ವಿದ್ಯಾರ್ಥಿ ಜೀವನದ ತಳಹದಿಗೆ ಶಿಕ್ಷಕರ ಪಾತ್ರ ಗಣನೀಯವಾದದ್ದು: ಡಾ.ಮಾಧವ ಪೈ

| Published : Sep 09 2024, 01:38 AM IST

ವಿದ್ಯಾರ್ಥಿ ಜೀವನದ ತಳಹದಿಗೆ ಶಿಕ್ಷಕರ ಪಾತ್ರ ಗಣನೀಯವಾದದ್ದು: ಡಾ.ಮಾಧವ ಪೈ
Share this Article
  • FB
  • TW
  • Linkdin
  • Email

ಸಾರಾಂಶ

ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲಗಳ ನೇತೃತ್ವದಲ್ಲಿ ವಿಪ್ರ ಮಹಿಳಾ ಸಾಲಿಗ್ರಾಮ ವಲಯದ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆ, ಗುರುವಂದನೆ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕೋಟ

ವಿದ್ಯಾರ್ಥಿಗಳ ಸಾಧನೆ, ಅವರ ಜೀವನದ ತಳಹದಿ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು. ವಿದ್ಯಾರ್ಥಿಗಳು ತಮ್ಮನ್ನು ತಿದ್ದಿತೀಡಿದ ಗುರುಪರಂಪರೆಯನ್ನು ಗೌರವಿಸುವ ಮೂಲಕ ಸಂಸ್ಕಾರ ಭರಿತ ಜೀವನವನ್ನು ಸಾಗಿಸಬೇಕು ಎಂದು ಕೋಟ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಾಧವ ಪೈ ಅಭಿಪ್ರಾಯಪಟ್ಟರು.ಅವರು ಇಲ್ಲಿನ ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲಗಳ ನೇತೃತ್ವದಲ್ಲಿ ವಿಪ್ರ ಮಹಿಳಾ ಸಾಲಿಗ್ರಾಮ ವಲಯದ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆ, ಗುರುವಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಕೆ.ರಾಜಾರಾಮ್ ಐತಾಳ್ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಗಿಡ ನಡುವ ಮೂಲಕ ಹಸಿರು ಪರಿಸರ ಜಾಗೃತಿ ಮೆರೆಯಲಾಯಿತು.ಸಭೆಯ ಅಧ್ಯಕ್ಷತೆಯನ್ನು ಕೋಟ ಪಂಚವರ್ಣ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ರೋಟರಿ ಕ್ಲಬ್ ಹಂಗಾರಕಟ್ಟೆ ಮಾಜಿ ಅಧ್ಯಕ್ಷ ಚಂದ್ರ ನಾಯರಿ, ಸಾಮಾಜಿಕ ಕಾರ್ಯಕರ್ತ ಕೋಟ ಶ್ರೀಕಾಂತ್ ಶೆಣೈ, ವಿಪ್ರ ಮಹಿಳಾ ಸಾಲಿಗ್ರಾಮ ವಲಯ ಸಂಚಾಲಕಿ ವನೀತಾ ಉಪಾಧ್ಯಾ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.ಮಹಿಳಾ ಮಂಡಲದ ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿದರು. ಸನ್ಮಾನಪತ್ರವನ್ನು ಸದಸ್ಯ ಸಂತೋಷ್ ಕುಮಾರ್ ಕೋಟ ವಾಚಿಸಿದರು. ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ನಿರೂಪಿಸಿದರು. ಸದಸ್ಯ ಶಶಿಧರ ತಿಂಗಳಾಯ ವಂದಿಸಿದರು.