ಶಿಕ್ಷಕರ ತರಬೇತಿ ಕಾರ‍್ಯಕ್ರಮ ಆಯೋಜನೆ

| Published : Nov 18 2024, 12:04 AM IST

ಸಾರಾಂಶ

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಬೇಲೂರು ತಾಲೂಕು ಪ್ರಥಮ ಸ್ಥಾನ ಪಡೆಯಲು ಎಲ್ಲಾ ಶಾಲೆಗಳ ಶಿಕ್ಷಕರು ಕಾರ್ಯೋನ್ಮುಖರಾಗಬೇಕು. ಶಿಕ್ಷಕರ ಜವಾಬ್ದಾರಿ ಮಹತ್ತರವಾಗಿದ್ದು ಸಮಾಜವನ್ನು ತಿದ್ದಿ ಭವಿಷ್ಯದ ಉತ್ತಮ ಪ್ರಜೆಗಳನ್ನು ರೂಪಿಸಬೇಕು. ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಮಕ್ಕಳಿಗೆ ಕಲಿಸುವ ಮನೋಭಾವವನ್ನು ಶಿಕ್ಷಕರು ಹೊಂದಿರಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ತಿಳಿಸಿದರು. ಎಸ್ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸುವ ಸಂಬಂಧ ತಾಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪೌಢಶಾಲಾ ಕೋರ್‌ ವಿಷಯ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಬೇಲೂರು

ಎಸ್ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸುವ ಸಂಬಂಧ ತಾಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪೌಢಶಾಲಾ ಕೋರ್‌ ವಿಷಯ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮವನ್ನು ಶ್ರೀ ಚನ್ನಕೇಶವಸ್ವಾಮಿ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಚ್.ಕೆ.ಸುರೇಶ್, ಕಳೆದ ಶೈಕ್ಷಣಿಕ ಸಾಲಿನ ಫಲಿತಾಂಶದಲ್ಲಿ ಬೇಲೂರು ತಾಲೂಕು ಜಿಲ್ಲೆಗೆ ಮೂರನೇ ಸ್ಥಾನ ಪಡೆದಿತ್ತು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಬೇಲೂರು ತಾಲೂಕು ಪ್ರಥಮ ಸ್ಥಾನ ಪಡೆಯಲು ಎಲ್ಲಾ ಶಾಲೆಗಳ ಶಿಕ್ಷಕರು ಕಾರ್ಯೋನ್ಮುಖರಾಗಬೇಕು. ಶಿಕ್ಷಕರ ಜವಾಬ್ದಾರಿ ಮಹತ್ತರವಾಗಿದ್ದು ಸಮಾಜವನ್ನು ತಿದ್ದಿ ಭವಿಷ್ಯದ ಉತ್ತಮ ಪ್ರಜೆಗಳನ್ನು ರೂಪಿಸಬೇಕು. ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಮಕ್ಕಳಿಗೆ ಕಲಿಸುವ ಮನೋಭಾವವನ್ನು ಶಿಕ್ಷಕರು ಹೊಂದಿರಬೇಕು ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಮಾತನಾಡಿ, ಶಿಕ್ಷಕರು ವೃತ್ತಿಪರತೆ ಮೈಗೂಡಿಸಿಕೊಂಡು ಕರ್ತವ್ಯ ನಿರ್ವಹಿಸುವಂತಾಗಬೇಕು. ಒಬ್ಬ ವೈದ್ಯ ರೋಗಿಯನ್ನು, ವಕೀಲ ತಮ್ಮ ಕಕ್ಷಿದಾರರನ್ನು ರಕ್ಷಿಸಲು ಯಾವ ರೀತಿ ನಿರಂತರವಾಗಿ ಪ್ರಯತ್ನಿಸುತ್ತಾರೆಯೋ ಅದೇ ರೀತಿ ಶಿಕ್ಷಕರು ಮಕ್ಕಳ ಶ್ರೇಯೋಭಿವೃದ್ಧಿಗೆ ಹಾಗೂ ಮುಂದಿನ ತರಗತಿಗಳಿಗೆ ಉತ್ತೀರ್ಣಗೊಳಿಸಲು ಶ್ರಮಿಸಬೇಕು ಎಂದರು.

ಕಾರ‍್ಯಕ್ರಮದಲ್ಲಿ ವೆಂಕಟೇಶ್, ಹೇಮಂತ್ ಕುಮಾರ್, ಶಿವಮರಿಯಪ್ಪ, ಧನಂಜಯ , ಜಗದೀಶ,(ಟಿ.ಪಿ.ಇ.ಒ),ಗೋಪಾಲ್ ಹಾಗೂ ಇನ್ನಿತರರು ಇದ್ದರು.