ನರಸಿಂಹರಾಜಪುರ ಕಳೆದ 16 ವರ್ಷಗಳಿಂದ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ಶಿಕ್ಷಕಿ ಶೈಲಾ ಕ್ರಿಯಾಶೀಲರಾಗಿ ಕೆಲಸ ಮಾಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನ ಅಂಜುಮ್ ತಿಳಿಸಿದರು.

- ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ವರ್ಗಾವಣೆಗೊಂಡ ಶಿಕ್ಷಕಿಗೆ ಬೀಳ್ಕೊಡುಗೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಕಳೆದ 16 ವರ್ಷಗಳಿಂದ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ಶಿಕ್ಷಕಿ ಶೈಲಾ ಕ್ರಿಯಾಶೀಲರಾಗಿ ಕೆಲಸ ಮಾಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನ ಅಂಜುಮ್ ತಿಳಿಸಿದರು.

ಬುಧವಾರ ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲಿನ ಪ್ರಾಥಮಿಕ ಶಾಲೆಯಲ್ಲಿ ಅಳಲಗೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ಕೆ.ಶೈಲಾ ಅವರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಸಭೆ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಪಬ್ಲಿಕ್ ಸ್ಕೂಲಿನ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಲಕ್ಷ್ಮಣ ಶೆಟ್ಟಿ ಮಾತನಾಡಿ, ವರ್ಗಾ ವಣೆಗೊಂಡ ಶಿಕ್ಷಕಿ ಕೆ.ಶೈಲಾ ಅವರು ಮಕ್ಕಳು, ಪೋಷಕರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡು ಕೆಲಸ ಮಾಡಿದ್ದಾರೆ ಎಂದರು.

ತಾಲೂಕು ಭಡ್ತಿ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಅಶೋಕ್ ಮಾತನಾಡಿ, ಇಬ್ಬರು ಶಿಕ್ಷಕರು ತಾಲೂಕಿನ ಒಳಗೆ ಪರಸ್ಪರ ವರ್ಗಾವಣೆ ಮಾಡಿಕೊಂಡಿದ್ದು ಅಳಲಗೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ನಂಜುಂಡಪ್ಪ ಕೆಪಿಎಸ್ ಪ್ರಾಥಮಿಕ ಶಾಲೆಗೆ ವರ್ಗಾವಣೆಯಾಗಿ ಬಂದಿದ್ದು ಕೆಪಿಎಸ್ ಶಾಲೆ ಶಿಕ್ಷಕಿ ಕೆ.ಶೈಲಾ ಅಳಲಗೆರೆ ಶಾಲೆಗೆ ವರ್ಗಾವಣೆ ಗೊಂಡಿದ್ದಾರೆ ಎಂದರು.ಕೆಪಿಎಸ್ ಶಾಲೆ ಎಸ್.ಡಿ.ಎಂ.ಸಿ.ಉಪಾಧ್ಯಕ್ಷ ಉದಯ ಗಿಲ್ಲಿ ಮಾತನಾಡಿದರು.

ಸಭೆಯಲ್ಲಿ ಕೆಪಿಸ್ ನ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಅಬೂಬಕರ್, ಕಟ್ಟಡ ಖಾತ್ರಿ ಯೋಜನೆ ಅಧ್ಯಕ್ಷ ಸಿಗ್ಬತ್ ಉಲ್ಲ, ಕೆಪಿಎಸ್ ಉಪ ಪ್ರಾಂಶುಪಾಲ ರುದ್ರಪ್ಪ, ಶಿಕ್ಷಣ ಇಲಾಖೆಯ ಬಿ.ಐ.ಆರ್.ಟಿ ತಿಮ್ಮೇಶ್, ಶಾಲೆಯ ಶಿಕ್ಷಕರು ಇದ್ದರು.