ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಯನ್ನು ಒತ್ತಾಯಿಸಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶನದಂತೆ ಜ. 8ರಂದು ರಾಜ್ಯದಾದ್ಯಂತ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವಂತೆ ಸಂಘಟನೆಗಳು ಕರೆ ನೀಡಿವೆ. , ಶಿಕ್ಷಕರ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಈ ರೀತಿಯ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ತಿಳಿಸಿದರು. ರಾಜ್ಯ ಸಂಘದ ನಿರ್ದೇಶನವನ್ನು ಪಾಲಿಸಿ ಎಲ್ಲ ಶಿಕ್ಷಕರು ಒಗ್ಗಟ್ಟಿನಿಂದ ಬೆಂಬಲ ಸೂಚಿಸಬೇಕೆಂದು ದ್ಯಾವೇಗೌಡ ಮನವಿ ಮಾಡಿದರು.
ಅರಸೀಕೆರೆ: ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಯನ್ನು ಒತ್ತಾಯಿಸಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶನದಂತೆ ಜ. 8ರಂದು ರಾಜ್ಯದಾದ್ಯಂತ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವಂತೆ ಸಂಘಟನೆಗಳು ಕರೆ ನೀಡಿವೆ.ಈ ಕುರಿತು ಮಾತನಾಡಿದ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ದ್ಯಾವೇಗೌಡ ಹಾಗೂ ಕಾರ್ಯದರ್ಶಿ ಮಹೇಶ್, ಜಿಲ್ಲಾ, ರಾಜ್ಯ ಮತ್ತು ತಾಲೂಕು ಸಂಘಗಳ ಸಂಯುಕ್ತ ನಿರ್ಣಯದಂತೆ ಈ ಹೋರಾಟ ರೂಪುಗೊಂಡಿದ್ದು, ಶಿಕ್ಷಕರ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಈ ರೀತಿಯ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ತಿಳಿಸಿದರು. ರಾಜ್ಯ ಸಂಘದ ನಿರ್ದೇಶನವನ್ನು ಪಾಲಿಸಿ ಎಲ್ಲ ಶಿಕ್ಷಕರು ಒಗ್ಗಟ್ಟಿನಿಂದ ಬೆಂಬಲ ಸೂಚಿಸಬೇಕೆಂದು ಅವರು ಮನವಿ ಮಾಡಿದರು.ಇದೇ ವಿಷಯವಾಗಿ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದ ಮೂರ್ತಿ ಮಾತನಾಡಿ, ಜ. 8ರ ಗುರುವಾರ ಅರಸೀಕೆರೆ ತಾಲೂಕಿನ ಎಲ್ಲಾ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಶಾಲೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮನವಿ ಮಾಡಿದರು. ರಾಷ್ಟ್ರ, ರಾಜ್ಯ, ಹಾಸನ ಜಿಲ್ಲಾ ಹಾಗೂ ತಾಲೂಕು ಸಂಘಗಳ ನಿರ್ಣಯದಂತೆ ಈ ಒಂದು ದಿನದ ಕಪ್ಪುಪಟ್ಟಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಎಲ್ಲ ಶಿಕ್ಷಕರಿಗೆ ಕರೆ ನೀಡಿದರು.