ತಾಲೂಕಿನ ಮುಸ್ತಾಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಗ್ರಾಮಸ್ಥರಿಂದ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶಿಕ್ಷಕರು ಸಮಾಜದ ಶಿಲ್ಪಿಗಳಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಅಕ್ಷರ ಜ್ಞಾನದ ಜತೆಗೆ ಸಂಸ್ಕಾರ, ಶಿಸ್ತು ಹಾಗೂ ಜೀವನ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸುವ ಶಿಕ್ಷಕರ ಸೇವೆ ಸದಾ ಸ್ಮರಣೀಯ ಎಂದು ಶಿಕ್ಷಣ ಚಿಂತಕ ಶರಣಬಸಪ್ಪ ಕಾರೆಮುಂಗೆ ಹೇಳಿದರು.
ಕನ್ನಡಪ್ರಭ ವಾರ್ತೆ ಔರಾದ್
ತಾಲೂಕಿನ ಮುಸ್ತಾಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಗ್ರಾಮಸ್ಥರಿಂದ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶಿಕ್ಷಕರು ಸಮಾಜದ ಶಿಲ್ಪಿಗಳಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಅಕ್ಷರ ಜ್ಞಾನದ ಜತೆಗೆ ಸಂಸ್ಕಾರ, ಶಿಸ್ತು ಹಾಗೂ ಜೀವನ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸುವ ಶಿಕ್ಷಕರ ಸೇವೆ ಸದಾ ಸ್ಮರಣೀಯ ಎಂದು ಶಿಕ್ಷಣ ಚಿಂತಕ ಶರಣಬಸಪ್ಪ ಕಾರೆಮುಂಗೆ ಹೇಳಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಅದಕ್ಕೆ ಸೂಕ್ತ ಮಾರ್ಗದರ್ಶನ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕರನ್ನು ಗೌರವಿಸುವ ಮೂಲಕ ಅವರ ಸೇವೆಗೆ ಕೃತಜ್ಞತೆ ಸಲ್ಲಿಸುವುದು ಸಮಾಜದ ಕರ್ತವ್ಯವಾಗಿದೆ ಎಂದರು.
ಸಾಹಿತಿ ರಮೇಶ ಬಿರಾದಾರ್ ಮಾತನಾಡಿ, ಗುರು-ಶಿಷ್ಯ ಪರಂಪರೆಗೆ ನಮ್ಮ ಸಮಾಜದಲ್ಲಿ ವಿಶೇಷ ಸ್ಥಾನವಿದೆ. ವಿದ್ಯಾರ್ಥಿಗಳ ಬದುಕಿಗೆ ಅಕ್ಷರದ ಜತೆಗೆ ಮೌಲ್ಯಗಳನ್ನು ತುಂಬುವ ಶಿಕ್ಷಕರ ಸೇವೆ ಸದಾ ಸ್ಮರಣೀಯ. ಶಿಕ್ಷಕರನ್ನು ಗೌರವಿಸುವ ಮೂಲಕ ಅವರ ನಿಸವಾರ್ಥ ಸೇವೆಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿ ದಂತಾಗುತ್ತದೆ ಎಂದರು.ಪತ್ರಕರ್ತರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ದೇಶಮುಖ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳ ಶಿಕ್ಷಕರ ಪರಿಶ್ರಮ ಶ್ಲಾಘನೀಯ. ಶಿಕ್ಷಕರು ಮಕ್ಕಳ ಪ್ರತಿಭೆ ಗುರುತಿಸಿ, ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸುತ್ತಿದ್ದಾರೆ. ಶಿಕ್ಷಕರ ಸೇವೆಗೆ ಸಮಾಜ ಸದಾ ಬೆಂಬಲವಾಗಿ ನಿಲ್ಲಬೇಕು ಎಂದರು.
ಮುಖ್ಯಗುರು ಕಲ್ಲಪ್ಪ ಬೋರಾಳೆ ಪ್ರಾಸ್ತಾವಿಕ ಮಾತನಾಡಿದರು. ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ಮೊಕ್ತೆದಾರ್, ಮುಖಂಡರಾದ ಯಶವಂತ ಪಾಟೀಲ್, ಮಲ್ಲಿಕಾರ್ಜುನ ಬಿರಾದಾರ್, ಬಸವರಾಜ ಕಾಳೆಕರ್, ಶಿಕ್ಷಕರಾದ ಸುನಿತಾ ಬಿರಾದಾರ್, ನಂದಿನಿ ಮೊಕ್ತೆದಾರ್, ಶಿಲ್ಪಾ ಶೇರಿಕಾರ್, ಸುನಿತಾ ಬಿರಾದಾರ್, ಮೀನಾಕ್ಷ್ಮಿ ಶ್ರೀಮಂಗಲೆ ಸೇರಿದಂತೆ ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡರು.ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವ: ಕಾರ್ಯಕ್ರಮದ ಅಂಗವಾಗಿ ಶಾಲೆಯ ಶಿಕ್ಷಕರಾದ ಕಲ್ಲಪ್ಪ ಬೋರಾಳೆ, ಸುನಿತಾ ಬಿರಾದಾರ್, ನಂದಿನಿ ಮೊಕ್ತೆದಾರ್, ಶಿಲ್ಪಾ ಶೇರಿಕಾರ್ ಹಾಗೂ ನವನಾಥ ಹಟಕಾರ್ ಅವರನ್ನು ಚಿನ್ನಮ್ಮ ಕಾಮಶೆಟ್ಟಿ ಮುಸ್ತಾಪುರೆ ಎಜುಕೇಶನಲ್ ಟ್ರಸ್ಟ್ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿಕ್ಷಕರ ಶೈಕ್ಷಣಿಕ ಸೇವೆ ಹಾಗೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಅವರು ಸಲ್ಲಿಸುತ್ತಿರುವ ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಯಿತು.
ಜನಸ್ನೇಹಿ ಸುದ್ದಿ ಪ್ರಶಸ್ತಿ: ಈ ವೇಳೆ ಪತ್ರರ್ತಿ ಸಂಘದ ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ಹಾಗೂ ಪ್ರಧಾನ ಕರ್ಯಿರ್ಶಿಷ ಅನಿಲಕುಮಾರ ದೇಶಮುಖ ಅವರನ್ನು ಶ್ರೀಮತಿ ಚಿನ್ನಮ್ಮ ಕಾಮಶೆಟ್ಟಿ ಮುಸ್ತಾಪುರೆ ಎಜುಕೇಶನಲ್ ಟ್ರಸ್ಟ್ ವತಿಯಿಂದ ಜನಸ್ನೇಹಿ ಸುದ್ದಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.