ಹಾದಿ ತಪ್ಪುವ ಮಕ್ಕಳಿಗೆ ಸರಿಯಾದ ದಾರಿ ತೋರಿ ಸುಂದರ ದೇಶ ಕಟ್ಟುವ ಕೆಲಸವನ್ನು ಶಿಕ್ಷಕರು ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಅವರಿಗಾಗಿ ಜಯಂತಿ ಆಚರಣೆ ಅರ್ಥಪೂರ್ಣ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ಹಾದಿ ತಪ್ಪುವ ಮಕ್ಕಳಿಗೆ ಸರಿಯಾದ ದಾರಿ ತೋರಿ ಸುಂದರ ದೇಶ ಕಟ್ಟುವ ಕೆಲಸವನ್ನು ಶಿಕ್ಷಕರು ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಅವರಿಗಾಗಿ ಜಯಂತಿ ಆಚರಣೆ ಅರ್ಥಪೂರ್ಣ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ ವ್ಯಕ್ತಪಡಿಸಿದರು.

ಗುಬ್ಬಿ ಹೊರವಲಯದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಶಿಕ್ಷಣ ಇಲಾಖೆ ಆಯೋಜನೆ ಮಾಡಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 139ನೇ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,

ಸಮಾಜದಲ್ಲಿ ಶೋಷಣೆಗೆ ಒಳಪಟ್ಟ ಅಹಿಂದ ವರ್ಗದ ಮಕ್ಕಳು ಪ್ರಸ್ತುತ ದಿನಮಾನದಲ್ಲಿ ಶೇ. 97ರಷ್ಟು ಅಂಕ ಗಳಿಕೆಯಲ್ಲಿ ಕಾಣಿಸಿಕೊಂಡಿರುವುದು ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ ಎನ್ನಬಹುದು. ಇದರ ಸಾಧನೆ ಶಿಕ್ಷಣ ಇಲಾಖೆಗೆ ಸಂದುತ್ತದೆ. ಎಲ್ಲಾ ರಂಗಗಳೂ ಭ್ರಷ್ಟಾಚಾರದಿಂದ ತುಂಬಿವೆ. ಇದ್ದಿದ್ದರಲ್ಲಿ ಶಿಕ್ಷಣ ಇಲಾಖೆಯು ಕೊಂಚ ಸಮಾಧಾನ ತರುವ ಲಂಚಮುಕ್ತ ರಂಗವಾಗಿದೆ. ಶಿಕ್ಷಣ ಎನ್ನುವುದು ದೇಶದ ಅಭಿವೃದ್ಧಿ. ಶಿಕ್ಷಕ ವರ್ಗ ಉತ್ತಮ ನಾಗರಿಕರನ್ನು ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ತುಮಕೂರು ಹಿರೇಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಶಿಕ್ಷಕ ಕೇವಲ ವೃತ್ತಿಯಾಗದೆ ಪ್ರವೃತ್ತಿಯಾಗಿ ಸಮಾಜ ಕಟ್ಟಬೇಕು. ಅಪಾರ ಗೌರವ ಸಿಗುವ ಶಿಕ್ಷಕ ಹುದ್ದೆಗೆ ತನ್ನದೇ ಆದ ವಿಶಿಷ್ಟ ಬೆಲೆ ಇದೆ. ಈಗಿನ ಕಾಲದಲ್ಲಿ ಎಲ್ಲಾ ವರ್ಗದ ಜನರಿಗೆ ಶಿಕ್ಷಣ ಸಿಕ್ಕಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಗುಬ್ಬಿ ವೀರಣ್ಣ ಟ್ರಸ್ಟ್ ಸದಸ್ಯ ಲಕ್ಷ್ಮಣ್ ದಾಸ್, ಜಿ.ಆರ್.ಶಿವಕುಮಾರ್, ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಬಿಆರ್‌ಸಿ ಮಧುಸೂದನ್, ಜಗದೀಶ್ ಸೇರಿದಂತೆ ಇತರರಿದ್ದರು.