ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರನ್ನು ಶಿಕ್ಷಕ ಮತದಾರರು ಬೆಂಬಲಿಸುವಂತೆ ಮುಖಂಡ ಹಾಗೂ ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಮನವಿ ಮಾಡಿದರು.ತಾಲೂಕಿನ ಹರಿಹರಪುರ, ಮಡುವಿನಕೋಡಿ, ಗವೀಮಠ, ಬಳ್ಳೇಕೆರೆ, ವಿಠಲಾಪುರ, ಗಂಜೀಗೆರೆ, ಸೋಮನಹಳ್ಳಿ, ಆಲಂಬಾಡಿ ಕಾವಲು, ಜೈನಹಳ್ಳಿ, ಅಕ್ಕಿಹೆಬ್ಬಾಳು, ಬೀರವಳ್ಳಿ, ಆಲೇನಹಳ್ಳಿ, ಮಂದಗೆರೆ ಮತ್ತು ತೇಗನಹಳ್ಳಿಯ ಆಶೀರ್ವಾದ ಶಾಲೆ ಸೇರಿದಂತೆ ಹಲವು ಗ್ರಾಮಗಳ ಶಾಲಾ ಕಾಲೇಜುಗಳಲ್ಲಿ ಶಿಕ್ಷಕ ಮತದಾರರನ್ನು ಭೇಟಿ ಮಾಡಿ ಮತಯಾಚಿದರು.
ಮರಿತಿಬ್ಬೇಗೌಡರು ಕಳೆದ 4 ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಶಿಕ್ಷಕರ ಪರ ಕೆಲಸ ಮಾಡಿದ್ದಾರೆ. ಈಗ ಕಾಂಗ್ರೆಸ್ ನಿಂದ ಕಣಕ್ಕೆ ಇಳಿದಿದ್ದಾರೆ. ಪರಿಷತ್ ಮತ್ತು ಹೊರಗೆ ಮರಿತಿಬ್ಬೇಗೌಡರು ಶಿಕ್ಷಕರ ಪರವಾಗಿ ಹೋರಾಟ ನಡೆಸಿದ್ದಾರೆ ಎಂದರು.ಮೈತ್ರಿ ಅಭ್ಯರ್ಥಿ ಕೆ.ವಿವೇವಾಕನಂದರಿಗೆ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕನಿಷ್ಠ ಅರಿವೂ ಇಲ್ಲ. ಇವರಿಗೆ ಪ್ರಜ್ಞಾವಂತ ಶಿಕ್ಷಕ ಸಮುದಾಯ ಮತ ಚಲಾಯಿಸಿದರೆ ಶಾಸನ ಸಭೆಯಲ್ಲಿ ಶಿಕ್ಷಕರ ಧ್ವನಿ ಇಲ್ಲದಂತಾಗುತ್ತದೆ ಎಂದು ಎಚ್ಚರಿಸಿದರು.
ಮರಿತಿಬ್ಬೇಗೌಡರು ಸಭಾಪತಿ ಸ್ಥಾನದಲ್ಲಿದ್ದಾಗಲೂ ತಮ್ಮ ಹೋರಾಟದ ಮನಸ್ಥಿತಿ ಬದಲಿಸಿಕೊಳ್ಳದೆ ಶಿಕ್ಷಕ ಸಮುದಾಯದ ವೇತನ ತಾರತಮ್ಯ ನೀತಿ, ಬಡ್ತಿ ಉಪನ್ಯಾಸಕರ ಸಮಸ್ಯೆ, ಖಾಸಗಿ ಶಾಲಾ ಶಿಕ್ಷಕರ ಸಮಸ್ಯೆ, ಅತಿಥಿ ಉಪನ್ಯಾಸಕರ ಸಮಸ್ಯೆ ಮುಂತಾದ ಶಿಕ್ಷಣ ಕ್ಷೇತ್ರದ ಹತ್ತು ಹಲವು ಸಮಸ್ಯೆಗಳಿಗೆ ಪ್ರಭಲ ಧ್ವನಿಯಾಗಿ ಕೆಲಸ ಮಾಡಿದ್ದಾರೆ ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು ಮರಿತಿಬ್ಬೇಗೌಡ ಮರು ಆಯ್ಕೆಯಾದರೆ ಶಿಕ್ಷಕರ ಸಮಸ್ಯೆ ಬಗೆಹರಿಸಲು ಸುಲುಭವಾಗಲಿದೆ. ಶಿಕ್ಷಕ ಸಮುದಾಯ ಹೋರಾಟಗಾರ ಮರಿತಿಬ್ಬೇಗೌಡರಿಗೆ ತಮ್ಮ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಮರು ಆಯ್ಕೆ ಮಾಡುವಂತೆ ಮನವಿ ಮಾಡಿದರು.
ಈ ವೇಳೆ ನಿವೃತ್ತ ಪ್ರಾಂಶುಪಾಲ ರಾಜಯ್ಯ ಸೇರಿದಂತೆ ಹಲವರಿದ್ದರು.ವಿಧಾನ ಪರಿಷತ್ ಚುನಾವಣೆ: ಜೂ.3ರಂದು ವಿಶೇಷ ಸಾಂದರ್ಭಿಕ ರಜೆಕನ್ನಡಪ್ರಭ ವಾರ್ತೆ ಮಂಡ್ಯಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರರ ಕ್ಷೇತ್ರ, ಬೆಂಗಳೂರು ಪದವೀದರ ಕ್ಷೇತ್ರ, ಈಶಾನ್ಯ ಪದವೀದರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಂದ ನಡೆಯುವ ದ್ವೈವಾರ್ಷಿಕ ಚುನಾವಣಾ ಮತದಾನವು ಜೂ.3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಕೋರಿದೆ.ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕ್‌ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಷ್‌ಮೆಂಟ್‌ಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಮತದಾರರಿಗೆ ಜೂನ್ 3 ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸರ್ಕಾರದ ಆಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.