ಉಡುಪಿ ಜಿಲ್ಲೆ ರಾಜ್ಯದ ಪ್ರಥಮ ಸಂಪೂರ್ಣ ಸಾಕ್ಷರತಾ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಈ ಗೌರವಕ್ಕೆ ಜಿಲ್ಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಕೊಡುಗೆ ಅಪಾರವಾಗಿದ್ದು, ನರೇಂದ್ರ ಮೋದಿ ಅವರ ವಿಕಸಿತ ಭಾರತ ನಿರ್ಮಾಣದ ಸಂಕಲ್ಪಕ್ಕೆ ವಿದ್ಯಾರ್ಥಿಗಳೇ ಪ್ರೇರಣೆಯಾಗಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಉಡುಪಿ : ಉಡುಪಿ ಜಿಲ್ಲೆ ರಾಜ್ಯದ ಪ್ರಥಮ ಸಂಪೂರ್ಣ ಸಾಕ್ಷರತಾ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಈ ಗೌರವಕ್ಕೆ ಜಿಲ್ಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಕೊಡುಗೆ ಅಪಾರವಾಗಿದ್ದು, ನರೇಂದ್ರ ಮೋದಿ ಅವರ ವಿಕಸಿತ ಭಾರತ ನಿರ್ಮಾಣದ ಸಂಕಲ್ಪಕ್ಕೆ ವಿದ್ಯಾರ್ಥಿಗಳೇ ಪ್ರೇರಣೆಯಾಗಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ 15 ಲ.ರು. ವೆಚ್ಚದಲ್ಲಿ ಸುಮಾರು 20 ಸಾವಿರ ಪೆನ್ನು ವಿತರಣೆ ಕಾರ್ಯಕ್ರಮಕ್ಕೆ ಕಡೆಕಾರು ಸರ್ಕಾರಿ ಮಾದರಿ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೆನ್ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.
ಶಾಸಕನಾಗಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯಪ್ರವೃತ್ತರಾಗಿದ್ದು, ಶಾಲಾ ಕಾಲೇಜುಗಳ ಮೂಲ ಸೌಕರ್ಯ ಅಭಿವೃದ್ಧಿ, ವಿದ್ಯಾರ್ಥಿ ನಿಲಯ ಹಾಗೂ ಶಿಕ್ಷಣಕ್ಕೆ ಪೂರಕ ವ್ಯವಸ್ಥೆಗಳ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯ ಸಹಕಾರ ನೀಡುವ ಭರವಸೆ ನೀಡಿದರು.ಉಡುಪಿ ಕ್ಷೇತ್ರದ ವಿವಿಧ ಶಾಲೆ ಹಾಗೂ ಕಾಲೇಜುಗಳಿಗೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ತೆರಳಿ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ ಮಾಡಿ ಶುಭ ಹಾರೈಸಿದರು.
ಸ್ಥಳೀಯ ಮುಖಂಡರಾದ ರಘುನಾಥ ಕೋಟ್ಯಾನ್, ಗಂಗಾಧರ ಜಿ., ಪ್ರದೀಪ್ ಚಂದ್ರ ಕುತ್ಪಾಡಿ, ಸುನೀಲ್ ಸಾಲ್ಯಾನ್, ಶೇಖರ್ ಅಂಚನ್, ದೀಪಕ್ ಪುತ್ರನ್, ಜಯಕರ ಸನಿಲ್, ನಂದ ಕುಮಾರ್, ವನಜ ಜಯಕರ್, ವಿನೋದಿನಿ, ಅರುಣ್ ಕಡೆಕಾರ್, ಅಶೋಕ್ ಪಾಲನ್, ಶಾಲೆಯ ಮುಖ್ಯ ಶಿಕ್ಷಕಿ ವನಜಾಕ್ಷಿ ಇದ್ದರು.