೆದ ವಿಶೇಷ ಕಾರ್ಯಾಗಾರ ಮತ್ತು ರಸಪ್ರಶ್ನೆ ಕಾರ್ಯಕ್ರಮವನ್ನು ಬಸವಣ್ಣನವರ ಭಾವಚಿತ್ರಕ್ಕೆ ಪೂಜಿ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ. ವಿದ್ಯಾರ್ಥಿಗಳು ಹೆಚ್ಚು ಓದಿನ ಕಡೆ ಗಮನ ಕೊಟ್ಟು ಪರೀಕ್ಷಾ ಫಲಿತಾಂಶದಲ್ಲಿ ಹೆಚ್ಚು ಅಂಕ ಗಳಿಸಿ ಶಾಲೆ, ತಾಲೂಕು ಹಾಗೂ ಜಿಲ್ಲೆಗೂ ಕೀರ್ತಿ ತರುವಂತೆ ಹೇಳಿದರು.

ತಾಪಂ ಇಒ ಮಲ್ಲಿಕಾರ್ಜುನ ಸಂಗ್ವಾರ ಮಾತನಾಡಿ, ಈ ಬಾರಿ ನಮ್ಮ ತಾಲೂಕಿನಲ್ಲಿ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಳಕ್ಕಾಗಿ ನುರಿತ ಶಿಕ್ಷಣ ತಜ್ಞರಿಂದ ತರಬೇತಿ ರಸಪ್ರಶ್ನೆ ಕಾರ್ಯಾಗಾರ ಹಮ್ಮಿಕೊಂಡಿದ್ದೇವೆ ಎಂದರು.

ಶಿಕ್ಷಣ ವ್ಯಕ್ತಿ ವಿಕಾಸನ ತರಬೇತಿದಾರ ಮತ್ತು ಗಣಿತ ಪಂಡಿತ ಬಸವರಾಜ ಶಂಕರ್ ಉಮ್ರಾಣಿ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಗಣಿತ ವಿಷಯ ಮತ್ತು ಪರೀಕ್ಷೆಯ ಭಯ ಬೇಡ. ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಬೇಕು. ಹೆಚ್ಚು ಸಮಯವನ್ನು ಓದಿಗಾಗಿ ಮೀಸಲಿಟ್ಟು ಉತ್ತಮ ಫಲಿತಾಂಶ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಈ ವೇಳೆ ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿ ಶೀಬಾ ಜಿಲಿಯನ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್ ರಾಠೋಡ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮರೆಪ್ಪ , ನೀತಿ ಆಯೋಗದ ಮಹತ್ವಾಕಾಂಕ್ಷಿ ಹಾಗೂ ತಾಲೂಕು ಸಂಯೋಜಕಿ ಕಾವೇರಿ ಯಾದಗಿರಿ, ಸಿಆರ್‌ಪಿ ಶಾಂತಕುಮಾರ ಇತರರರಿದ್ದರು.